Homeಮುಖಪುಟಕರೂರು ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಹೈಕೋರ್ಟ್‌ ಮೊರೆ ಹೋದ ಟಿವಿಕೆ: ಮೃತರ ಸಂಖ್ಯೆ...

ಕರೂರು ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಹೈಕೋರ್ಟ್‌ ಮೊರೆ ಹೋದ ಟಿವಿಕೆ: ಮೃತರ ಸಂಖ್ಯೆ 40ಕ್ಕೆ ಏರಿಕೆ

- Advertisement -
- Advertisement -

ಶನಿವಾರ (ಸೆ.27) ಕರೂರಿನಲ್ಲಿ ಆಯೋಜಿಸಿದ್ದ ಪಕ್ಷದ ರ್‍ಯಾಲಿಯಲ್ಲಿ ನಡೆದ ಕಾಲ್ತುಳಿತ ದುರಂತದ ಬಗ್ಗೆ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ನಿರ್ದೇಶಿಸಲು ಕೋರಿ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಭಾನುವಾರ (ಸೆ.28) ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ.

ಟಿವಿಕೆ ಕಾನೂನು ವಿಭಾಗದ ಅಧ್ಯಕ್ಷ ಎಸ್. ಅರಿವಝಗನ್ ನೇತೃತ್ವದ ವಕೀಲರ ಗುಂಪೊಂದು ಚೆನ್ನೈನ ಗ್ರೀನ್‌ವೇಸ್ ರಸ್ತೆಯಲ್ಲಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ದಂಡಪಾಣಿ ಅವರ ಮನೆಗೆ ತೆರಳಿ ಮನವಿ ಮಾಡಿದೆ ಅಥವಾ ಪ್ರಸ್ತಾಪ ಮುಂದಿಟ್ಟಿದೆ.

ಅಲ್ಲದೆ, ಘಟನೆಯ ಬಗ್ಗೆ ಹೈಕೋರ್ಟ್‌ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಿನಂತಿಸಿದೆ.

ಟಿವಿಕೆ ಪಕ್ಷದ ಪದಾಧಿಕಾರಿ ನಿರ್ಮಲ್ ಕುಮಾರ್ ಅವರ ಪ್ರಕಾರ, ನ್ಯಾಯಾಧೀಶರು ವಕೀಲರಿಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸೋಮವಾರ (ಸೆ.30) ಮಧ್ಯಾಹ್ನ 2.15ಕ್ಕೆ ಅರ್ಜಿ ವಿಚಾರಣೆಗೆ ಬರಲಿದೆ.

ಈ ನಡುವೆ ಕರೂರು ಕಾಲ್ತುಳಿತ ದುರಂತದ ತನಿಖೆ ಪೂರ್ಣಗೊಳ್ಳುವವರೆಗೆ ನಟ ವಿಜಯ್ ಅವರ ಟಿವಿಕೆ ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ತುರ್ತು ಅರ್ಜಿಯನ್ನು ನ್ಯಾಯಮೂರ್ತಿ ಎನ್. ಸೆಂಥಿಲ್‌ಕುಮಾರ್ ಇಂದು ಸಂಜೆ 4:30ಕ್ಕೆ ವಿಚಾರಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ದುರಂತದ ಬಗ್ಗೆ ತನಿಖೆ ನಡೆಸಲು ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದ ಆಯೋಗವು ಭಾನುವಾರ (ಸೆ.28) ತಡರಾತ್ರಿ ಕರೂರಿಗೆ ಆಗಮಿಸಲಿದೆ ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.

ಆಯೋಗ ಸಲ್ಲಿಸುವ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲು ನೆರೆಯ ಜಿಲ್ಲೆಗಳಿಂದ 345ಕ್ಕೂ ಹೆಚ್ಚು ವೈದ್ಯರು ಮತ್ತು ದಾದಿಯರನ್ನು ನಿಯೋಜಿಸಲಾಗಿದೆ ಎಂದು ಉದಯನಿಧಿ ಮಾಹಿತಿ ನೀಡಿದ್ದಾರೆ.

ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಸಂತ್ರಸ್ತರಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ಈ ನಡುವೆ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 31 ವರ್ಷದ ಕವಿನ್ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ ಭಾನುವಾರ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕರೂರು ಕಾಲ್ತುಳಿತ ದುರಂತ | ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...