Homeಮುಖಪುಟಖರಗ್‌ಪುರ ಐಐಟಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಪತ್ತೆ; ವರ್ಷದಲ್ಲಿ6ನೇ ಪ್ರಕರಣ

ಖರಗ್‌ಪುರ ಐಐಟಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಪತ್ತೆ; ವರ್ಷದಲ್ಲಿ6ನೇ ಪ್ರಕರಣ

- Advertisement -
- Advertisement -

ಐಐಟಿ-ಖರಗ್‌ಪುರದ ಆವರಣದಲ್ಲಿ ಇಂದು ಮಧ್ಯಾಹ್ನ ಸಂಶೋಧಕರೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಸಂಶೋಧಕರ ಶವ ಮಧ್ಯಾಹ್ನ 2 ಗಂಟೆ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ವರ್ಷದಲ್ಲಿ ಇದು ಆರನೇ ಶಂಕಿತ ಆತ್ಮಹತ್ಯೆ ಪ್ರಕರಣ ಎಂದು ಹೇಳಲಾಗುತ್ತಿದೆ.

ಖರಗ್‌ಪುರ ಪಟ್ಟಣ ಪೊಲೀಸ್ ವ್ಯಾಪ್ತಿಯ ಹಿಜ್ಲಿ ಹೊರಠಾಣೆ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದಾರೆ.

ಆ ವ್ಯಕ್ತಿಯನ್ನು ಜಾರ್ಖಂಡ್‌ನ ಹರ್ಷಕುಮಾರ್ ಪಾಂಡೆ (27) ಎಂದು ಗುರುತಿಸಲಾಗಿದೆ. ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಕಂಡುಹಿಡಿಯಲು ತನಿಖೆ ಆರಂಭಿಸಲಾಗಿದೆ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪಾಂಡೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆಯುತ್ತಿದ್ದರು.

ಸಂಶೋಧಕರ ತಂದೆ ಮನೋಜ್ ಕುಮಾರ್ ಪಾಂಡೆ ದೂರವಾಣಿ ಮೂಲಕ ತಮ್ಮ ಮಗನನ್ನು ತಲುಪಲು ಸಾಧ್ಯವಾಗದಿದ್ದಾಗ, ಅವರು ಐಐಟಿಯ ಭದ್ರತಾ ಸಿಬ್ಬಂದಿಯನ್ನು ಸಂಪರ್ಕಿಸಿದರು. ಅವರು ಪರಿಶೀಲಿಸಲು ಹೋದಾಗ ಅವರ ಕೋಣೆ ಒಂಗಿನಿಂದ ಲಾಕ್ ಆಗಿರುವುದು ಕಂಡುಬಂದಿದೆ. ನಂತರ ಅಧಿಕಾರಿಗಳು ಹಿಜ್ಲಿ ಪೊಲೀಸರಿಗೆ ಮಾಹಿತಿ ನೀಡಿದರು. ಮಧ್ಯಾಹ್ನ 2:00 ರ ಸುಮಾರಿಗೆ ಶವವನ್ನು ಹೊರತೆಗೆದು ಐಐಟಿ ಖರಗ್‌ಪುರದ ಬಿ.ಸಿ. ರಾಯ್ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಈ ಘಟನೆಯೊಂದಿಗೆ, ಈ ವರ್ಷ ಐಐಟಿ ಖರಗ್‌ಪುರದಲ್ಲಿ ನಡೆದ ಅಸಹಜ ಸಾವಿನ ಸಂಖ್ಯೆ ಆರಕ್ಕೆ ಏರಿದೆ. ಆ ಪೈಕಿ ಐದು ಪ್ರಕರಣಗಳಲ್ಲಿ, ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೊನೆಯ ಪ್ರಕರಣ ಎರಡು ತಿಂಗಳ ಹಿಂದೆ ಜುಲೈನಲ್ಲಿ ಸಂಭವಿಸಿತ್ತು, ಮಧ್ಯಪ್ರದೇಶದ ಚಿಂದ್ವಾರದ ಎರಡನೇ ವರ್ಷದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಚಂದ್ರದೀಪ್ ಪವಾರ್ ಔಷಧಿ ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದರು.

ಈ ವರ್ಷ ಜೂನ್ 23 ರಂದು ಅಧಿಕಾರ ವಹಿಸಿಕೊಂಡಾಗಿನಿಂದ, ಐಐಟಿ ಖರಗ್‌ಪುರ ನಿರ್ದೇಶಕಿ ಸುಮನ್ ಚಕ್ರವರ್ತಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಮಾನಸಿಕ ಯೋಗಕ್ಷೇಮವನ್ನು ಉತ್ತೇಜಿಸಲು ಎಸ್‌ಇಟಿಯು ಅಪ್ಲಿಕೇಶನ್, ಮದರ್ ಕ್ಯಾಂಪಸ್ ಮತ್ತು ಇತರ ಕಾರ್ಯಕ್ರಮಗಳಂತಹ ಉಪಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸೆಪ್ಟೆಂಬರ್ 10, ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದಂದು, ಅವರು ವಿದ್ಯಾರ್ಥಿಗಳೊಂದಿಗೆ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದರು.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...