Homeಮುಖಪುಟಸಿಎಬಿ ವಿರೋಧಿಸಿ ಡಿ.16ರಿಂದ ಬಂಗಾಳದಲ್ಲಿ ಬೃಹತ್‌ ಸರಣಿ ರ್‍ಯಾಲಿ.. : ಮಮತಾ ಬ್ಯಾನರ್ಜಿ

ಸಿಎಬಿ ವಿರೋಧಿಸಿ ಡಿ.16ರಿಂದ ಬಂಗಾಳದಲ್ಲಿ ಬೃಹತ್‌ ಸರಣಿ ರ್‍ಯಾಲಿ.. : ಮಮತಾ ಬ್ಯಾನರ್ಜಿ

- Advertisement -
- Advertisement -

ಎಂಥದ್ದೆ ಪರಿಸ್ಥಿತಿ ಬಂದರೂ ಸಹ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಸಾರಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಡಿ.16ರಿಂದ ಕೋಲ್ಕತ್ತಾದಿಂದ ಆರಂಭಿಸಿ ಬಂಗಾಳದಾದ್ಯಂತ ಬೃಹತ್‌ ಸರಣಿ ರ್‍ಯಾಲಿಗಳನ್ನು ಆಯೋಜಿಸುವುದಾಗಿ ಘೋಷಿಸಿದ್ದಾರೆ.

ಈ ಮಸೂದೆಯನ್ನು ಧರ್ಮದ ಆಧಾರದಲ್ಲಿ ಭಾರತವನ್ನು ವಿಭಜಿಸುತ್ತದೆ. ನಾವು ಅಧಿಕಾರದಲ್ಲಿರುವವರೆಗೂ ಬಂಗಾಳದ ನೆಲದಿಂದ ಒಬ್ಬರನ್ನು ಸಹ ಧರ್ಮದ ಆಧಾರದಲ್ಲಿ ಹೊರಹಾಕಲು ಬಿಡುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

“ಈ ಮಸೂದೆಗೆ ಹೆದರಬೇಡಿ. ನಾವು ನಿಮ್ಮೊಂದಿಗಿದ್ದೇವೆ, ಮತ್ತು ನಾವು ಇಲ್ಲಿ ಇರುವವರೆಗೂ ಯಾರೂ ನಿಮ್ಮ ಮೇಲೆ ಏನನ್ನೂ ಹೇರಲು ಸಾಧ್ಯವಿಲ್ಲ” ಎಂದು ಅವರು ಖರಗ್‌ಪುರದಲ್ಲಿ ನಡೆದ ಸಭೆಯಲ್ಲಿ ಹೇಳಿದ್ದರು.

ಡಿಸೆಂಬರ್‌ 16ರಂದು ಕೋಲ್ಕತ್ತಾದಲ್ಲಿ ನಡೆಯುವ ಮಹಾರ್‍ಯಾಲಿಯು ಡಾ.ಅಂಬೇಡ್ಕರ್‌ ಪುತ್ಥಳಿಯಿಂದ ಆರಂಭಗೊಂಡು ಜೊರಾಸಾಂಕೊವರೆಗೂ ನಡೆಯಲಿದ್ದು ಸ್ವತಃ ಮಮತಾ ಬ್ಯಾನರ್ಜಿ ಸಹ ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದು ಟಿಎಂಸಿ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಘೋಷಿಸಲಾಗಿದೆ.

ತದನಂತರ ಡಿ.17ರಂದು ಸಹ ಜಾಧವ್‌ಪುರದಲ್ಲಿ ರ್‍ಯಾಲಿ ನಡೆಯಲಿದ್ದು ಮಹಾತ್ಮಗಾಂಧಿ ಪ್ರತಿಮೆವರೆಗೂ ಮೆರವಣಿಗೆ ಇರುತ್ತದೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಬಂಗಾಳದ ಪ್ರತಿ ಜಿಲ್ಲೆಯಲ್ಲಿಯೂ ಸಹ ಬೃಹತ್‌ ಕಾರ್ಯಕ್ರಮಗಳ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆಯ ಕರಾಳ ಮುಖಗಳನ್ನು ಬಯಲಿಗೆಳೆದು ಜನರಿಗೆ ಅರಿವು ಮೂಡಿಸಲಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...