Homeಮುಖಪುಟ'ಇಸ್ಲಾಮೋಫೋಬಿಕ್' ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

- Advertisement -
- Advertisement -

ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ‘ಇಸ್ಲಾಮೋಫೋಬಿಕ್’ ವಿಡಿಯೋ ಒಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷವು ಮುಸ್ಲಿಮರನ್ನು ನಿಂದಿಸುತ್ತಿದೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಬಿಜೆಪಿ ಇಲ್ಲದ ಅಸ್ಸಾಂ’ ಎಂಬ ಶೀರ್ಷಿಕೆಯ ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರನ್ನು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಅಕ್ರಮ ವಲಸಿಗರಂತೆ ಚಿತ್ರಿಸಲಾಗಿದೆ. ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ರಾಹುಲ್ ಗಾಂಧಿ ಅವರನ್ನು ತೋರಿಸಿ, ಅವರಿಬ್ಬರು ‘ಪಾಕಿಸ್ತಾನದ ಜೊತೆ ಸಂಪರ್ಕ’ ಹೊಂದಿರುವಂತೆ ಬಿಂಬಿಸಲಾಗಿದೆ.

ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋ ಪ್ರಚೋದನಕಾರಿ ಎಂದು ಖಂಡಿಸಿದ್ದಾರೆ. ಇದು ಅಸ್ಸಾಂನಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಈ ವಿಡಿಯೋ ಬಗ್ಗೆ ಗಮನಹರಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಒತ್ತಾಯಿಸಿದೆ. ಬಿಜೆಪಿ ವಿರುದ್ದ ದೂರು ದಾಖಲಿಸಲು ಯೋಜಿಸುತ್ತಿರುವುದಾಗಿ ತಿಳಿಸಿದೆ.

ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆಯ ವಿರೋಧ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಅವರು ವಿಡಿಯೋಗೆ ಖಂಡನೆ ವ್ಯಕ್ತಪಡಿಸಿದ್ದು, “ಇದು ಅಸ್ಸಾಮಿ ಸಮಾಜ ಮತ್ತು ಅದರ ಸಂಪ್ರದಾಯಗಳನ್ನು ತಪ್ಪಾಗಿ ಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಸೃಷ್ಟಿಸುವ ಫೋಟೋ, ವಿಡಿಯೋ, ಮಾತು, ಕೃತಿ ಯಾವುದೂ ಕೂಡ ಅಸ್ಸಾಮಿ ಸಮಾಜದ ಮೇಲೆ ಹಾನಿ ಮಾಡುವ ಶಕ್ತಿ ಹೊಂದಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಗೊಗೊಯ್ ತಿಳಿಸಿದ್ದಾರೆ.

“ಅಸ್ಸಾಂ ಅನ್ನು ಮಹಾಪುರುಷರಾದ ಶ್ರೀಮಂತ ಶಂಕರದೇವ, ಅಝಾನ್ ಪೀರ್, ಸ್ವರ್ಗದೇವ್ ಸಿಯುಕಾಫ, ಲಚಿತ್ ಬೋರ್ಫುಕನ್ ಮತ್ತು ಭೂಪೇನ್ ಹಝಾರಿಕಾ ಪೋಷಿಸಿದ್ದಾರೆ. ದನ, ಕಲ್ಲಿದ್ದಲು, ವೀಳ್ಯದೆಲೆ ಅಥವಾ ಮಾದಕವಸ್ತುಗಳ ಕಳ್ಳಸಾಗಣೆಗೆ ಸಂಬಂಧಿಸಿದ ಜನರು ಅಸ್ಸಾಮಿಗಳ ಮನಸ್ಸನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೆಮ್ಮೆಯ ಮತ್ತು ಶ್ರೇಷ್ಠ ರಾಜ್ಯವಾದ ಅಸ್ಸಾಂ, ತನ್ನ ಜನರು ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುವ ರಾಜಕಾರಣಿಗಳಿಗೆ ಅರ್ಹವಾಗಿದೆ” ಎಂದು ಗೊಗೊಯ್ ಹೇಳಿದ್ದಾರೆ.

