Homeಮುಖಪುಟಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

- Advertisement -
- Advertisement -

ದುರ್ಗಾ ಮೂರ್ತಿ ಮೆರವಣಿಗೆ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ಬೈಕ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ, ಕೋಮು ಉದ್ವಿಗ್ನತೆ ಹೆಚ್ಚಾಗುವುದನ್ನು ತಡೆಯಲು ಅಧಿಕಾರಿಗಳು ಭಾನುವಾರ (ಅ. 5) ರಾತ್ರಿಯಿಂದ ಒಡಿಶಾದ ಕಟಕ್‌ ನಗರದ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 36 ಗಂಟೆಗಳ ಕರ್ಫ್ಯೂ ವಿಧಿಸಿದ್ದಾರೆ.

ಹಿಂಸಾಚಾರದ ಘಟನೆಗಳಲ್ಲಿ 25 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ವಿಎಚ್‌ಪಿ ಸೋಮವಾರ (ಅ.6)12 ಗಂಟೆಗಳ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ.

“ಶುಕ್ರವಾರ (ಅ. 3) ಸಂಜೆ ದುರ್ಗಾ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳ ನಡುವೆ ವೈಯಕ್ತಿಕ ಜಗಳ ನಡೆದಿತ್ತು. ನಂತರ, ನಾಲ್ವರು ದುಷ್ಕರ್ಮಿಗಳನ್ನು ಬಂಧಿಸಿ ಶನಿವಾರ (ಅ. 4) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ” ಎಂದು ಭಾನುವಾರ (ಅ. 5) ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪೊಲೀಸ್ ಆಯುಕ್ತ ಎಸ್. ದೇವ್ ದತ್ತ ಸಿಂಗ್ ಹೇಳಿದ್ದಾರೆ.

“ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಬಗ್ಗೆ ಆತಂಕ ಇದ್ದಿದ್ದರಿಂದ ವಿಎಚ್‌ಪಿ ಭಾನುವಾರ ಕಟಕ್‌ನಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಅನುಮತಿ ನೀಡಿರಲಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಪೊಲೀಸರು ರ‍್ಯಾಲಿಯನ್ನು ತಡೆಯಲು ಪ್ರಯತ್ನಿಸಿದಾಗ ಉದ್ವಿಗ್ನತೆ ಉಂಟಾಯಿತು. ರ‍್ಯಾಲಿಯು ಕೆಲವು ಸೂಕ್ಷ್ಮ ಪ್ರದೇಶಗಳ ಕಡೆಗೆ ಸಾಗುತ್ತಿತ್ತು, ಅಲ್ಲಿ ಕೋಮು ಉದ್ವಿಗ್ನತೆ ಭುಗಿಲೇಳಬಹುದು ಎಂದು ಪೊಲೀಸರು ದೃಢವಾದ ನಿಲುವನ್ನು ತೆಗೆದುಕೊಂಡು ರ‍್ಯಾಲಿ ಮುಂದೆ ಹೋಗದಂತೆ ತಡೆದರು. ಈ ವೇಳೆ ರ‍್ಯಾಲಿಯಲ್ಲಿದ್ದವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು. ಇದರಿಂದ ಇಪ್ಪತ್ತೈದು ಸಿಬ್ಬಂದಿ ಗಾಯಗೊಂಡರು, ಅವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ” ಎಂದು ದೇವ್ ದತ್ತ ಸಿಂಗ್ ವಿವರಿಸಿದ್ದಾರೆ.

“ದುಷ್ಕರ್ಮಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ರಬ್ಬರ್ ಗುಂಡುಗಳನ್ನು ಹಾರಿಸಿದರು. ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ಅವರು ಹೇಳಿದ್ದಾರೆ.

ಅಗತ್ಯ ಸೇವೆಗಳಿಗೆ ವಿನಾಯಿತಿ

ಭಾನುವಾರ ರಾತ್ರಿ 10 ಗಂಟೆಯಿಂದ 36 ಗಂಟೆಗಳ ಕಾಲ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಘೋಷಿಸಿದ್ದಾರೆ. ಆರೋಗ್ಯ ಸೇವೆ, ಹಾಲು, ತರಕಾರಿ ಪೂರೈಕೆ, ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರ ಸಂಚಾರ ಸೇರಿದಂತೆ ಅಗತ್ಯ ಸೇವೆಗಳಿವೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವೈ.ಬಿ. ಖುರಾನಿಯಾ ಎಚ್ಚರಿಸಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಸೂಕ್ತ ನಿಬಂಧನೆಗಳಡಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಹಿಂಸಾಚಾರದ ಹಿನ್ನೆಲೆ ಒಡಿಶಾ ಸರ್ಕಾರ ಕಟಕ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ವಿಎಚ್‌ಪಿ ಸೋಮವಾರ ಮುಂಜಾನೆಯಿಂದ ಸಂಜೆಯವರೆಗೆ ಬಂದ್‌ಗೆ ಕರೆ ನೀಡಿದೆ.

ಶಾಂತಿ ಕಾಪಾಡಲು ಸಿಎಂ ಮನವಿ

ಕಟಕ್‌ನ ವಿಶಿಷ್ಟವಾದ ಸಹೋದರತ್ವದ ಗುರುತನ್ನು ರಕ್ಷಿಸಲು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಮೋಹನ್ ಮಾಝಿ ಜನರಿಗೆ ಮನವಿ ಮಾಡಿದ್ದಾರೆ.

“ಕಟಕ್ ಸಾವಿರ ವರ್ಷಗಳಷ್ಟು ಹಳೆಯದಾದ ನಗರ, ಸಹೋದರತ್ವ ಮತ್ತು ಕೋಮು ಸೌಹಾರ್ದತೆಯ ವಿಶಿಷ್ಟ ಸಂಕೇತ. ಇತ್ತೀಚಿನ ದಿನಗಳಲ್ಲಿ ಕೆಲವು ದುಷ್ಕರ್ಮಿಗಳ ಕೃತ್ಯಗಳಿಂದಾಗಿ ನಗರದಲ್ಲಿ ಶಾಂತಿ ಭಂಗವಾಗಿದ್ದು, ಸಾಮಾನ್ಯ ನಾಗರಿಕರ ಜೀವನಕ್ಕೆ ಸಮಸ್ಯೆ ಉಂಟಾಗಿದೆ. ಸರ್ಕಾರವು ಇಂತಹ ಕಿಡಿಗೇಡಿಗಳ ಮೇಲೆ ನಿಗಾ ಇಡುತ್ತಿದೆ ಮತ್ತು ಕಾನೂನಿನ ಪ್ರಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಮಾಝಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಕಟಕ್ ನಗರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಇತ್ತೀಚೆಗೆ ಉದ್ವಿಗ್ನತೆ ಉಂಟಾಗಿ ಹಿಂಸಾತ್ಮಕ ಘಟನೆಗಳು ನಡೆದ ನಂತರ, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುವ ಮೂಲಕ ಕೋಮು ಹಿಂಸಾಚಾರವನ್ನು ಹರಡಲು ಇಂಟರ್ನೆಟ್ ದುರುಪಯೋಗದ ಬಗ್ಗೆ ಜಿಲ್ಲಾಡಳಿತವು ಕಳವಳ ವ್ಯಕ್ತಪಡಿಸಿದೆ” ಎಂದು ರಾಜ್ಯ ಗೃಹ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...