Homeಕರ್ನಾಟಕರಾಮನಗರ: ಭಿನ್ನ ಧರ್ಮೀಯ ಜೋಡಿ ಮೇಲೆ ಹಲ್ಲೆ; ಐವರ ಬಂಧನ

ರಾಮನಗರ: ಭಿನ್ನ ಧರ್ಮೀಯ ಜೋಡಿ ಮೇಲೆ ಹಲ್ಲೆ; ಐವರ ಬಂಧನ

- Advertisement -
- Advertisement -

ರಾಮನಗರ ಜಿಲ್ಲೆ ಕನಕಪುರದಲ್ಲಿ ಭಿನ್ನ ಧರ್ಮೀಯ ಜೋಡಿ ಮೇಲೆ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿ, ಇಬ್ಬರ ತಲೆಯನ್ನು ಅರ್ಧ ಬೋಳಿಸಿದ ಬಗ್ಗೆ ವರದಿಯಾಗಿದೆ.

ಪಟ್ಟಣದ ಇಂದಿರಾನಗರದಲ್ಲಿ ಶನಿವಾರ (ಸೆ.20) ಈ ಘಟನೆ ನಡೆದಿದೆ ಎಂದು ಮಾಹಿತಿ ದೊರೆತಿದೆ.

ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಏಳು ಆರೋಪಿಗಳ ಮೇಲೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಪೈಕಿ ಐವರನ್ನು ಬಂಧಿಸಿದ್ದಾರೆ.

ಭಿನ್ನ ಧರ್ಮೀಯ ಜೋಡಿಗಳಾದ ಮಹೇಶ್ ಮತ್ತು ಆಸಿನ್ ನೀಡಿರುವ ಪ್ರತ್ಯೇಕ ದೂರಿನ ಮೇರೆಗೆ ಆಸಿನ್ ಕಡೆಯವರಾದ ಶೇಕ್ ಕಬೀರ್, ಸುಹೇಲ್ ಷರೀಫ್, ಸೈಯದ್ ನಯಾಝ್, ನವಾಝ್ ಖಾನ್, ಸಾಜಿದಾ ಬೇಗಂ, ಸಯಿದಾ ಸೇರಿ 7 ಮಂದಿ ವಿರುದ್ದ ಕನಕಪುರ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಐವರನ್ನು ಬಂಧಿಸಿ, ಉಳಿದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸೆ.18ರಂದು ತಾಮಸಂದ್ರದಲ್ಲಿರುವ ಮಹೇಶ್ ಸ್ನೇಹಿತನ ಮನೆಗೆ ಇಬ್ಬರೂ ಹೋಗಿ ಉಳಿದಿದ್ದರು. ಈ ವಿಷಯ ತಿಳಿದ ಆರೋಪಿಗಳು, ಮಾರನೇ ದಿನ ಸಂಜೆ 4.30ರ ಸುಮಾರಿಗೆ ತಾಮಸಂದ್ರಕ್ಕೆ ಕಾರಿನಲ್ಲಿ ಹೋಗಿ ಇಬ್ಬರನ್ನೂ ಕನಕಪುರಕ್ಕೆ ಕರೆ ತಂದು ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ನಂತರ ಇಂದಿರಾನಗರದ ಕರಿಯಪ್ಪ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಬಳಿ ಇಬ್ಬರನ್ನೂ ಕೂರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಬಿಡಿಸಿಕೊಳ್ಳಲು ಬಂದ ಮಹೇಶ್ ಕುಟುಂಬದವರ ಮೇಲೂ ಹಲ್ಲೆ ನಡೆಸಲಾಗಿದೆ. ಆರೋಪಿಗಳ ಪೈಕಿ ಕಬೀರ್, ಟ್ರಿಮ್ಮರ್‌ನಿಂದ ಇಬ್ಬರ ತಲೆಯನ್ನು ಅರ್ಧ ಬೋಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, 15 ವರ್ಷಗಳ ಹಿಂದೆಯೇ ಮದುವೆಯಾಗಿರುವ ಆಸಿನ್ ತಾಜ್‌ಗೆ ಮಗನಿದ್ದು, ಗಂಡ ಆರು ತಿಂಗಳ ಹಿಂದೆ ಬಿಟ್ಟು ಹೋಗಿದ್ದಾರೆ. ಇವರು ಇಂದಿರಾನಗರದ ಮಹೇಶ್ ಅವರನ್ನು ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಮಹೇಶ್ ಕೂಡ ವಿವಾಹಿತರಾಗಿದ್ದು ಹೆಂಡತಿ ತೀರಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಜೋಡಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಮಹಿಳೆಯನ್ನು ಕೌನ್ಸೆಲಿಂಗ್‌ಗಾಗಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಪೊಲೀಸರು ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ, ಕಾನೂನು, ಸುವ್ಯವಸ್ಥೆ ಕಾಪಾಡಲು ಘಟನಾ ಸ್ಥಳದಲ್ಲಿ ಪೊಲೀಸರು ಹೆಚ್ಚುವರಿ ಪಡೆಯನ್ನು ನಿಯೋಜಿಸಿದ್ದಾರೆ. ಎರಡೂ ಕುಟುಂಬಗಳು ಮತ್ತು ಸಮುದಾಯದ ಸದಸ್ಯರನ್ನು ಒಳಗೊಂಡ ಶಾಂತಿ ಸಭೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...