Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...