Homeಮುಖಪುಟಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವು: ಪೊಲೀಸ್ ಅಧಿಕಾರಿಗಳ ಬಂಧನಕ್ಕೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವು: ಪೊಲೀಸ್ ಅಧಿಕಾರಿಗಳ ಬಂಧನಕ್ಕೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಆದಿವಾಸಿ ವ್ಯಕ್ತಿಯೊಬ್ಬರ ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಆರೋಪ ಹೊತ್ತಿರುವ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಕ್ಟೋಬರ್ 7ರೊಳಗೆ ಬಂಧಿಸಲು ವಿಫಲವಾದರೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಮಧ್ಯಪ್ರದೇಶ ಸರ್ಕಾರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಎಚ್ಚರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿ. ಇಲ್ಲದಿದ್ದರೆ ಈ ವಿಷಯವನ್ನು ಹೇಗೆ ಇತ್ಯರ್ಥಪಡಿಸಬೇಕೆಂದು ನಮಗೆ ಗೊತ್ತಿದೆ. ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಸಿಬಿಐ ಮತ್ತು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌  ಎಚ್ಚರಿಕೆ ನೀಡಿದೆ.

ಜುಲೈ 2024ರಲ್ಲಿ, ಮದುವೆಗೆ ಕೆಲ ದಿನಗಳ ಮುನ್ನ, 25 ವರ್ಷದ ದೇವ ಪಾರ್ಧಿ ಎಂಬ ಆದಿವಾಸಿ ಯುವಕ ಮತ್ತು ಅವರ ಚಿಕ್ಕಪ್ಪ ಗಂಗಾರಾಮ್ ಪಾರ್ಧಿ ಅವರನ್ನು ಕಳ್ಳತನದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಬಳಿಕ ದೇವ ಪಾರ್ಧಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬಕ್ಕೆ ತಿಳಿಸಲಾಗಿತ್ತು.

ದೇವ ಪಾರ್ಧಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿಕೊಂಡರೂ, ಕಸ್ಟಡಿಯಲ್ಲಿ ಇಬ್ಬರೂ ವ್ಯಕ್ತಿಗಳಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಮಧ್ಯಪ್ರದೇಶ ಪೊಲೀಸರು ಈ ಪ್ರಕರಣದ ತನಿಖೆಯನ್ನು ‘ನ್ಯಾಯಯುತ’ ಮತ್ತು ‘ಪಾರದರ್ಶಕ ರೀತಿಯಲ್ಲಿ’ ನಡೆಸಿಲ್ಲ ಎಂದು ಸುಪ್ರೀಂ ಕೋರ್ಟ್ ಕಂಡುಕೊಂಡ ನಂತರ, ಮೇ 15 ರಂದು ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು.

ಅಧಿಕಾರಿಗಳು ಹೊಣೆಗಾರರೆಂದು ಕಂಡುಬಂದರೆ, ಒಂದು ತಿಂಗಳೊಳಗೆ ಅವರನ್ನು ಬಂಧಿಸಬೇಕು ಎಂದು ಸುಪ್ರೀಂ ಕೋರ್ಟ್ ಆ ಸಮಯದಲ್ಲಿ ನಿರ್ದೇಶಿಸಿತ್ತು.

ಮಂಗಳವಾರ, ದೇವ ಪಾರ್ಧಿ ಅವರ ತಾಯಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಆರೋಪಿಗಳಾದ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲು ಸಿಬಿಐಗೆ ಎರಡು ದಿನಗಳ ಕಾಲಾವಕಾಶ ನೀಡಿತ್ತು.

ಈ ವೇಳೆ ಪ್ರತಿಕ್ರಿಯಿಸಿದ್ದ ಸಿಬಿಐ, ಆರೋಪಿ ಪೊಲೀಸ್ ಅಧಿಕಾರಿಗಳಾದ ಸಂಜೀವ್ ಸಿಂಗ್ ಮಾಳವೀಯ ಮತ್ತು ಉತ್ತಮ್ ಸಿಂಗ್ ಕುಶ್ವಾಹ ಏಪ್ರಿಲ್‌ನಿಂದ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿತ್ತು. ಇದನ್ನು ಕೇಳಿದ ನ್ಯಾಯಾಧೀಶರು ಕೆಂಡಾಮಂಡಲರಾಗಿದ್ದರು.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು, ಸಮವಸ್ತ್ರದಲ್ಲಿರುವವರಿಗೆ ಕಾನೂನು ಭಿನ್ನವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಆರೋಪಿಗಳು ಖಾಸಗಿ ವ್ಯಕ್ತಿಗಳಾಗಿದ್ದರೆ ಅವರನ್ನು 15 ದಿನಗಳಲ್ಲಿ ಬಂಧಿಸುತ್ತಿದ್ದರಿ. ಇವರು ಇನ್ಸ್‌ಪೆಕ್ಟರ್‌ಗಳಾಗಿರುವುದರಿಂದ ಬಂಧಿಸಲು ನಿಮಗೆ ಕಷ್ಟವಾಗುತ್ತಿದೆಯಾ? ಎಂದು ನ್ಯಾಯಾಧೀಶರು ಖಾರವಾಗಿ ಪ್ರಶ್ನಿಸಿದ್ದಾರೆ.

ತಲೆಮರೆಸಿಕೊಂಡಿರುವ ಅಧಿಕಾರಿಗಳು ಇನ್ನೂ ಸಂಬಳ ಪಡೆಯುತ್ತಿದ್ದಾರೆ. ಅವರನ್ನು ಏಕೆ ಅಮಾನತುಗೊಳಿಸಿಲ್ಲ? ಎಂದು ಗುರುವಾರದ ವಿಚಾರಣೆ ವೇಳೆ ನ್ಯಾಯಾಧೀಶರು ಕೇಳಿದ್ದರು.

ಆರೋಪಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅವರ ಸಂಬಳವನ್ನು ನಿಲ್ಲಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಶುಕ್ರವಾರ ಪೀಠಕ್ಕೆ ತಿಳಿಸಿದ್ದಾರೆ.

ಆರೋಪಿ ಅಧಿಕಾರಿಗಳನ್ನು ಪತ್ತೆಹಚ್ಚಲು ಕಷ್ಟವಾಗುತ್ತಿದೆ ಎಂಬ ಸಿಬಿಐ ಹೇಳಿಕೆಯನ್ನು ನ್ಯಾಯ ಪೀಠ ತಿರಸ್ಕರಿಸಿದೆ.

ಆರೋಪಿಗಳ ಮಾಹಿತಿ ನೀಡುವವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಅವರ ಹಣಕಾಸಿನ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗಿದೆ. ಟೋಲ್ ಮತ್ತು ಸಾಮಾಜಿಕ ಮಾಧ್ಯಮ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೆ, ಭೌತಿಕ ಕಣ್ಗಾವಲು ಇರಿಸಲಾಗಿದೆ ಎಂಬ ಸಿಬಿಐ ಹೇಳಿಕೆಯನ್ನು ‘ಕಣ್ಣೊರೆಸುವ ತಂತ್ರ’ ಎಂದು ನ್ಯಾಯಾಲಯ ಟೀಕಿಸಿದೆ.

ಅಕ್ಟೋಬರ್ 7 ರೊಳಗೆ ಆರೋಪಿಗಳನ್ನು ಬಂಧಿಸಿ, ಆದೇಶ ಅನುಸರಣಾ ವರದಿಯನ್ನು ಸಲ್ಲಿಸಬೇಕು. ಅಕ್ಟೋಬರ್ 8 ರಂದು ಮುಂದಿನ ವಿಚಾರಣೆಯನ್ನು ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...