Homeಕರ್ನಾಟಕಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಸೋಮವಾರ (ಅ.6) ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿಎಂ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆಯವರೆಗೆ ಶೇ.63ರಷ್ಟು ಸಮೀಕ್ಷೆ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆಯವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ

ಕೊಪ್ಪಳ ಜಿಲ್ಲೆಯಿಂದ ಶೇ.97ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸಿಎಂ ಮಾಹಿತಿ ನೀಡಿದರು. ಕೊಪ್ಪಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನರು ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಸಿಎಂ, ಜನತೆಗೆ ಧನ್ಯವಾದ ಹೇಳಿದರು.

ಬಲ್ಡೋಟಾ ಕಾರ್ಖಾನೆ ವಿರುದ್ದ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ

ಎಂಎಸ್‌ಪಿಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿನಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಲ್ಹಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು? ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು? ಎಂಬುದಕ್ಕೆ ಉತ್ತರಿಸಿದ ಸಿಎಂ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...