Homeಅಂತರಾಷ್ಟ್ರೀಯಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಫಿಲಿಪೈನ್ಸ್‌ನ ಸೆಬೂ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಬೊಗೊ ನಗರದ ಬಳಿ ಕಡಲ ತೀರದಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಕಂಪನ ಸಂಭವಿಸಿದೆ. ಇದರ ಕೇಂದ್ರ ಬಿಂದು ಬೊಗೊ ನಗರಕ್ಕೆ ಸಮೀಪದಲ್ಲೇ ಇದೆ. ಗಾಯಾಳುಗಳಿಂದ ಆಸ್ಪತ್ರೆಗಳು ತುಂಬಿವೆ, ಆಸ್ಪತ್ರೆ ಸಿಬ್ಬಂದಿ ಒತ್ತಡ ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ ಎಂದು ರಫಿ ಅಲೆಜಾಂಡ್ರೊ ಎಂಬ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೆಬೂ ಪ್ರಾಂತ್ಯದ ವಿಪತ್ತು ನಿರ್ವಹಣಾ ಕಚೇರಿಯ ಮಾಹಿತಿಯ ಆಧಾರದ ಮೇಲೆ 69 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಖ್ಯೆಯನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಿವಿಲ್ ಡಿಫೆನ್ಸ್ ಕಚೇರಿಯ ಮಾಹಿತಿ ಅಧಿಕಾರಿ ಜೇನ್ ಅಬಾಪೊ ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯ ಪ್ರಕಾರ, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಫಿಲಿಪೈನ್ಸ್‌ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಬದುಕುಳಿದವರಿಗೆ ಶೀಘ್ರ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿಗಳು ಸ್ಥಳದಲ್ಲೇ ಇದ್ದು, ಪರಿಹಾರ ಕಾರ್ಯಾಚರಣೆಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪ ಸೂಚಿಸಿದ್ದಾರೆ.

ಸೆಬೂ ನಗರ ಫಿಲಿಪೈನ್ಸ್‌ನ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ 34 ಲಕ್ಷ ಜನರು ವಾಸಿಸುತ್ತಾರೆ. ಭೂಕಂಪದಿಂದ ಆಗಿರುವ ಹಾನಿಯ ಹೊರತಾಗಿಯೂ, ದೇಶದ ಎರಡನೇ ಅತಿ ಜನ ನಿಬಿಡ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಮ್ಯಾಕ್ಟಾನ್-ಸೆಬೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಸೆಬೂ ಬಳಿಕ ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಮತ್ತೊಂದು ನಗರವಾದ ಸ್ಯಾನ್ ರೆಮಿಜಿಯೊವನ್ನು ವಿಪತ್ತು ಘೋಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯವಾಗಲಿದೆ. ಸ್ಥಳಾಂತರಗೊಂಡವರಿಗೆ ಆಹಾರ ಮತ್ತು ನೀರಿನ ಅಗತ್ಯವಿದೆ, ಹಾಗೆಯೇ ಶೋಧ ಮತ್ತು ರಕ್ಷಣಾ ಕಾರ್ಯಕರ್ತರಿಗೆ ಸಹಾಯ ಮಾಡಲು ಭಾರೀ ಉಪಕರಣಗಳ ಅಗತ್ಯವಿದೆ ಎಂದು ನಗರದ ಉಪಮೇಯರ್ ಆಲ್ಫಿ ರೇನ್ಸ್ ಮನವಿ ಮಾಡಿದ್ದಾರೆ.

“ಭಾರೀ ಮಳೆಯಾಗುತ್ತಿದೆ ಮತ್ತು ವಿದ್ಯುತ್ ಇಲ್ಲ, ಆದ್ದರಿಂದ ನಮಗೆ ನಿಜವಾಗಿಯೂ ಸಹಾಯ ಬೇಕು. ವಿಶೇಷವಾಗಿ ನಗರದ ಉತ್ತರ ಭಾಗದಲ್ಲಿ, ಏಕೆಂದರೆ ಭೂಕಂಪದಿಂದ ನೀರಿನ ಪೂರೈಕೆ ಮಾರ್ಗಗಳು ಹಾನಿಗೊಳಗಾಗಿವೆ. ಇದರಿಂದ ನೀರಿನ ಕೊರತೆ ಎದುರಾಗಿದೆ” ಎಂದು ರೇನ್ಸ್ ಡಿಜೆಡ್‌ಎಂಎಂ ರೇಡಿಯೊಗೆ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು, ಭೂಮಿ ಕಂಪಿಸುವಾಗ ಜನರು ತಮ್ಮ ಮನೆಗಳಿಂದ ಓಡಿಹೋಗುವ ಮತ್ತು ಕಟ್ಟಡಗಳು ಕುಸಿಯುವ ದೃಶ್ಯಗಳನ್ನು ತೋರಿಸಿವೆ. 100 ವರ್ಷಗಳಿಗಿಂತ ಹಳೆಯ ಚರ್ಚ್‌ವೊಂದು ಕುಸಿದ ದೃಶ್ಯಗಳನ್ನು ಪ್ರಕಟಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಭೂಕಂಪವು ಭೂಮಿಯಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. 6.9 ತೀವ್ರತೆಯ ಪ್ರಬಲ ಕಂಪನದ ನಂತರ, 6.0 ತೀವ್ರತೆಯವರೆಗಿನ ಕೆಲವು ಸಣ್ಣ ಕಂಪನಗಳು ಆಗಿವೆ. ಆದರೆ, ಅವುಗಳಿಂದ ಸುನಾಮಿ ಅಪಾಯ ಇರಲಿಲ್ಲ. ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿಗಳು ಸಾಮಾನ್ಯ. ಏಕೆಂದರೆ ಆ ದೇಶ “ರಿಂಗ್ ಆಫ್ ಫೈರ್” ಪ್ರದೇಶದಲ್ಲಿದೆ. ಈ ವರ್ಷದ ಜನವರಿಯಲ್ಲಿ ಎರಡು ದೊಡ್ಡ ಭೂಕಂಪಗಳು ಸಂಭವಿಸಿದ್ದವು. ಆದರೆ, ಯಾವುದೇ ಜೀವಹಾನಿ ಆಗಿರಲಿಲ್ಲ. 2023ರಲ್ಲಿ ಸಂಭವಿಸಿದ ಭೂಕಂಪದಿಂದ 8 ಜನರು ಸಾವನ್ನಪ್ಪಿದ್ದರು.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...