HomeಮುಖಪುಟBLOCKED by CEC | ಆಳಂದ ಮತಗಳ್ಳತನ ಕುರಿತ ಚು.ಆಯೋಗದ ಪೋಸ್ಟ್‌ಗೆ ರಾಹುಲ್ ಗಾಂಧಿ ತಿರುಗೇಟು

BLOCKED by CEC | ಆಳಂದ ಮತಗಳ್ಳತನ ಕುರಿತ ಚು.ಆಯೋಗದ ಪೋಸ್ಟ್‌ಗೆ ರಾಹುಲ್ ಗಾಂಧಿ ತಿರುಗೇಟು

- Advertisement -
- Advertisement -

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಕುರಿತ ರಾಹುಲ್ ಗಾಂಧಿಯ ಆರೋಪಗಳನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ. ಇದಕ್ಕೆ ರಾಹುಲ್ ಗಾಂಧಿ ತಿರುಗೇಟು ಕೊಟ್ಟಿದ್ದಾರೆ.

ರಾಹುಲ್ ಗಾಂಧಿ ಇಂದು (ಸೆ.18) ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ‘ತಪ್ಪು’ ಮತ್ತು ‘ಆಧಾರರಹಿತ’ ಎಂದು ಚುನಾವಣಾ ಆಯೋಗ ಹೇಳಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ಸಾಧ್ಯವಿಲ್ಲ ಎಂದಿತ್ತು.

ಅಲ್ಲದೆ, ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರ ಹೆಸರನ್ನು ಅಳಿಸಲು ವಿಫಲ ಪ್ರಯತ್ನಗಳು ನಡೆದಿತ್ತು. ಈ ಸಂಬಂಧ ತನಿಖೆಗಾಗಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಹೇಳಿತ್ತು.

ಚುನಾವಣಾ ಆಯೋಗದ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ತನಿಖೆಗೆ ತಡೆಯೊಡ್ಡಿದ್ದಾರೆ ಎಂದಿದ್ದಾರೆ.

  • ನಮ್ಮ ಅಳಂದ ಅಭ್ಯರ್ಥಿ ವಂಚನೆಯನ್ನು ಬಹಿರಂಗಪಡಿಸಿದ ನಂತರ, ಸ್ಥಳೀಯ ಚುನಾವಣಾ ಅಧಿಕಾರಿ ಎಫ್‌ಐಆರ್ ದಾಖಲಿಸಿದರು, ಆದರೆ ಸಿಐಡಿ ತನಿಖೆಗೆ ಸಿಇಸಿ ತಡೆಯೊಡ್ಡಿದ್ದಾರೆ.
  • ಕರ್ನಾಟಕ ಸಿಐಡಿ 18 ತಿಂಗಳಲ್ಲಿ 18 ಪತ್ರಗಳನ್ನು ಬರೆದು ಎಲ್ಲಾ ಅಪರಾಧ ಸಾಕ್ಷ್ಯಗಳನ್ನು ಕೋರಿದೆ. ಆದರೆ ಸಿಇಸಿ ತಡೆಯೊಡ್ಡಿದ್ದಾರೆ. 
  • ತನಿಖೆಗೆ ಸಹಕರಿಸಲು ಕರ್ನಾಟಕ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ಹಲವು ಬಾರಿ ವಿನಂತಿಸಿದೆ. ಆದರೆ, ಸಿಇಸಿ ತಡೆಯೊಡ್ಡಿದ್ದಾರೆ. 
  • ಡೆಸ್ಟಿನೇಶನ್ ಐಪಿ, ಡಿವೈಸ್ ಪೋರ್ಟ್‌ ಮತ್ತು ಒಟಿಪಿ ಟ್ರೇಲ್‌ ವಿವರಗಳನ್ನು ತಡೆಹಿಡಿಯಲಾಗಿದೆ- ಸಿಇಸಿ ತಡೆಯೊಡ್ಡಿದ್ದಾರೆ. 
  • ಈ ಮತಗಳ್ಳತನವನ್ನು ಬಯಲು ಮಾಡಿರದಿದ್ದರೆ, 6,018 ಮತಗಳನ್ನು ಅಳಿಸಿದ್ದರೆ, ನಮ್ಮ ಅಭ್ಯರ್ಥಿ ಚುನಾವಣೆಯಲ್ಲಿ ಸೋಲಬಹುದಿತ್ತು.
  • ಸಿಇಸಿ ಜ್ಞಾನೇಶ್ ಕುಮಾರ್ – ನೆಪಗಳನ್ನು ಹೇಳುವುದನ್ನು ನಿಲ್ಲಿಸಿ. ಈಗಲೇ ಕರ್ನಾಟಕ ಸಿಐಡಿಗೆ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿ. 

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...