Homeಮುಖಪುಟಗುಜರಾತ್| ದೇವಸ್ಥಾನಕ್ಕೆ ತೆರಳುತ್ತಿದ್ದ ದಲಿತ ವ್ಯಕ್ತಿಯನ್ನು ಥಳಿಸಿದ ಪ್ರಬಲ ಜಾತಿ ವ್ಯಕ್ತಿ

ಗುಜರಾತ್| ದೇವಸ್ಥಾನಕ್ಕೆ ತೆರಳುತ್ತಿದ್ದ ದಲಿತ ವ್ಯಕ್ತಿಯನ್ನು ಥಳಿಸಿದ ಪ್ರಬಲ ಜಾತಿ ವ್ಯಕ್ತಿ

- Advertisement -
- Advertisement -

ದೇವಸ್ಥಾನಕ್ಕೆ ತೆರಳುತ್ತಿದ್ದ ದಲಿತ ಸಮುದಾಯದ ಕಾರ್ಮಿಕನೊಬ್ಬನನ್ನು ಥಳಿಸಿ ಜಾತಿ ನಿಂದನೆ ಮಾಡಿರುವ ಘಟನೆ ಗುಜರಾತ್‌ನ ಹಿಮತ್‌ನಗರದಲ್ಲಿ ಬೆಳಕಿಗೆ ಬಂದಿದ್ದು, ಖೇದವಾಡ ಲಕ್ಷ್ಮಿಪುರ ಗ್ರಾಮದ ದಿನಗೂಲಿ ಕಾರ್ಮಿಕ 38 ವರ್ಷದ ಶೈಲೇಶ್ ಸೋಲಂಕಿ ಎಂಬುವವರು ಹಿಮತ್‌ನಗರ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್‌ಐಆರ್ ಪ್ರಕಾರ, ಸೆಪ್ಟೆಂಬರ್ 26 ರ ಸಂಜೆ ಈ ಘಟನೆ ನಡೆದಿದೆ. ಬಲೂಚ್‌ಪುರದ ಕ್ರಾಸ್‌ರೋಡ್ ಬಳಿ ಬಸ್‌ಗಾಗಿ ಕಾಯುತ್ತಿದ್ದಾಗ ಸ್ಕೂಟರ್‌ನಲ್ಲಿದ್ದ ಧನ್‌ಪುರದ ಭರತ್ ಪಟೇಲ್ ಎಂಬುವವರು ಸೋಲಂಕಿಯನ್ನು ತಡೆದು, ಅವರ ಗುರುತನ್ನು ಕೇಳಿದರು. ಸೋಲಂಕಿ ಅವರು ಕಾಲ ಭೈರವ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ಹೇಳಿದರು, ಆದರೆ ಪಟೇಲ್ ಅವರನ್ನು ನಂಬದೆ ಅದಕ್ಕೆ ಪುರಾವೆ ಕೇಳಿದರು.

“ನಾನು ಅವನಿಗೆ ನನ್ನ ಆಧಾರ್ ಕಾರ್ಡ್ ಕೊಟ್ಟೆ. ಅವನು ನನ್ನ ಉಪನಾಮವನ್ನು ನೋಡಿದಾಗ, ನಾನು ಪರಿಶಿಷ್ಟ ಜಾತಿಗೆ ಸೇರಿದವನಾ ಎಂದು ಕೇಳಿದನು. ನಾನು ದಲಿತ ಎಂದು ಹೇಳಿದಾಗ, ಅವನು ನನ್ನನ್ನು ನಿಂದಿಸಲು ಪ್ರಾರಂಭಿಸಿದನು. ನೀನು ದಲಿತನಾಗಿ ರಾತ್ರಿ ಹೊತ್ತು ದೇವಸ್ಥಾನಕ್ಕೆ ಭೇಟಿ ನೀಡಲು ಏಕೆ ಬಂದೆ ಎಂದು ಅವನು ನನ್ನನ್ನು ಪ್ರಶ್ನಿಸಿದ. ನಂತರ ಜಾತಿ ನಿಂದನೆ ಮಾಡುತ್ತಾ ಹಲವಾರು ಬಾರಿ ಕಪಾಳಮೋಕ್ಷ ಮಾಡಿದನು” ಎಂದು ಹೇಳಿದ್ದಾರೆ.

ಸ್ವಲ್ಪ ಸಮಯದ ನಂತರ, ತಿತ್ಪುರ ಗ್ರಾಮದ ಇಬ್ಬರು ವ್ಯಕ್ತಿಗಳು, ನರೇಂದ್ರಸಿನ್ಹ್ ಪರ್ಮಾರ್ ಮತ್ತು ಜಗತ್ಸಿನ್ಹ್ ಪರ್ಮಾರ್, ಮೋಟಾರ್ ಸೈಕಲ್‌ನಲ್ಲಿ ಬಂದು ಹಲ್ಲೆಯನ್ನು ನಿಲ್ಲಿಸಿದರು. ಆದರೆ ಪಟೇಲ್ ಸೋಲಂಕಿಯನ್ನು ತನ್ನ ಸ್ಕೂಟರ್‌ನಲ್ಲಿ ಬಲವಂತವಾಗಿ ಕೂರಿಸಿ, ಘೋರ್ವಾಡಾ ಬಳಿಯ ಮತ್ತೊಂದು ಪ್ರದೇಶಕ್ಕೆ ಕರೆದೊಯ್ದು, ಮತ್ತೊಮ್ಮೆ ದೇವಾಲಯಕ್ಕೆ ಬಂದರೆ ‘ಗಂಭೀರ ಪರಿಣಾಮಗಳನ್ನು” ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನಂತರ ಸೋಲಂಕಿ ತನ್ನ ಕುಟುಂಬಕ್ಕೆ ಮಾಹಿತಿ ನೀಡಿ ಮಧ್ಯಪ್ರವೇಶಿಸಿದ ಇಬ್ಬರು ವ್ಯಕ್ತಿಗಳನ್ನು ಭೇಟಿಯಾದರು. ಅವರು ಸಾಕ್ಷಿಗಳಾಗಿರಲು ಒಪ್ಪಿಕೊಂಡರು. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಜೊತೆಗೆ ಹಲ್ಲೆ ಮತ್ತು ಬೆದರಿಕೆ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿದೆ.

ಗುಜರಾತ್| ದಲಿತ ಯುವತಿಯನ್ನು ಗರ್ಬಾ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಅವಮಾನ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...