Homeಕರ್ನಾಟಕರಾಹುಲ್ ಗಾಂಧಿಗೆ ಜೀವ ಬೆದರಿಕೆ: ಪ್ರಧಾನಿ, ಗೃಹ ಸಚಿವರ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿಗೆ ಜೀವ ಬೆದರಿಕೆ: ಪ್ರಧಾನಿ, ಗೃಹ ಸಚಿವರ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ‌ ನಿಂತು ತಮ್ಮ ವಿರೋಧಿಗಳ‌ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದಿದ್ದಾರೆ.

ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ರಾಹುಲ್ ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ ಎಂದು ಸಿಎಂ ತಿಳಿಸಿದ್ದಾರೆ.

ಅಸಮಾನತೆ ಹೋಗಲಾಡಿಸಲು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...