Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

- Advertisement -
- Advertisement -

ಲಡಾಖ್ ಮೂಲದ ಶಿಕ್ಷಣ ತಜ್ಞ ಮತ್ತು ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಆರಂಭಿಸಿದೆ ಎಂದು ಗುರುವಾರ ವರದಿಯಾಗಿದೆ.

ಕೆಲ ಸಮಯದಿಂದ ವಾಂಗ್‌ಚುಕ್ ಅವರ ಸಂಸ್ಥೆಗಳ ವಿರುದ್ದ ತನಿಖೆ ನಡೆಯುತ್ತಿದೆ. ಆದರೆ, ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 10 ದಿನಗಳ ಹಿಂದೆ ಸಿಬಿಐ ತಂಡವು ‘ಒಂದು ಆದೇಶ’ ಪ್ರತಿಯೊಂದಿಗೆ ಬಂದಿದ್ದು, ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (ಹೆಚ್‌ಐಎಲ್‌) ನಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಗಳ ಕುರಿತು ಗೃಹ ಸಚಿವಾಲಯದ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂಬುವುದಾಗಿ ಹೇಳಿದ್ದಾರೆ ವಾಂಗ್‌ಚುಕ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.

“ವಿದೇಶಿ ನಿಧಿಗಳನ್ನು ಸ್ವೀಕರಿಸಲು ನಾವು ಎಫ್‌ಸಿಆರ್‌ಎ ಅಡಿಯಲ್ಲಿ ಅನುಮತಿ ಪಡೆದಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ. ನಾವು ವಿದೇಶಿ ನಿಧಿಗಳ ಮೇಲೆ ಅವಲಂಬಿತರಾಗಲು ಬಯಸುವುದಿಲ್ಲ, ನಾವು ನಮ್ಮ ಜ್ಞಾನವನ್ನು ರಫ್ತು ಮಾಡುತ್ತೇವೆ ಮತ್ತು ಆದಾಯವನ್ನು ಸಂಗ್ರಹಿಸುತ್ತೇವೆ. ಅಂತಹ ಮೂರು ಸಂದರ್ಭಗಳಲ್ಲಿ, ಅವರು ಅದನ್ನು ವಿದೇಶಿ ಕೊಡುಗೆ ಎಂದು ಭಾವಿಸಿದ್ದಾರೆ” ಎಂದು ವಾಂಗ್‌ಚುಕ್ ಹೇಳಿದ್ದಾರೆ.

ಸಿಬಿಐ ತಂಡವು ಕಳೆದ ವಾರ ಹೆಚ್‌ಐಎಎಲ್‌ ಮತ್ತು ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿ (ಎಸ್‌ಇಸಿಎಂಒಎಲ್‌) ಗೆ ಭೇಟಿ ನೀಡಿ, 2022ಮತ್ತು 2024ರ ನಡುವೆ ಅವರು ಪಡೆದ ವಿದೇಶಿ ನಿಧಿಗಳ ವಿವರಗಳನ್ನು ಕೋರಿದೆ ಎಂದು ವಾಂಗ್‌ಚುಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿಬಿಐ ತಂಡಗಳು ಇನ್ನೂ ಲಡಾಖ್‌ನಲ್ಲಿ ಮೊಕ್ಕಾಂ ಹೂಡಿ ಸಂಸ್ಥೆಗಳ ಖಾತೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸುತ್ತಿವೆ ಎಂದಿದ್ದಾರೆ.

ಕೇಂದ್ರದ ವಿರುದ್ದ ವಾಂಗ್‌ಚುಕ್ ಹೋರಾಟ ಮತ್ತು ಸಿಬಿಐ ತನಿಖೆ

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಈ ಪ್ರದೇಶಕ್ಕೆ ಸಂವಿಧಾನದ 6ನೇ ಪರಿಚ್ಛೇದದ ಅಡಿ ರಕ್ಷಣೆ ಒದಗಿಸಬೇಕು ಎಂದು ಸೋನಂ ವಾಂಗ್‌ಚುಕ್ ಹೋರಾಟ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಬುಧವಾರ (ಸೆ.23) ವಾಂಗ್‌ಚುಕ್‌ ಹೋರಾಟ ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಯುವಜನರು ಲೇಹ್‌ನಲ್ಲಿ ಬೀದಿಗಿಳಿದಿದ್ದರು. ಇದರಿಂದ ಪ್ರತಿಭಟನೆ ಹಿಂಸಾತ್ಮಕರೂಪ ಪಡೆದಿತ್ತು. ಪ್ರಸ್ತುತ ಸೋನಂ ವಾಂಗ್‌ಚುಕ್ ತನ್ನ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಕೇಂದ್ರದ ವಿರುದ್ದ ವಾಂಗ್‌ಚುಕ್ ಹೋರಾಟ ಕೈಗೊಂಡಿರುವ ನಡುವೆ, ಅವರ ಸಂಸ್ಥೆಗಳ ಮೇಲೆ ಸಿಬಿಐ ತನಿಖೆ ಆರಂಭಿಸಿರುವುದು ಗಮನಾರ್ಹ.

ಲಡಾಖ್ ರಾಜ್ಯ ಸ್ಥಾನಮಾನ ವಿವಾದ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...