Homeಮುಖಪುಟ'ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ': ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ...

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್‌ಗೆ ಬುಧವಾರ (ಅ.1) ಪತ್ರ ಬರೆದಿರುವ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ, ವಾಂಗ್ಚುಕ್ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಸರ್ಕಾರ ವಾಂಗ್ಚುಕ್ ಅವರಿಗೆ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಮೂರು ಪುಟಗಳ ಪತ್ರದಲ್ಲಿ ವಾಂಗ್ಚುಕ್ ಅವರ ಪತ್ನಿ, “ಕಳೆದ ನಾಲ್ಕು ವರ್ಷಗಳಿಂದ ಜನರ ಪರವಾಗಿ ಕೆಲಸ ಮಾಡುತ್ತಿದ್ದ ನನ್ನ ಪತಿಯ ವಿರುದ್ಧ ಸರ್ಕಾರ ಬೇಟೆ ಕೈಗೊಂಡಿದೆ. ಸೆಪ್ಟೆಂಬರ್ 26ರಂದು ಬಂಧಿಸಿದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಬರೆದಿದ್ದಾರೆ.

“ನನ್ನ ಪತಿಯನ್ನು ಎಲ್ಲಿ ಬಂಧಿಸಲಾಗಿದ್ದರೂ ಅವರನ್ನು ಫೋನ್‌ನಲ್ಲಿ ಮತ್ತು ವೈಯಕ್ತಿಕವಾಗಿ ಭೇಟಿಯಾಗಲು ಮತ್ತು ಮಾತನಾಡಲು ನನಗೆ ಅರ್ಹತೆ ಇಲ್ಲವೇ? ನನ್ನ ಪತಿ ಬಂಧನದ ಕಾರಣವನ್ನು ತಿಳಿದುಕೊಳ್ಳಲು ಮತ್ತು ನ್ಯಾಯಾಲಯದ ಮುಂದೆ ನ್ಯಾಯವನ್ನು ಪಡೆಯುವ ಅವರ ಕಾನೂನುಬದ್ಧ ಹಕ್ಕುಗಳನ್ನು ಸಮರ್ಥಿಸಲು ನಾನು ಸಹಾಯ ಮಾಡಲು ಸಾಧ್ಯವಿಲ್ಲವೇ? ನನ್ನ ಬಂಧನಕ್ಕೊಳಗಾದ ಪತಿಯ ಸ್ಥಿತಿಯನ್ನು ತಿಳಿದುಕೊಳ್ಳಲು ನನಗೆ ಅರ್ಹತೆ ಇಲ್ಲವೇ? ಭಾರತದ ಜವಾಬ್ದಾರಿಯುತ ನಾಗರಿಕಳಾಗಿ, ನಮಗೆ ಶಾಂತಿಯುತ ಅಭಿವ್ಯಕ್ತಿ ಮತ್ತು ಚಲನೆಯ ಸ್ವಾತಂತ್ರ್ಯದ ಹಕ್ಕಿಲ್ಲವೇ?” ಎಂದು ಗೀಂತಾಜಲಿ ತನ್ನ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಸಂವಿಧಾನದ 6ನೇ ಪರಿಚ್ಛೇಧದಡಿ ಸೇರಿಸಬೇಕು ಎಂದು ಸೋನಮ್ ವಾಂಗ್ಚುಕ್ ಹೋರಾಟ (ಉಪವಾಸ ಸತ್ಯಾಗ್ರಹ) ಕೈಗೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಯುವಜನರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಶುರು ಮಾಡಿದ್ದರು. ನಂತರ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು ಮತ್ತು 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾತ್ಮಕ ಪ್ರತಿಭಟನೆ ಬಳಿಕ 1980ರ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ವಾಂಗ್ಚುಕ್ ಪ್ರಚೋದನಕಾರಿ ಭಾಷಣಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ.

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...