ವಿಡಿಯೋ ವಿರುದ್ದ ಕಾಂಗ್ರೆಸ್ ಪಕ್ಷವು ಗುವಾಹಟಿಯಲ್ಲಿ ಔಪಚಾರಿಕ ಪೊಲೀಸ್ ದೂರು ದಾಖಲಿಸಲಿದೆ ಎಂದು ಗೊಗೊಯ್ ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಗೊಗೊಯ್ ಅವರು ರಾಜ್ಯದ ಬಗ್ಗೆ ತಮ್ಮ ಪಕ್ಷದ ದೃಷ್ಟಿಕೋನವನ್ನು ವಿವರಿಸಿದ್ದಾರೆ: “ನಾವು ಪೈಲಟ್‌ಗಳು, ಇಂಜಿನಿಯರ್‌ಗಳು, ವೈದ್ಯರು, ಉದ್ಯಮಿಗಳು, ಬ್ಯಾಂಕರ್‌ಗಳು ಮತ್ತು ವ್ಯಾಪಾರ ಮಾಲೀಕರ ಸಮಾಜವನ್ನು ನಿರ್ಮಿಸಬೇಕೆಂದು ಬಯಸುತ್ತೇವೆ. ಕಠಿಣ ಪರಿಶ್ರಮವು ದ್ವೇಷವನ್ನು ಹಿಂದಿಕ್ಕುವ, ಸಭ್ಯತೆಯು ದುರಹಂಕಾರಕ್ಕಿಂತ ಮುಖ್ಯವಾದ, ಪ್ರಜಾಪ್ರಭುತ್ವವು ನಿರಂಕುಶಾಧಿಕಾರವನ್ನು ಹತ್ತಿಕ್ಕುವ ಮತ್ತು ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳುವ ಅಸ್ಸಾಂ ಅನ್ನು ನಾವು ನೋಡಲು ಬಯಸುತ್ತೇವೆ” ಎಂದಿದ್ದಾರೆ.

ಅಸ್ಸಾಂನ ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಕೂಡ ಬಿಜೆಪಿಯ ವಿಡಿಯೋವನ್ನು ಟೀಕಿಸಿದೆ.

“ಈ ಎಐ ವಿಡಿಯೋ ಮೂಲಕ ಅಸ್ಸಾಂ ಬಿಜೆಪಿ ಭಯದ ಭಾವನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಎಐಯುಡಿಎಫ್‌ನ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿ ಇಲ್ಲದಿದ್ದರೆ ಅಸ್ಸಾಂ ಸಂಪೂರ್ಣ ಮುಸ್ಲಿಂ ಸ್ವಾಧೀನವಾಗುತ್ತದೆ ಎಂಬ ಭಾವನೆಯನ್ನು ಬಹುಸಂಖ್ಯಾತ ಸಮುದಾಯದಲ್ಲಿ ಬಿತ್ತಲು ಅವರು ಬಯಸುತ್ತಿದ್ದಾರೆ. ಅವರು ಈ ಹಿಂದೆಯೂ ಇಂತಹ ನಿರೂಪಣೆಗಳನ್ನು ಮಂಡಿಸಿದ್ದಾರೆ. ಕೆಲವೊಮ್ಮೆ ‘ಲವ್ ಜಿಹಾದ್’ ಎಂದು ಕರೆಯಲ್ಪಡುವ ಮೂಲಕ, ಕೆಲವೊಮ್ಮೆ ‘ಬೌದ್ಧಿಕ ಜಿಹಾದ್’ ಮೂಲಕ ಮುಸ್ಲಿಮರನ್ನು ರಾಕ್ಷಸೀಕರಿಸಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ದ್ವೇಷ ಭಾಷಣದ ಒಂದು ರೂಪವಾಗಿದೆ. ಇದರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಬೇಕು ಮತ್ತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಲು ಯೋಜಿಸಿದ್ದೇವೆ” ಎಂದು ಅಮೀನುಲ್ ಇಸ್ಲಾಂ ತಿಳಿಸಿದ್ದಾರೆ.

ವಿಡಿಯೋಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಬಿಜೆಪಿ ಮುಸ್ಲಿಂ ಮುಕ್ತ ಭಾರತ’ದ ಗುರಿ ಹೊಂದಿದೆ ಎಂದಿದ್ದಾರೆ.

