Homeಮುಖಪುಟರೇವಂತ್ ರೆಡ್ಡಿ ಸೂಚನೆ ಮೇರೆಗೆ ಕಾಂಗ್ರೆಸ್ ಸಂಸದರು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ: ಬಿಆರ್‌ಎಸ್‌...

ರೇವಂತ್ ರೆಡ್ಡಿ ಸೂಚನೆ ಮೇರೆಗೆ ಕಾಂಗ್ರೆಸ್ ಸಂಸದರು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ: ಬಿಆರ್‌ಎಸ್‌ ಶಾಸಕ ಗಂಭೀರ ಆರೋಪ

- Advertisement -
- Advertisement -

ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೆಲಂಗಾಣದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ  ಅವರು ತಮ್ಮ ಸಂಸದರಿಂದ ಅಡ್ಡ ಮತದಾನ ಮಾಡಿಸಿದ್ದಾರೆ ಎಂದು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕ ಪಡಿ ಕೌಶಿಕ್ ರೆಡ್ಡಿ ಆರೋಪಿಸಿದ್ದಾರೆ.

ರಾಜ್ಯದ ಎಂಟು ಕಾಂಗ್ರೆಸ್ ಸಂಸದರು ಬಿಜೆಪಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರಿಗೆ ಮತ ಹಾಕಿದ್ದಾರೆ ಎಂದು ಕೌಶಿಕ್ ರೆಡ್ಡಿ ಹೇಳಿದ್ದಾರೆ. ಈ ನಡೆಯು ತೆಲಂಗಾಣದ ಜನರು ಮತ್ತು ಇಂಡಿಯಾ ಒಕ್ಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರಿಗೆ ಬಗೆದಿರುವ ದ್ರೋಹ ಎಂದಿದ್ದಾರೆ.

ಮಂಗಳವಾರ (ಸೆ.16) ಹೈದರಾಬಾದ್‌ನ ತೆಲಂಗಾಣ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಕೌಶಿಕ್ ರೆಡ್ಡಿ, “ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಾಗ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್‌ ಹಾಕಿದ್ದರು. ಅದರಲ್ಲಿ 315 ಮತಗಳು ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್‌ ರೆಡ್ಡಿ ಪರ ಬಿದ್ದಿವೆ ಎಂದಿದ್ದರು. ಈ ಮೂಲಕ ಇಂಡಿಯಾ ಒಕ್ಕೂಟ ಒಗ್ಗಟ್ಟು ಪ್ರದರ್ಶಿಸಿವೆ ಎಂದು ಹೇಳಿದ್ದರು. ಆದರೆ, ಚುನಾವಣಾ ಆಯೋಗದ ಅಧಿಕೃತ ಪ್ರಕಟನೆ ಮತ್ತು ಮಾಧ್ಯಮ ವರದಿಗಳು 300 ಮತಗಳು ಮಾತ್ರ ಸುದರ್ಶನ್‌ ರೆಡ್ಡಿ ಪರ ಚಲಾವಣೆಯಾಗಿವೆ ಎಂದಿವೆ. ಹಾಗಾದರೆ, 15 ಮತಗಳು ಎಲ್ಲಿಗೆ ಹೋಯಿತು?…15 ಅಡ್ಡ ಮತದಾನವಾಗಿದೆ. ಈ ಪೈಕಿ 8 ತೆಲಂಗಾಣದ ಕಾಂಗ್ರೆಸ್ ಸಂಸದರದ್ದು” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಡ್ಡ ಮತದಾನದ ನಂತರ ತೆಲಂಗಾಣದ ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಚಿವರು ಕಾಂಗ್ರೆಸ್ ಸಂಸದರಿಗೆ ಕೃತಜ್ಞತೆ ತಿಳಿಸಿದ್ದಾರೆ ಎಂದು ಕೌಶಿಕ್ ರೆಡ್ಡಿ ಹೇಳಿದ್ದಾರೆ.

“ರಾಹುಲ್ ಗಾಂಧಿ ರಾಷ್ಟ್ರಮಟ್ಟದಲ್ಲಿ ಮತಗಳ್ಳತನದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ತೆಲಂಗಾಣದ ಅವರ ಸ್ವಂತ ಮುಖ್ಯಮಂತ್ರಿ ಮತಗಳನ್ನು ಕದಿಯುತ್ತಿದ್ದಾರೆ. ಮೂವರು ಕಾಂಗ್ರೆಸ್ ಸಂಸದರು ರೇವಂತ್ ರೆಡ್ಡಿ ಅವರ ಆಜ್ಞೆಯ ಮೇರೆಗೆ ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಿದ್ದೇವೆ ಎಂದು ವೈಯಕ್ತಿಕವಾಗಿ ನಮ್ಮ ಬಳಿ ಒಪ್ಪಿಕೊಂಡಿದ್ದಾರೆ” ಎಂದು ಕೌಶಿಕ್ ರೆಡ್ಡಿ ತಿಳಿಸಿದ್ದಾರೆ.

ತಮ್ಮ ಮಾರ್ಗದರ್ಶಕರಾದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ವರ್ತಿಸುವ ಮೂಲಕ ರೇವಂತ್ ರೆಡ್ಡಿ ತಮ್ಮ ‘ಗುರುದಕ್ಷಿಣೆ’ಯನ್ನು ಪಾವತಿಸುತ್ತಿದ್ದಾರೆ. ಮುಖ್ಯಮಂತ್ರಿಯ ಕಾರ್ಯಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜಾಗರೂಕರಾಗಿರಬೇಕು ಎಂದು ಕೌಶಿ ರೆಡ್ಡಿ ಹೇಳಿದ್ದಾರೆ.

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...