Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: 'ಜನಶಕ್ತಿ ಜನತಾದಳ' ಹೆಸರಿನಲ್ಲಿ ನೂತನ ಪಕ್ಷ ಸ್ಥಾಪಿಸಿದ ತೇಜ್ ಪ್ರತಾಪ್ 

ಬಿಹಾರ ವಿಧಾನಸಭಾ ಚುನಾವಣೆ: ‘ಜನಶಕ್ತಿ ಜನತಾದಳ’ ಹೆಸರಿನಲ್ಲಿ ನೂತನ ಪಕ್ಷ ಸ್ಥಾಪಿಸಿದ ತೇಜ್ ಪ್ರತಾಪ್ 

- Advertisement -
- Advertisement -

ಇತ್ತೀಚೆಗೆ ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್, “ಬಿಹಾರದಲ್ಲಿ ದೀರ್ಘ ಯುದ್ಧಕ್ಕಾಗಿ ಹೊಸ ಪಕ್ಷವನ್ನು ರಚಿಸಿದ್ದೇವೆ” ಎಂದು ಶುಕ್ರವಾರ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ತೇಜ್ ಪ್ರತಾಪ್, ಜನಶಕ್ತಿ ಜನತಾದಳದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮನ್ನು ‘ರಾಷ್ಟ್ರೀಯ ಅಧ್ಯಕ್ಷರು’ ಎಂದು ಘೋಷಣೆ ಮಾಡಿದ್ದು, ‘ಕಪ್ಪು ಹಲಗೆ’ಯನ್ನು ಅವರ ಪಕ್ಷದ ಚಿಹ್ನೆಯಾಗಿ ಬಳಸಿದ್ದಾರೆ.

ಚುನಾವಣಾ ಆಯೋಗವನ್ನು ಉಲ್ಲೇಖಿಸಿ ಮಾಡಿರುವ ವರದಿ ಪ್ರಕಾರ, ಈಗಾಗಲೇ ಪಕ್ಷವನ್ನು ನೋಂದಾಯಿಸಿ ಚಿಹ್ನೆಯನ್ನು ಅವರಿಗೆ ನೀಡಲಾಗಿದೆಯೇ ಎಂಬುದು ಈವರೆಗೆ ತಿಳಿದಿಲ್ಲ.

ಆಗಸ್ಟ್‌ನಲ್ಲಿ, ತೇಜ್‌ ಪ್ರತಾಪ್ ಯಾದವ್ ತಮ್ಮ ನೇತೃತ್ವದಲ್ಲಿ ಐದು ಪಕ್ಷಗಳ ಒಕ್ಕೂಟ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿಕೊಂಡಿದ್ದರು. ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇತ್ತೀಚೆಗೆ, ಲಾಲು ಪ್ರದಾಶ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಬಂಡಾಯವೆದ್ದು, ತನ್ನ ತಂದೆ, ಸಹೋದರರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಮತ್ತು ಸಹೋದರಿ ಮಿಸಾ ಭಾರ್ತಿ (ಲೋಕಸಭಾ ಸದಸ್ಯೆ) ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಅನ್‌ಫಾಲೋ ಮಾಡಿದ್ದಾರೆ. ತೇಜಸ್ವಿ ಅವರ ಆಪ್ತ ಮಿತ್ರ ಸಂಜಯ್ ಯಾದವ್, ರಾಜ್ಯಸಭಾ ಸದಸ್ಯರೂ ಆಗಿದ್ದಾರೆ ಎಂಬ ಕಾರಣಕ್ಕೆ ಅವರ ಕುಟುಂಬದಲ್ಲಿ ವಿವಾದ ಉಂಟಾಗಿತ್ತು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೋಹಿಣಿ ಬಯಸಿದ್ದರು ಎಂದು ನಂಬಲಾಗಿತ್ತು. ಆದರೆ ತೇಜಸ್ವಿ ಅವರನ್ನು ನಿರ್ಲಕ್ಷಿಸಿದರು ಎನ್ನಲಾಗಿದೆ.

ಲಡಾಖ್ ಹಿಂಸಾಚಾರ: ಎನ್‌ಎಸ್‌ಎ ಕಾಯ್ದೆಯಡಿ ಸೋನಮ್ ವಾಂಗ್‌ಚುಕ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...