Homeಮುಖಪುಟಕರೂರು ಕಾಲ್ತುಳಿತ ದುರಂತ | ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ...

ಕರೂರು ಕಾಲ್ತುಳಿತ ದುರಂತ | ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ನಟ ವಿಜಯ್

- Advertisement -
- Advertisement -

ನಟ-ರಾಜಕಾರಣಿ ವಿಜಯ್ ಅವರು ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯ್, “ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಯಾರು ಸಾಂತ್ವನದ ಮಾತುಗಳನ್ನಾಡಿದರೂ ನಮ್ಮ ಪ್ರೀತಿಪಾತ್ರರ ನಷ್ಟವು ಅಸಹನೀಯವಾದುದು. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳನ್ನು ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ 2 ಲಕ್ಷ ರೂಪಾಯಿಗಳನ್ನು ನೀಡಲು ಉದ್ದೇಶಿಸಿದ್ದೇನೆ. ಇಂತಹ ನಷ್ಟದ ಸಂದರ್ಭದಲ್ಲಿ ಈ ಮೊತ್ತವು ಏನೂ ಅಲ್ಲ. ಈ ಸಂದರ್ಭದಲ್ಲಿ ನಿಮ್ಮ ಕುಟುಂಬದ ಸದಸ್ಯನಾಗಿ ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಮುಂದುವರಿದು, “ನನ್ನ ಹೃದಯ ಮತ್ತು ಮನಸ್ಸು ಆಳವಾದ ಭಾರದಿಂದ ತುಂಬಿಹೋಗಿದೆ. ನಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಅಪಾರ ದುಃಖದ ಮಧ್ಯೆ, ನನ್ನ ಹೃದಯ ಅನುಭವಿಸುವ ನೋವನ್ನು ವ್ಯಕ್ತಪಡಿಸಲು ಪದಗಳು ಸಿಗುತ್ತಿಲ್ಲ. ನನ್ನ ಕಣ್ಣುಗಳು ಮತ್ತು ಮನಸ್ಸು ದುಃಖದಿಂದ ಆವೃತವಾಗಿವೆ” ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ತಮಿಳುನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. “ನಮ್ಮ ರಾಜ್ಯದ ಇತಿಹಾಸದಲ್ಲಿ, ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ಜನರು ಪ್ರಾಣ ಕಳೆದುಕೊಂಡಿಲ್ಲ. ಭವಿಷ್ಯದಲ್ಲಿಯೂ ಇಂತಹ ದುರಂತ ಸಂಭವಿಸಬಾರದು” ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ತನಿಖೆಗಾಗಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸುವುದಾಗಿಯೂ ಅವರು ಘೋಷಿಸಿದ್ದಾರೆ.

ಶನಿವಾರ ಸಂಜೆ ತಮಿಳುನಾಡಿನ ಕರೂರಿನಲ್ಲಿ ವಿಜಯ್ ರ್‍ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿದ್ದು, 56 ಜನರು ಗಾಯಗೊಂಡಿದ್ದಾರೆ.

ಕರೂರು ಕಾಲ್ತುಳಿತ। ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ, ಆಯೋಗದ ವರದಿ ಆಧರಿಸಿ ಮುಂದಿನ ಕ್ರಮ: ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...