Homeಕರ್ನಾಟಕಅಸಮಾನತೆ ಹೋಗಲಾಡಿಸಲು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಅಸಮಾನತೆ ಹೋಗಲಾಡಿಸಲು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಅಂಕಿ ಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ ಇದೆ ಎಂಬುದರ ಇದರಿಂದ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ (ಅ.1) ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಸಿಎಂ, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ

ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ ಉಂಟಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಹುಬ್ಬಳ್ಳಿ-ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ ಎಂದು ಸಿಎಂ ಮಾಹಿತಿ ನೀಡಿದರು.

ಕೇಂದ್ರದ ಪ್ರವಾಹ ಪರಿಹಾರ ಕೊಡಿಸಲಿ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಕೇಂದ್ರದಿಂದ ಪ್ರವಾಹ ಪರಿಹಾರ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ, 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರ ಪರಿಹಾರ ನೀಡದೇ, ಸುಪ್ರೀಂಕೋರ್ಟ್ ಬಳಿ ಹೋಗಿ ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸಲಿದೆ ಎಂದರು.

ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ

ಜಾತಿ ಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಯವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಇದು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಿ ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...