“ಬಿಜೆಪಿ ಇಲ್ಲದಿದ್ದರೆ ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಇರುತ್ತಿತ್ತು ಎಂದು ತೋರಿಸುವ ಅಸಹ್ಯಕರ ಕೃತಕ ಬುದ್ಧಿಮತ್ತೆಯ ವಿಡಿಯೋವನ್ನು ಬಿಜೆಪಿ ಅಸ್ಸಾಂ ಪೋಸ್ಟ್ ಮಾಡಿದೆ. ಅವರು ಕೇವಲ ಓಟಿಗಾಗಿ ಈ ಭಯ ಹುಟ್ಟಿಸುತ್ತಿಲ್ಲ, ಇದು ನಿಜ ರೂಪದಲ್ಲಿ ಅಸಹ್ಯಕರ ಹಿಂದುತ್ವ ಸಿದ್ಧಾಂತವಾಗಿದೆ”ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಕುರಿತ ಎಐ ವಿಡಿಯೋ ತೆಗೆದು ಹಾಕಲು ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದ್ದನ್ನು ನೆನಪಿಸಿದ ಓವೈಸಿ, “ಪ್ರತಿಯೊಬ್ಬರಿಗೂ ಅವರ ತಾಯಿ ಮೇಲೆ ದೊಡ್ಡ ಗೌರವವಿದೆ. ಅಸ್ಸಾಂ ಬಿಜೆಪಿಯ ಅಸಹ್ಯಕರ ವಿಡಿಯೋಗೂ ಅದೇ ತತ್ವವನ್ನು ಅನುಸರಿಸಬೇಕು. ಮುಸ್ಲಿಂ ನಾಗರಿಕರನ್ನು ಅಪಾಯಕಾರಿ ಎಂದು, ನಿರಂತರವಾಗಿ ದಮನಿಸಬೇಕಾದ ಗುಂಪು ಎಂದು ಚಿತ್ರಿಸುವುದು ಅವಹೇಳನಕಾರಿ ಮಾತ್ರವಲ್ಲ, ನರಮೇಧವೂ ಆಗಿದೆ” ಎಂದು ಓವೈಸಿ ಕಿಡಿಕಾರಿದ್ದಾರೆ.

“ಬಿಜೆಪಿ ಉದ್ದೇಶಪೂರ್ಕವಾಗಿ ಇದನ್ನು ಮಾಡುತ್ತಿದೆ. ಅಸ್ಸಾಂ ಬಿಜೆಪಿ ವಿಡಿಯೋ ಪೋಸ್ಟ್‌ ಮಾಡಿರುವುದು ಹೊಸ ವಿಷಯವೇನಲ್ಲ. ಎಲ್ಲೆಲ್ಲಿ ಚುನಾವಣೆಗಳು ಇರುತ್ತವೋ ಅಂತಹ ರಾಜ್ಯಗಳಲ್ಲಿ ಬಿಜೆಪಿ ಇದನ್ನು ಮಾಡುತ್ತವೆ. ನಿಮಗೆ ನೆನಪಿದ್ದರೆ, ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಇದೇ ರೀತಿ ಮಾಡಿತ್ತು. ಮುಂದೆ ಅಸ್ಸಾಂನಲ್ಲಿ ಚುನಾವಣೆ ಇದೆ. ಬಿಜೆಪಿಯ ಇಂತಹ ನಡೆಗಳು ಮುಸ್ಲಿಮರ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸುತ್ತದೆ” ಎಂದಿದ್ದಾರೆ.

“ಕೋಮು ದ್ವೇಷವನ್ನು ಹುಟ್ಟುಹಾಕಲು ‘ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ’ ಎಂಬ ಎಐ ವಿಡಿಯೋ ಹಂಚಿಕೊಳ್ಳುವ ಮೂಲಕ ಅಸ್ಸಾಂ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ. ಇದು ಸಾಮಾಜಿಕ ಸಾಮರಸ್ಯದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ನಮ್ಮ ಹಂಚಿಕೆಯ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ನಿಮ್ಮ ವಿಷಕಾರಿ ಅಭಿಯಾನಕ್ಕೆ ಅಸ್ಸಾಂನ ಜನರು ಸರಿಯಾದ ಉತ್ತರವನ್ನು ನೀಡುತ್ತಾರೆ” ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಖಾನ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೋಗೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಬಿಜೆಪಿ ವಕ್ತಾರ ರೂಪಮ್ ಗೋಸ್ವಾಮಿ, ವಿಡಿಯೋವನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿರುವ ಅವರು, “ಸ್ಥಳೀಯ ಸಮುದಾಯಗಳ ಜೀವನ, ಜೀವನೋಪಾಯ, ಭೂಮಿ ಮತ್ತು ಸಂಸ್ಕೃತಿಗೆ ಬೆದರಿಕೆಯೊಡ್ಡಿರುವ ಜನಸಂಖ್ಯಾ ಬದಲಾವಣೆಯನ್ನು ರಾಜ್ಯವು ಹೇಗೆ ಅನುಭವಿಸಿದೆ ಎಂಬುದರ ಕುರಿತು ಸತ್ಯವನ್ನು ಈ ವಿಡಿಯೋ ಪ್ರತಿಬಿಂಬಿಸುತ್ತದೆ ಎಂದು ಅಸ್ಸಾಂ ಬಿಜೆಪಿ ನಂಬುತ್ತದೆ” ಎಂದಿದ್ದಾರೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...