Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ (ಸೆ.23) ಮಧ್ಯಂತರ ಆದೇಶ ನೀಡಿದೆ.

ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಿಂದ ಪಡೆದ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದೆ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ ಎಂದು ಸಾರ್ವಜನಿಕರಿಗೆ ತಿಳಿಸಲು ಸೂಚಿಸಿದೆ.

ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ತಡೆ ಹಿಡಿಯಲು ಯಾವುದೇ ಕಾರಣವಿಲ್ಲ. ಆದರೆ, ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಮತ್ತು ಅದನ್ನು ಗೌಪ್ಯವಾಗಿಡಬೇಕು. ಜೊತೆಗೆ, ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ, ಯಾರೂ ಒತ್ತಾಯದಿಂದ ಮಾಹಿತಿ ಕೊಡಬೇಕಾಗಿಲ್ಲ ಎಂದು ಸಾರ್ವಜನಿಕವಾಗಿ ತಿಳಿಸಬೇಕು. ಸಮೀಕ್ಷೆಗಾರರು ಆರಂಭದಲ್ಲಿಯೇ ಜನರಿಗೆ ಇದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ಹೇಳಿದೆ.

ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು, “ಈ ಸಮೀಕ್ಷೆಯು ಒಂದು ವರ್ಗ ಅಥವಾ ಜಾತಿಗೆ ಸಮರ್ಪಕ ಪ್ರಾತಿನಿದ್ಯ ಸಿಕ್ಕಿದೆಯೇ.. ಇಲ್ಲವೇ? ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲು ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಇಚ್ಛೆಗೆ ಬಿಟ್ಟದ್ದು, ಯಾರನ್ನೂ ಒತ್ತಾಯಪೂರ್ವಕವಾಗಿ ಭಾಗವಹಿಸಲು ಹೇಳಿಲ್ಲ, ಮತ್ತು ಇದನ್ನು ಸಮೀಕ್ಷೆಗಾರರಿಗೆ ತರಬೇತಿಯಲ್ಲಿ ತಿಳಿಸಲಾಗಿದೆ ಎಂದಿದ್ದರು.

ಸಮೀಕ್ಷೆಯಲ್ಲಿ ಭಾಗವಹಿಸುವುದು ಐಚ್ಛಿಕವಾಗಿದ್ದರೂ, ಅದಕ್ಕೆ ವಿರೋಧ ಇದ್ದೇ ಇರುತ್ತದೆ. ಕೆ.ಎಸ್. ಪುಟ್ಟಸ್ವಾಮಿ ಕೇಸ್‌ನಿಂದಾಗಿ ವೈಯಕ್ತಿಕ ಮಾಹಿತಿ ಸಂಗ್ರಹದ ನಿಯಮಗಳು ಬದಲಾಗಿವೆ, ಮತ್ತು ತಮ್ಮ ಮಾಹಿತಿಯನ್ನು ಯಾರೊಂದಿಗೆ, ಹೇಗೆ ಹಂಚಿಕೊಳ್ಳಬೇಕು ಎಂಬ ನಿಯಂತ್ರಣವೂ ಗೌಪ್ಯತೆಯ ಒಂದು ಭಾಗವಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್ ಸುಬ್ಬಾ ರೆಡ್ಡಿ ವಾದಿಸಿದ್ದರು.

ಸರ್ಕಾರವು ಸಂಗ್ರಹಿಸಿದ ಮಾಹಿತಿಯನ್ನು ಸರಿಯಾಗಿ ನಿಯಂತ್ರಿಸದೆ, ಅದನ್ನು ಅಸುರಕ್ಷಿತವಾಗಿ ಬಿಡುತ್ತದೆ. ಸಮೀಕ್ಷೆಯು ಜನರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ಇದು ಸರಿಯೇ ಎಂದು ಪರೀಕ್ಷಿಸಲು ಸಮಾನತೆಯ ನಿಯಮವನ್ನು ಬಳಸಬೇಕು, ಮತ್ತು ಆ ಪರೀಕ್ಷೆ ಮುಗಿಯುವವರೆಗೆ ಸಮೀಕ್ಷೆಯನ್ನು ನಿಲ್ಲಿಸಬೇಕು ಎಂದು ವಿವೇಕ್ ಸುಬ್ಬಾ ರೆಡ್ಡಿ ಕೋರಿದ್ದರು.

