Homeಮುಖಪುಟ'ಟ್ರೋಫಿ ಸ್ವೀಕರಿಸಲು ನಿರಾಕರಿಸಿರುವುದು ನಾಟಕ’: ಸೂರ್ಯಕುಮಾರ್–ನಖ್ವಿ ಕೈಕುಲುವ ವಿಡಿಯೋ ಹಂಚಿಕೊಂಡ ಸಂಜಯ್ ರಾವತ್

‘ಟ್ರೋಫಿ ಸ್ವೀಕರಿಸಲು ನಿರಾಕರಿಸಿರುವುದು ನಾಟಕ’: ಸೂರ್ಯಕುಮಾರ್–ನಖ್ವಿ ಕೈಕುಲುವ ವಿಡಿಯೋ ಹಂಚಿಕೊಂಡ ಸಂಜಯ್ ರಾವತ್

- Advertisement -
- Advertisement -

ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಜಯಗಳಿಸಿದ ಬಳಿಕ ಭಾರತ ತಂಡ ಎಸಿಸಿ ಮುಖ್ಯಸ್ಥ ಹಾಗೂ ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿರುವುದನ್ನು ಶಿವಸೇನಾ ಸಂಸದ ಸಂಜಯ್ ರಾವತ್ ‘ನಾಟಕ’ ಎಂದಿದ್ದಾರೆ.

ಏಷ್ಯಾ ಕಪ್ ಸರಣಿಯ ಆರಂಭದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊಹ್ಸಿನ್ ನಖ್ವಿಯೊಂದಿಗೆ ಕೈಕುಲುಕಿದ, ಸಂಭಾಷಣೆ ನಡೆಸಿದ ಮತ್ತು ಫೋಟೋಗೆ ಪೋಸ್ ನೀಡಿದ ವಿಡಿಯೋಗಳನ್ನು ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾವತ್ ಹಂಚಿಕೊಂಡಿದ್ದಾರೆ.

“ಸರಣಿಯ ಆರಂಭದಲ್ಲಿ, 15 ದಿನಗಳ ಹಿಂದೆ ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಅವರೊಂದಿಗೆ ಕೈಕುಲುಕಿದ, ಫೋಟೋ ತೆಗೆಸಿಕೊಂಡ ಈ ಜನರು ಈಗ ದೇಶದ ಮುಂದೆ ಶೋ ಆಫ್ ಮಾಡುತ್ತಿದ್ದಾರೆ. ನಿಮ್ಮ ರಕ್ತದಲ್ಲಿ ಅಷ್ಟೊಂದು ದೇಶಭಕ್ತಿ ಇದ್ದಿದ್ದರೆ, ನೀವು ಪಾಕಿಸ್ತಾನದೊಂದಿಗೆ ಮೈದಾನಕ್ಕೇ ಇಳಿಯಬಾರದಿತ್ತು. ಮೇಲಿನಿಂದ ಕೆಳಕ್ಕೆ, ಎಲ್ಲವೂ ಕೇವಲ ನಾಟಕ. ನಮ್ಮ ಜನ ಮೂರ್ಖರು” ಎಂದು ರಾವತ್ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾವತ್, “ಟ್ರೋಫಿ ಸ್ವೀಕರಿಸದಿರುವುದು ಕೇವಲ ನಾಟಕ. ನಾನು ಹಂಚಿದ ವಿಡಿಯೋದಲ್ಲಿ ಕೈಕುಲುಕಿರುವುದು, ಚಹಾ ಕುಡಿದಿರುವುದು, ಫೋಟೋ ತೆಗೆಸಿಕೊಂಡಿರುವುದು ಎಲ್ಲವೂ ಸ್ಪಷ್ಟವಾಗಿದೆ. ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಭಾರತ–ಪಾಕಿಸ್ತಾನದ ನಡುವಿನ ಪಂದ್ಯ ಸೇನೆ ಮತ್ತು ಪಹಲ್ಗಾಂ ದಾಳಿಯ ಹುತಾತ್ಮರಿಗೆ ಮಾಡಿದ ಅವಮಾನ ಎಂದ ರಾವತ್, “ಪ್ರಶ್ನೆ ಒಂದೇ – ಪಾಕಿಸ್ತಾನದ ವಿರುದ್ಧ ಆಟವಾಡುವುದೇಕೆ? ಹುತಾತ್ಮ ಸೈನಿಕರ ತ್ಯಾಗವನ್ನು ಗೌರವಿಸುವುದಾದರೆ, ಇಂತಹ ಪ್ರದರ್ಶನ ಬೇಡವಿತ್ತು” ಎಂದು ಹೇಳಿದ್ದಾರೆ.

ಈ ಕುರಿತಂತೆ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸೌರಭ್ ಭಾರದ್ವಾಜ್ ಕೂಡ ಪ್ರತಿಕ್ರಿಯಿಸಿದ್ದು, “ಸರಣಿಯ ಆರಂಭದಲ್ಲಿ ಪಾಕಿಸ್ತಾನದ ಸಚಿವರೊಂದಿಗೆ ಕೈಕುಲುಕಿ ಫೋಟೋ ತೆಗೆಸಿಕೊಂಡಿದ್ದರು. ಆದರೆ, ಭಾರತದಲ್ಲಿ ವಿರೋಧ ವ್ಯಕ್ತವಾದ ಬಳಿಕ ಆಟಗಾರರಿಗೆ ಪ್ರಚಾರಕ್ಕಾಗಿ ಹೊಸ ಸ್ಕ್ರಿಪ್ಟ್ ನೀಡಲಾಗಿದೆ” ಎಂದು ಟೀಕಿಸಿದ್ದಾರೆ.

ಏಷ್ಯಾ ಕಪ್ ವಿವಾದ: ಮೊಹ್ಸಿನ್ ನಖ್ವಿ ವಿರುದ್ಧ ಐಸಿಸಿ ಸಭೆಯಲ್ಲಿ ಪ್ರತಿಭಟನೆ ದಾಖಲಿಸಲು ಮುಂದಾದ ಬಿಸಿಸಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...