Homeಮುಖಪುಟ'ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ': ಚುನಾವಣಾ ಆಯೋಗದ ಹೊಸ 'ಇ-ಸೈನ್' ವೈಶಿಷ್ಟ್ಯ'ಕ್ಕೆ ರಾಹುಲ್ ಗಾಂಧಿ...

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಆಳಂದಲ್ಲಿ ಮತಗಳ್ಳತನದ ಕುರಿತು ನಾವು ಆರೋಪ ಮಾಡಿದ ಬಳಿಕವಷ್ಟೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ‘ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ’ ಹೊಸ ಕ್ರಮ ಪರಿಚಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಆಳಂದಲ್ಲಿ ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದಂತೆ ಪಟ್ಟಿಯಿಂದ ಅಳಿಸಲಾಗಿದೆ ಎಂಬ ರಾಹುಲ್ ಗಾಂಧಿಯ ಆರೋಪದ ಬಳಿಕ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಹೊಸ ‘ಇ-ಸೈನ್’ ವೈಶಿಷ್ಟ್ಯ’ವನ್ನು ಚುನಾವಣಾ ಆಯೋಗ ಪರಿಚಯಿಸಿದೆ ಎಂಬ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವರದಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ “ಜ್ಞಾನೇಶ್ ಕುಮಾರ್ ಅವರೇ ನಾವು ಕಳ್ಳತನ ಕಂಡು ಹಿಡಿದ ಬಳಿಕವಷ್ಟೇ ನಿಮಗೆ ಬೀಗ ಹಾಕಲು ನೆನಪಾಗಿದೆ. ನಾವು ಕಳ್ಳರನ್ನೂ ಹಿಡಿಯುತ್ತೇವೆ. ನೀವು ಸಿಐಡಿಗೆ ದತ್ತಾಂಶ ಯಾವಾಗ ಕೊಡುತ್ತೀರಿ? ಹೇಳಿ” ಎಂದು ಪ್ರಶ್ನಿಸಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರುಗಳನ್ನು ಅವರಿಗೆ ಗೊತ್ತಿಲ್ಲದಂತೆ ನಕಲಿ ಫಾರ್ಮ್‌ 7 ಮೂಲಕ ಅಳಿಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿತ್ತು.

ಈ ಬಗ್ಗೆ ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ಆದರೆ, ತನಿಖೆಗೆ ನಿರ್ಣಾಯಕವಾದ ಡೆಸ್ಟಿನೇಶನ್ ಫೋರ್ಟ್ ಮತ್ತು ಡೆಸ್ಟಿನೇಶನ್ ಐಡಿ ಸೇರಿದಂತೆ ಪ್ರಮುಖ ದತ್ತಾಂಶಗಳನ್ನು ಚುನಾವಣಾ ಆಯೋಗ ಒದಗಿಸುತ್ತಿಲ್ಲ. ಇದರಿಂದ ತನಿಖೆ ಹಳ್ಳ ಹಿಡಿದಿದೆ ಎಂದು ಸೆಪ್ಟೆಂಬರ್ 7ರಂದು ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ಸೆಪ್ಟೆಂಬರ್ 18ರಂದು ನವದೆಹಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಲು ಕೇಂದ್ರೀಕೃತ ಸಾಫ್ಟ್‌ವೇರ್ ಪ್ರೋಗ್ರಾಂ ಅನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯ ಆರೋಪವನ್ನು ಚುನಾವಣಾ ಆಯೋಗ ತಳ್ಳಿ ಹಾಕಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದಿತ್ತು.

ಹೊಸ ‘ಇ-ಸೈನ್’ ವೈಶಿಷ್ಟ್ಯ’

ಚುನಾವಣಾ ಆಯೋಗದ ECINET ಪೋರ್ಟಲ್‌ನಲ್ಲಿ ಹೊಸ ಮತದಾರರ ನೋಂದಣಿಗಾಗಿ ಫಾರ್ಮ್ 6, ಅಸ್ತಿತ್ವದಲ್ಲಿರುವ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಲು ಮತ್ತು ಅಳಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಲು ಫಾರ್ಮ್‌ 7 ಹಾಗೂ ನಮೂದುಗಳ ತಿದ್ದುಪಡಿಗಾಗಿ ಫಾರ್ಮ್ 8 ಭರ್ತಿ ಮಾಡಲು ಹೊಸದಾಗಿ ‘ಇ-ಸೈನ್’ ಕಡ್ಡಾಯಗೊಳಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇ-ಸೈನ್ ವೈಶಿಷ್ಟ್ಯದಿಂದಾಗಿ ಈಗ ಅರ್ಜಿದಾರರು ಅರ್ಜಿಗೆ ಬಳಸುವ ಮತದಾರರ ಕಾರ್ಡ್‌ನಲ್ಲಿರುವ ಹೆಸರು ಅವರ ಆಧಾರ್ ಕಾರ್ಡ್‌ನಲ್ಲಿರುವ ಹೆಸರಿಗೆ ಹೊಂದಿಕೆಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪೋರ್ಟಲ್ ಕೇಳುತ್ತದೆ. ಅಲ್ಲದೆ, ಅವರು ಬಳಸುತ್ತಿರುವ ಮೊಬೈಲ್ ಸಂಖ್ಯೆಯನ್ನು ಅವರ ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆಯೂ ಅದು ಕೇಳುತ್ತದೆ ಎಂದು ವರದಿ ವಿವರಿಸಿದೆ.

ಅರ್ಜಿದಾರರು ಫಾರ್ಮ್ ಭರ್ತಿ ಮಾಡಿದ ನಂತರ, ಅವರಿಗೆ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ಆಯೋಜಿಸಿರುವ ಬಾಹ್ಯ ಇ-ಸೈನ್ ಪೋರ್ಟಲ್ ಅನ್ನು ತೋರಿಸಲಾಗುತ್ತದೆ. ಇದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಈ ಪೋರ್ಟಲ್‌ನಲ್ಲಿ ‘ಆಧಾರ್ ಒಟಿಪಿ ರಚಿಸಬೇಕಾಗುತ್ತದೆ. ತರುವಾಯ, ಆ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ.

ನಂತರ ಅರ್ಜಿದಾರರು ಆಧಾರ್ ಆಧಾರಿತ ದೃಢೀಕರಣಕ್ಕೆ ಒಪ್ಪಿಗೆ ನೀಡಬೇಕು ಮತ್ತು ಪರಿಶೀಲನೆಯನ್ನು ಪೂರ್ಣಗೊಳಿಸಬೇಕು. ಇದರ ನಂತರ, ಅರ್ಜಿದಾರರನ್ನು ಫಾರ್ಮ್ ಅನ್ನು ಸಲ್ಲಿಸಲು ECINET ಪೋರ್ಟಲ್‌ಗೆ ಮರುನಿರ್ದೇಶಿಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಲಾದ ECINET,ಮತದಾರರು ಮತ್ತು ಅಧಿಕಾರಿಗಳಿಗೆ ಮೀಸಲಾದ 40ಕ್ಕೂ ಹೆಚ್ಚು ಚುನಾವಣಾ ಸಮಿತಿಯ ಅರ್ಜಿಗಳನ್ನು ಸಂಯೋಜಿಸುವ ಮತ್ತು ಮರುಪರಿಶೀಲಿಸುವ ವೇದಿಕೆಯಾಗಿದೆ.

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...