ಆಧಾರ್ ದತ್ತಾಂಶ ಸೋರಿಕೆಯಾಗುವ ಸಾಧ್ಯತೆ ಇದೆ ಎಂಬ ವಾದಕ್ಕೆ, ಆಯೋಗ ಸಂಗ್ರಹಿಸುವ ಮಾಹಿತಿಯು ಆಧಾರ್‌ಗೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸುವ ವ್ಯಕ್ತಿಯು ಆಧಾರ್ ಸಂಖ್ಯೆಯನ್ನು ಹೊಂದಿದ್ದಾನೆ ಎಂಬ ವಿವರವನ್ನು ಮಾತ್ರ ದಾಖಲಿಸಲಾಗುತ್ತದೆ ಎಂದಿದೆ.

ರಾಜ್ಯ ಸರ್ಕಾರ ಇದನ್ನು ಸಮೀಕ್ಷೆ ಎಂದು ಹೇಳುತ್ತಿದ್ದರೂ, ಅವರು ಪ್ರಕಟಿಸಿದ ಕೈಪಿಡಿಯಲ್ಲಿ ಇದನ್ನು ಜಾತಿಗಣತಿ ಎಂದು ಉಲ್ಲೇಖಿಸಲಾಗಿದೆ ಎಂದು ಹಿರಿಯ ವಕೀಲ ಎಸ್. ಶ್ರೀರಂಗ ವಾದಿಸಿದ್ದರು.

ಈ ಸಮೀಕ್ಷೆಯನ್ನು ಜನಗಣತಿಯಂತೆ ಪರಿಗಣಿಸಲಾಗಿದೆ. ಒಂದು ವೇಳೆ ದೃಢೀಕರಣಕ್ಕಾಗಿ ಮೊಬೈಲ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದರೆ, 2021ರ ನಿಯಮಗಳನ್ನು ಪಾಲನೆ ಮಾಡಬೇಕು, ಆದರೆ ಆ ನಿಯಮಗಳನ್ನು ಈ ಸಮೀಕ್ಷೆಯಲ್ಲಿ ಅನುಸರಿಸಿಲ್ಲ ಎಂದಿದ್ದರು.

ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸುವವರ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಆದೇಶಿಸಿದೆ.

“ಒಬ್ಬರು ವ್ಯಕ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದರೆ, ಸಮೀಕ್ಷೆ ಮಾಡುವವರು ಒತ್ತಾಯಪೂರ್ವಕವಾಗಿ ಅವರಿಂದ ಯಾವುದೇ ಮಾಹಿತಿಯನ್ನು ಪಡೆಯಲು ಪ್ರಯತ್ನಿಸಬಾರದು. ಆಯೋಗವು ಒಂದು ಕೆಲಸದ ದಿನದೊಳಗೆ (working Day) ಈ ಕುರಿತು ಅಫಿಡವಿಟ್ ಸಲ್ಲಿಸಬೇಕು. ಅದರಲ್ಲಿ ಸಂಗ್ರಹಿಸಿದ ಮತ್ತು ಶೇಖರಿಸಿದ ದತ್ತಾಂಶಗಳ ಗೌಪ್ಯತೆಗಾಗಿ ತೆಗೆದುಕೊಂಡ ಕ್ರಮಗಳನ್ನು ಸ್ಪಷ್ಟವಾಗಿ ತಿಳಿಸಬೇಕು” ಎಂದು ನ್ಯಾಯಾಲಯ ಸೂಚಿಸಿದೆ.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಪ್ರತ್ಯೇಕ ಪಿಐಎಲ್‌ಗಳನ್ನು ಸಲ್ಲಿಸಿದ್ದರು.

Courtesy: livelaw.in

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...