Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...