Homeದಲಿತ್ ಫೈಲ್ಸ್ಗುಜರಾತ್| ದಲಿತ ಯುವತಿಯನ್ನು ಗರ್ಬಾ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಅವಮಾನ; ದೂರು ದಾಖಲು

ಗುಜರಾತ್| ದಲಿತ ಯುವತಿಯನ್ನು ಗರ್ಬಾ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಅವಮಾನ; ದೂರು ದಾಖಲು

- Advertisement -
- Advertisement -

ಗರ್ಬಾ ಕಾರ್ಯಕ್ರಮವೊಂದರಲ್ಲಿ ದಲಿತ ಯುವತಿಯನ್ನು ಆಕೆಯ ಜಾತಿ ಕಾರಣಕ್ಕೆ ಅವಮಾನಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಭರೋಡಿ ಗ್ರಾಮದ ನಾಲ್ವರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಗಾಂಧಿನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ 25 ವರ್ಷದ ರಿಂಕು ವಾಂಕರ್ ಎಂಬಾಕೆ ವಿರ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳಾದ ಲೋಮಾ ಪಟೇಲ್, ರೋಶ್ನಿ ಪಟೇಲ್, ವೃಷ್ಠಿ ಪಟೇಲ್ ಮತ್ತು ಮೀನಾ ಪಟೇಲ್ ಅವರು ತನ್ನ ಸ್ನೇಹಿತನೊಂದಿಗೆ ಗರ್ಭಾ ನೃತ್ಯದಲ್ಲಿ ಭಾಗವಹಿಸಿದ್ದಾಗಿ ಅವರು ಹೇಳಿದ್ದಾರೆ.

ರಿಂಕು ಅವರ ಹೇಳಿಕೆಯ ಪ್ರಕಾರ, ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಪ್ರಬಲ ಜಾತಿ ಮಹಿಳೆಯರು ಯುವತಿಯನ್ನು ಗದರಿಸಿ ಅವಮಾನಿಸಿದ್ದಾರೆ.

“ಅವರು ನನ್ನ ಜಾತಿ ಹೆಸರಿಡಿದು ನಿಂದನೆ ಮಾಡಿದರು, ಈ ಜನರು ನಮಗೆ ಸಮಾನರಲ್ಲ ಮತ್ತು ನಮ್ಮೊಂದಿಗೆ ಗರ್ಬಾ ಆಡಲು ಸಾಧ್ಯವಿಲ್ಲ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ಸಂಗೀತವನ್ನು ಬಂದ್ ಮಾಡಿಸುವ ಮೂಲಕ, ಕಾರ್ಯಕ್ರಮದ ಸಂಘಟಕರಿಗೆ ದೂರು ನೀಡುತ್ತಿದ್ದಂತೆಯೇ ಮಹಿಳೆಯರು ಹಿಂಸಾತ್ಮಕರಾದರು ಎಂದು ಆರೋಪಿಸಲಾಗಿದೆ. ರಿಂಕು ತನ್ನ ಕೂದಲನ್ನು ಹಿಡಿದು, ಸ್ಥಳದಿಂದ ಹೊರಗೆ ಎಳೆದುಕೊಂಡು ಹೋಗಿ ಘಟನೆಯನ್ನು ಚಿತ್ರೀಕರಿಸದಂತೆ ತಡೆದರು ಎಂದು ಹೇಳಿಕೊಂಡಿದ್ದಾರೆ. ಗರ್ಬಾ ನೃತ್ಯಕ್ಕೆ ಮರಳಲು ಪ್ರಯತ್ನಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನಾಲ್ವರು ಮಹಿಳೆಯರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), ಸೆಕ್ಷನ್ 54 (ಪ್ರೊತ್ಸಾಹಕನ ಸಮ್ಮುಖದಲ್ಲಿ ಅಪರಾಧ), ಸೆಕ್ಷನ್ 351(1) (ಕ್ರಿಮಿನಲ್ ಬೆದರಿಕೆ) ಮತ್ತು ಸೆಕ್ಷನ್ 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಸೇರಿವೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಸಹ ಅನ್ವಯಿಸಲಾಗಿದೆ.

ಮಹಿಸಾಗರ್‌ನ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಫಿನ್ ಹಸನ್ ಅವರು, ಎಸ್‌ಸಿ/ಎಸ್‌ಟಿ ಸೆಲ್‌ನ ಉಪ ಸೂಪರಿಂಟೆಂಡೆಂಟ್ ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಮಿಳುನಾಡು| ದಲಿತ ವಿದ್ಯಾರ್ಥಿಗಳಿಗೆ ಜಾತಿ ನಿಂದನೆ; ರಸ್ತೆ ಪ್ರವೇಶಿಸದಂತೆ ತಡೆದ ಪ್ರಬಲಜಾತಿ ವೃದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...