Homeಮುಖಪುಟಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

“ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ ಹೇಳಿದ್ದಾರೆ. ನನ್ನನ್ನು ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯದಂತೆ ವೈದ್ಯೆ ನರ್ಸ್‌ಗೆ ಸೂಚಿಸಿದರು” ಎಂದು ಜಾನ್ಪುರದ ಚಾಂದ್‌ವಾಕ್ ಮೂಲದ ಶಮಾ ಪರ್ವೀನ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

“ಅವಳನ್ನು (ಗರ್ಭಿಣಿಯನ್ನು) ಶಸ್ತ್ರಚಿಕಿತ್ಸೆ ಕೋಣೆಗೆ ಕರೆತರಬೇಡಿ. ಆಕೆ ಮುಸ್ಲಿಂ, ನಾನು ಆಕೆಗೆ ಚಿಕಿತ್ಸೆ ನೀಡುವುದಿಲ್ಲ” ಎಂದು ವೈದ್ಯೆ ಹೇಳಿದರು ಎಂದು ಪರ್ವೀನ್ ಅವರ ಪತಿ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫರ್ವೀನ್ ಅವರ ಆರೋಪದ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಆರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ. ವೈದ್ಯರು ಮತ್ತು ಸಿಬ್ಬಂದಿಯಿಂದ ವಿವರಣೆ ಕೇಳಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮಹೇಂದ್ರ ಗುಪ್ತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಆರೋಪಗಳು ನಿಜವೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾದ ದಿನದಂದು ಆಸ್ಪತ್ರೆಯಲ್ಲಿ ನಾಲ್ಕರಿಂದ ಐದು ಮುಸ್ಲಿಂ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಮತ್ತು ಚಿಕಿತ್ಸೆ ಪಡೆದಿದ್ದಾರೆ ಎಂದು ಎಂದು ಗುಪ್ತಾ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಅನುಸರಿಸುತ್ತಿರುವ ವಿಭಜಕ ರಾಜಕೀಯ ಮತ್ತು ಕೋಮುವಾದದ ಪರಿಣಾಮವೇ ಇಂತಹ ಘಟನೆಗಳು ಎಂದು ವಿರೋಧ ಪಕ್ಷಗಳು ಭಾನುವಾರ (ಅ.5) ಆರೋಪಿಸಿವೆ.

“ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಇದು ವೃತ್ತಿಯ ನೀತಿಗೆ ವಿರುದ್ಧವಾಗಿದೆ. ಆಡಳಿತಾರೂಢ ಬಿಜೆಪಿಯ ನಿರಂತರ ದ್ವೇಷ ರಾಜಕಾರಣದಿಂದಾಗಿ ಸಮಾಜದಲ್ಲಿ ಆಳವಾಗಿ ಬೇರೂರಿರುವ ವಿಭಜನೆಯ ಪರಿಣಾಮ ಇದು. ಸರ್ಕಾರಿ ಯಂತ್ರವು ಅಲ್ಪಸಂಖ್ಯಾತರೊಂದಿಗೆ ತಾರತಮ್ಯ ಮತ್ತು ಕ್ರೌರ್ಯವನ್ನು ಮಾಡುತ್ತಿರುವಾಗ, ಅದು ಸಮಾಜವನ್ನು ಮತ್ತಷ್ಟು ವಿಭಜಿಸುತ್ತದೆ. ಒಂದೆಡೆ, ಫತೇಪುರದಲ್ಲಿ ಹಳೆಯ ಸಮಾಧಿಯನ್ನು ಧ್ವಂಸಗೊಳಿಸಲು, ಕನ್ವರ್ ಯಾತ್ರೆಯ ಸಮಯದಲ್ಲಿ ಅಂಗಡಿಗಳಿಗೆ ಹಾನಿ ಮಾಡಲು ಸಮಾಜ ವಿರೋಧಿ ಶಕ್ತಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಮತ್ತೊಂದೆಡೆ, ಉತ್ತರ ಪ್ರದೇಶದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ” ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಮತ್ತು ಗಾಝಿಪುರದ ಹಿರಿಯ ಲೋಕಸಭಾ ಸದಸ್ಯ ಅಫ್ಝಲ್ ಅನ್ಸಾರಿ, ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ವಿಡಿಯೋ ಬಗ್ಗೆ ತನಿಖೆ ನಡೆಸಬೇಕು. ಇದು ನಿಜವಾಗಿಯೂ ಸಂಭವಿಸಿದ್ದರೆ ಕಲ್ಪನೆಗೂ ಮೀರಿದ್ದು. ಏಕೆಂದರೆ ವೈದ್ಯರನ್ನು ಸಮಾಜದಲ್ಲಿ ಹೆಚ್ಚಿನ ಗೌರವದಿಂದ ಕಾಣಲಾಗುತ್ತದೆ ಮತ್ತು ರೋಗಿಗಳ ನಡುವೆ ತಾರತಮ್ಯ ಮಾಡಬಾರದು. ಆದರೆ, ಇದು ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ವಿಶಾಲ ಮಾದರಿಯ ಕಡೆಗೆ ಬೆರಳು ತೋರಿಸುತ್ತದೆ. ಗ್ರಾಮ ಸಭಾ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲು ಪತ್ರವನ್ನು, ವಿಶೇಷವಾಗಿ ಯಾದವ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನೀಡಲಾಗುತ್ತಿರುವುದನ್ನು ನಾವು ನೋಡಿದ್ದೇವೆ. ಮೇಲ್ಭಾಗದಲ್ಲಿರುವ ಜನರು ಸಮಾಜದ ಒಂದು ವರ್ಗದ ವಿರುದ್ಧ ವಿಷಪೂರಿತ ಭಾಷೆಯನ್ನು ಮಾತನಾಡುತ್ತಿದ್ದಾರೆ. ನ್ಯಾಯಾಂಗವು ಅಂತಹ ಭಾಷೆ ಮತ್ತು ನಿರ್ದಿಷ್ಟ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಸಹ ಅರಿತುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅನ್ಸಾರಿ ತಿಳಿಸಿದ್ದಾರೆ.

“ದೇವರ ಎರಡನೇ ರೂಪವೆಂದು ಪರಿಗಣಿಸಲ್ಪಟ್ಟ ವೈದ್ಯರು ಧರ್ಮ ಕೇಳಿ ಚಿಕಿತ್ಸೆ ನೀಡಲು ನಿರಾಕರಿಸಿದರು” ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಮೋದಿ ಮತ್ತು ಯೋಗಿಯವರ ಕನಸಿನ ನವ ಭಾರತ” ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಿಎಂ ಆದಿತ್ಯನಾಥ್ ಹರಡಿದ ದ್ವೇಷದ ಪರಿಣಾಮ ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...