Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

ಪಿಯುಸಿ ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯಿತಿ

- Advertisement -
- Advertisement -

ನಿಗದಿತ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆ, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.

ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಅ.7) ವಿಡಿಯೋ ಕಾನ್ಷರೆನ್ಸ್ ನಡೆಸಿ ಚರ್ಚಿಸಿದರು.

ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ, ಸೆಪ್ಟೆಂಬರ್ 22ರಿಂದ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು (ಅ.7) ಮುಗಿಯಬೇಕಿತ್ತು. ಆದರೆ, ಕೆಲ ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಶೇಕಡ 97ರಷ್ಟು ಸಮೀಕ್ಷೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡ 67ರಷ್ಟು ಮಾತ್ರ ಪೂರ್ಣಗೊಂಡಿದೆ. ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗದವರು ಪರಸ್ಪರ ಚರ್ಚೆ ನಡೆಸಿದ್ದಾರೆ. 1 ಲಕ್ಷದ 20 ಸಾವಿರ ಶಿಕ್ಷಕರು ಸೇರಿ 1 ಲಕ್ಷದ 60 ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ವಿಧಾನ‌ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘದವರು ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರವರೆಗೆ (8 ಕೆಲಸದ ದಿನಗಳು) ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಿಸಿದ್ದೇವೆ ಎಂದು ಹೇಳಿದರು.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ಶುರುವಾಗಲಿದೆ. ಹಾಗಾಗಿ, ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ ನೀಡಲಾಗಿದೆ ಎಂದು ಸಿಎಂ ಹೇಳಿದರು.

ಬೆಂಗಳೂರು ನಗರದಲ್ಲಿ 6,700 ಮಂದಿ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದರು.

ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿದೆ. ಆದ್ದರಿಂದ ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...