Homeಮುಖಪುಟವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

- Advertisement -
- Advertisement -

ದೆಹಲಿಯ ಪ್ರತಿಷ್ಠಿತ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಸ್ವಯಂ ಘೋಷಿತ ದೇವಮಾನವ, ಪಾರ್ಥ್ ಸಾರಥಿ ಎಂದೂ ಕರೆಯಲ್ಪಡುವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 4ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಔಪಚಾರಿಕ ದೂರಿನ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನೆಂದು ಹೇಳಲಾಗುವ ಪಾರ್ಥ್ ಸಾರಥಿ ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನಿಖೆಯ ಸಮಯದಲ್ಲಿ, ಪೊಲೀಸರು ಇಡಬ್ಲ್ಯುಎಸ್‌ (ಆರ್ಥಿಕವಾಗಿ ದುರ್ಬಲ ವಿಭಾಗ) ವಿದ್ಯಾರ್ಥಿವೇತನದಡಿಯಲ್ಲಿ ದಾಖಲಾದ 32 ಪಿಜಿಡಿಎಂ ವಿದ್ಯಾರ್ಥಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಪೈಕಿ 17 ವಿದ್ಯಾರ್ಥಿಗಳು ಪಾರ್ಥ್ ಸಾರಥಿ ವಿರುದ್ಧ ನಿಂದನೀಯ ಭಾಷೆ ಬಳಸುವುದು, ಅಶ್ಲೀಲ ಸಂದೇಶಗಳನ್ನು ಕಳುಹಿಸುವುದು ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಲ ಅಧ್ಯಾಪಕರು ಮತ್ತು ಸಂಸ್ಥೆಯ ಆಡಳಿತಾಧಿಕಾರಿಗಳು ಪಾರ್ಥ್ ಸಾರಥಿಯ ಬೇಡಿಕೆಗಳನ್ನು ಈಡೇರಿಸುವಂತೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹೇರಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 16 ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ.

ದೆಹಲಿ ಪೊಲೀಸರು ಸಂಸ್ಥೆಯ ನೆಲಮಾಳಿಗೆಯಲ್ಲಿ ನಕಲಿ ರಾಜತಾಂತ್ರಿಕ ನಂಬರ್ ಪ್ಲೇಟ್ ಹೊಂದಿರುವ ವೋಲ್ವೋ ಕಾರನ್ನು ಪತ್ತೆಹಚ್ಚಿದ್ದಾರೆ. ಪಾರ್ಥ್ ಸಾರಥಿ ಬಳಸಿದ್ದಾರೆ ಎನ್ನಲಾದ ಈ ವಾಹನದ ಮೇಲೆ ಆಗಸ್ಟ್ 25 ರಂದು ಎರಡನೇ ಎಫ್‌ಐಆರ್ ದಾಖಲಾಗಿದ್ದು, ಅಂದಿನಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್ ದಾಳಿಗಳು ಮತ್ತು ನಿರಂತರ ಕಣ್ಗಾವಲು ಹೊರತಾಗಿಯೂ, ಆರೋಪಿ ತಲೆಮರೆಸಿಕೊಂಡಿದ್ದಾರೆ. ಅಧಿಕಾರಿಗಳು ಆತನ ಬಂಧನ ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಸಮಾಜವಾದಿ ಪಕ್ಷದ ಮಾಜಿ ಸಚಿವ ಅಜಮ್ ಖಾನ್ 23 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...