Homeಮುಖಪುಟದೆಹಲಿ। 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ; ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಬಂಧನ

ದೆಹಲಿ। 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ; ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಬಂಧನ

- Advertisement -
- Advertisement -

ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಆರ್ಥಿಕ ವಂಚನೆ ಜಾಲವನ್ನು ನಡೆಸುತ್ತಿದ್ದ ಪ್ರಕರಣದ ಆರೋಪಿ, ಸ್ವಯಂ ಘೋಷಿತ ‘ದೇವಮಾನವ’ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಒಂದು ವಾರದ ಶೋಧದ ಬಳಿಕ, ಭಾನುವಾರ (ಸೆ.28) ಬೆಳಗಿನ ಜಾವ 3.30ರ ಸುಮಾರಿಗೆ  ಆಗ್ರಾದ ತಾಜ್‌ಗಂಜ್‌ ಪ್ರದೇಶದ ಹೋಟೆಲ್‌ನಲ್ಲಿ ಚೈತನ್ಯಾನಂದನನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ದೆಹಲಿಯ ಮ್ಯಾನೇಜ್‌ಮೆಂಟ್ ಇನ್ಸಿಟ್ಯೂಟ್‌ನ ಮಾಜಿ ಅಧ್ಯಕ್ಷನಾಗಿರುವ 62 ವರ್ಷದ ಚೈತನ್ಯಾನಂದ, ಸಂಸ್ಥೆಗೆ ಆರ್ಥಿಕ ದುರ್ಬಲ ವರ್ಗ (ಇಡಬ್ಲ್ಯೂಎಸ್) ಮೀಸಲಾತಿ ಅಡಿ ದಾಖಲಾಗುತ್ತಿದ್ದ ವಿದ್ಯಾರ್ಥಿನಿಯರನ್ನು ಶೋಷಣೆ ಮಾಡುತ್ತಿದ್ದ. ವಿದ್ಯಾರ್ಥಿನಿಯರ ಮೊಬೈಲ್ ಫೋನ್‌ಗಳು ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ತನ್ನ ಬಳಿ ಇಟ್ಟುಕೊಳ್ಳುತ್ತಿದ್ದ. ಇದರಿಂದ ಅವರು ಇಕ್ಕಟ್ಟಿಗೆ ಸಿಲುಕಿ ಶೋಷಣೆ ವಿರುದ್ದ ದೂರು ನೀಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸರು ಆರೋಪಿಸಿದ್ದಾರೆ.

ತನಗೆ ಬೇಕಾದ ವಿದ್ಯಾರ್ಥಿನಿಯರನ್ನು ಗುರುತಿಸುತ್ತಿದ್ದ ಚೈತನ್ಯಾನಂದ, ಕಲಿಕೆಗೆ ಅಡ್ಡಿಯಾಗುತ್ತದೆ ಎಂಬ ನೆಪ ಅವರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳುತ್ತಿದ್ದ. ಬಳಿಕ ಅವರನ್ನು ಶೋಷಣೆ ಮಾಡಲು ಪ್ರಾರಂಭಿಸುತ್ತಿದ್ದ ಎಂದು ಸಂತ್ರಸ್ತೆಯೊಬ್ಬರು ಗೆಳತಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಚೈತನ್ಯಾನಂದ ವಿರುದ್ಧ ಸಂಸ್ಥೆಯ 17 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುವುದು, ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸುವುದು, ಉಚಿತ ವಿದೇಶ ಪ್ರವಾಸಗಳ ಆಮಿಷ ಒಡ್ಡುವುದು ಸೇರಿದಂತೆ ಅನೇಕ ಆರೋಪವಿದೆ. ಮಹಿಳಾ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿದ್ದರೆಂಬ ಸಂಗತಿ ಕೂಡ ಬೆಳಕಿಗೆ ಬಂದಿದೆ.

ಪ್ರಕರಣ ಬಹಿರಂಗವಾದ ತಕ್ಷಣ ಶೃಂಗೇರಿ ಮಠದ ಆಶ್ರಮದ ಸಂಸ್ಥೆಯ ಆಡಳಿತ ಮಂಡಳಿ ಚೈತನ್ಯಾನಂದನನ್ನು ಹುದ್ದೆಯಿಂದ ವಜಾಗೊಳಿಸಿತ್ತು.

ಶುಕ್ರವಾರ ದೆಹಲಿ ನ್ಯಾಯಾಲಯವು ವಂಚನೆ, ನಕಲಿ ದಾಖಲೆ ಮತ್ತು ಪಿತೂರಿ ಪ್ರಕರಣದಲ್ಲಿ ಚೈತನ್ಯಾನಂದನ  ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

“ವಂಚನೆಯ ಸಂಪೂರ್ಣ ಜಾಲವನ್ನು ಪತ್ತೆ ಹಚ್ಚಲು ಕಸ್ಟಡಿ ವಿಚಾರಣೆ ಅಗತ್ಯ” ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಹೇಳಿದ್ದರು.

ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚಿಸಿದ ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...