Homeಮುಖಪುಟ'ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ': ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ...

‘ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’: ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಘಟನೆ ಸೋಮವಾರ (ಅ.6) ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸಿಜೆಐ ನ್ಯಾಯಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ಪ್ರಾರಂಭಿಸಲು ಅಣಿಯಾದಾಗ, ಪೀಠದ ಬಳಿಗೆ ತೆರಳಿದ ವಕೀಲ ತನ್ನ ಶೂ ಕಳಚಿ ಅವರತ್ತ ಎಸೆಯಲು ಯತ್ನಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಬಾರ್ & ಬೆಂಚ್ ವರದಿ ಮಾಡಿದೆ.

ವಕೀಲ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ವಕೀಲ ಪೇಪರ್ ಸುತ್ತಿ ಸಿಜೆಐ ಮೇಲೆ ಎಸೆಯಲು ಯತ್ನಿಸಿದ್ದಾರೆ ಎಂದು ಹೇಳಿದ್ದಾಗಿ ಲೈವ್ ಲಾ ವರದಿ ತಿಳಿಸಿದೆ.

ವಕೀಲ ಸಿಜೆಐ ಪೀಠದತ್ತ ನುಗ್ಗುತ್ತಿದ್ದಂತೆ ಭದ್ರತಾ ಸಿಬ್ಬಂದಿ ಧಾವಿಸಿ ಅವರನ್ನು ಕೋರ್ಟ್‌ ಹಾಲ್‌ನಿಂದ ಹೊರಗಡೆ ಕಳಿಸಿದರು. ಹೊರಗಡೆ ಹೋಗುವಾಗ “ಸನಾತದ ಧರ್ಮದ ಅವಮಾನವನ್ನು ಸಹಿಸುವುದಿಲ್ಲ” ಎಂದು ವಕೀಲ ಕೂಗಿದ್ದಾರೆ ಎಂದು ವರದಿಗಳು ವಿವರಿಸಿವೆ.

ವಕೀಲರ ಕೃತ್ಯದಿಂದ ವಿಚಲಿತರಾಗದ ಸಿಜೆಐ ಪ್ರಕರಣಗಳ ವಿಚಾರಣೆ ಮುಂದುವರಿಸಿದರು. “ಇದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಕಲಾಪ ಮುಂದುವರಿಸಿ” ಎಂದು ಅವರು ಹೇಳಿದರು ಎಂದಿವೆ.

ಇತ್ತೀಚೆಗೆ ಖಜುರಾಹೊದಲ್ಲಿನ ಶಿರಚ್ಛೇದಗೊಂಡ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸುವ ಕುರಿತ ಪ್ರಕರಣವೊಂದರಲ್ಲಿ ಸಿಜೆಐ ಬಿ.ಆರ್‌. ಗವಾಯಿ ಅವರು ನೀಡಿದ್ದ ಹೇಳಿಕೆಯೇ ಈ ಘಟನೆಗೆ ಪ್ರಚೋದನೆ ನೀಡಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಖಜುರಾಹೊ ಸಂಬಂಧಿತ ಅರ್ಜಿಯನ್ನು ವಜಾಗೊಳಿಸುವಾಗ, “ನೀವು ವಿಷ್ಣುವಿನ ಪರಮ ಭಕ್ತ ಎಂದು ಹೇಳಿಕೊಳ್ಳುತ್ತೀರಿ. ಹೋಗಿ ನಿಮ್ಮ ದೇವರ ಬಳಿಯೇ ಪ್ರಾರ್ಥಿಸಿ, ಆ ದೇವರೇ ಏನಾದರೂ ಮಾಡಲಿ” ಎಂದು ಅರ್ಜಿದಾರರಿಗೆ ಸಿಜೆಐ ಮೌಖಿಕವಾಗಿ ಹೇಳಿದ್ದರು.

ಈ ಹೇಳಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿತ್ತು, ಹಲವರು ಸಿಜೆಐ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದರು. ಎರಡು ದಿನಗಳ ನಂತರ ಮುಕ್ತ ನ್ಯಾಯಾಲಯದಲ್ಲಿ ವಿವಾದವನ್ನು ಪ್ರಸ್ತಾಪಿಸಿದ್ದ ಸಿಜೆಐ, ನಾನು ಧರ್ಮವನ್ನು ಅವಹೇಳನ ಮಾಡಿಲ್ಲ, ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ” ಎಂದಿದ್ದರು.

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...