Homeಕರ್ನಾಟಕಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

ಪರಿಶಿಷ್ಟ ಪಂಗಡಗಳಲ್ಲಿಯೂ ಒಳಮೀಸಲಾತಿ ಜಾರಿಯಾಗಲಿ: ಲಕ್ಷ್ಮಣ ಮಂಡಲಗೇರಾ

- Advertisement -
- Advertisement -

ವಾಲ್ಮೀಕಿ ಜಯಂತಿಯು ಈ ಮೊದಲು ಬೇಡ, ವಾಲ್ಮೀಕಿ, ನಾಯಕ ಸಮುದಾಯಗಳ ಆಚರಣೆಯಾಗಿತ್ತು. ಆದರೆ ಈಗ ಈ ಸಮುದಾಯಗಳ ಜೊತೆಗೆ 50 ಬುಡಕಟ್ಟು ಸಮುದಾಯಗಳು ಸೇರ್ಪಡೆಯಾಗಿ ಎಲ್ಲಾ ಸಮುದಾಯಗಳ  ಆಚರಣೆಯಾಗುತ್ತಿದೆ. ಇದರಲ್ಲಿಯೂ ಮುಂಚೂಣಿ ಪ್ರಬಲ ಜಾತಿಗಳಿಗೆ ಸೀಮಿತವಾದ ಮೀಸಲಾತಿ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಹಂಚಿಕೆಯಾಗಬೇಕು. ಆಗ ಈ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ ಮಂಡಲಗೇರಾ ಹೇಳಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಸಮುದಾಯ ಪ್ರಸ್ತುತ ಶೇಕಡ 7ರಷ್ಟು ಮೀಸಲಾತಿ ಪಡೆಯುತ್ತಿವೆ. ಪರಿಶಿಷ್ಠ ಪಂಗಡದಲ್ಲಿರುವ ಇನ್ನಿತರ ಕಾಡು ಮೇಡುಗಳಲ್ಲಿ ವಾಸಿಸುವ ಅರಣ್ಯವಾಸಿ, ಆದಿವಾಸಿ ಬುಡಕಟ್ಟು ಸಮುದಾಯಗಳು ಮೀಸಲಾತಿ ಸಿಗದೆ ವಂಚಿತವಾಗಿವೆ. ಈಗಿರುವ 7 ಶೇಕಡ ಮೀಸಲಾತಿಯಲ್ಲಿ ಮತ್ತೆ ಕುರುಬ ಸಮುದಾಯವನ್ನು ಸೇರಿದರೆ ಅಲ್ಲಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಸಮುದಾಯಗಳು ಮೀಸಲಾತಿಯಿಂದ ಮತ್ತಷ್ಟು ಸಂಪೂರ್ಣ ವಂಚಿತವಾಗುವ ಸಾಧ್ಯತೆಯಿದೆ. ಈಗಿರುವ ಮೀಸಲಾತಿ ಆ ಸಮುದಾಯಗಳಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈಗ ಮತ್ತೆ ಬಲಿಷ್ಠ ಜಾತಿಗಳನ್ನು ಸೇರಿಸುವುದರಿಂದ ಮತ್ತಷ್ಟು ವಂಚಿತರಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಸಿದ್ಧರಾಮಯ್ಯ ಅವರು ಸ್ವಜಾತಿ ಪ್ರೇಮ ಬಿಟ್ಟು ಸಾಮಾಜಿಕ ನ್ಯಾಯದ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.

ಸಾಮಾಜಿಕ ಹರಿಕಾರ, ಅಹಿಂದ ನಾಯಕ ಎಂದು ಹೇಳುವ ಸಿದ್ದರಾಮಯ್ಯನವರೇ, ಈಗಾಗಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆಯಲ್ಲಿ ನೀವು ಮಾಡಿರುವ ಮೋಸ ಯಾರೂ ಮರೆಯುವ ಹಾಗಿಲ್ಲ. ಬಸವಣ್ಣನ ಮಾರ್ಗ ಅನುಸರಿಸುತ್ತೇನೆಂದು ಹೇಳುವ ನೀವು, ಪ್ರಬಲ ಜಾತಿಗಳ ಸಚಿವರಿಗೆ ಮಂಡಿಯೂರಿ ಅಲೆಮಾರಿಗಳಿಗೆ ಸಿಗಬೇಕಾದ 1 ಶೇಕಡ ಮೀಸಲಾತಿ ಕಿತ್ತುಕೊಂಡಿದ್ದೀರಿ. ಈ ಮೂಲಕ ಅ ಸಮುದಾಯಗಳು ಮೀಸಲಾತಿಯಿಂದ ಮುಂದೆಯೂ ವಂಚಿತರಾಗಲು ದಾರಿ ಮಾಡಿಕೊಟ್ಟಿದ್ದಿರಿ. ಅಲೆಮಾರಿಗಳನ್ನು ಬೀದಿಗೆ ತಳ್ಳಿ, ಅವರಿಗೆ ತಮಗೆ ಸಿಗಬೇಕಾದ 1 ಶೇಕಡ ಮೀಸಲಾತಿಗಾಗಿ ದೆಹಲಿ ತನಕ ಹೋಗುವಂತೆ ಮಾಡಿದ್ದೀರಿ. ಈಗ ಪರಿಶಿಷ್ಟ ಪಂಗಡಗಳ ಮೀಸಲಾತಿಯ ವಿಚಾರದಲ್ಲೂ ಹಾಗೆ ಮಾಡದೇ ಎಚ್ಚರ ವಹಿಸಿರಿ, ಜಾತಿ ಪ್ರೇಮ ಬಿಟ್ಟು ಹೊರ ಬನ್ನಿ ಎಂದು ಲಕ್ಷ್ಮಣ ಮಂಡಲಗೇರಾ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಜಯಂತಿ ಬರೀ ವಾಲ್ಮೀಕಿ ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಗಳ ಜಯಂತಿಯಾಗಬೇಕು. ಮಹರ್ಷಿ ವಾಲ್ಮೀಕಿ ಒಬ್ಬ ಮಹಾನ್ ಆದಿ ಕವಿ. ರಾಮಾಯಣ ಮೂಲಕ ರಾಮನನ್ನು ಸೃಷ್ಟಿಸಿದ್ದು ಇದೇ ಕವಿ. ಆದರೆ, ಇವತ್ತು ಅದೇ ರಾಮನ ಹೆಸರು ಹೇಳಿಕೊಂಡು ಅಧಿಕಾರ ಹಿಡಿದವರು ಸಮುದಾಯವನ್ನು ಎಲ್ಲಿ ಇಟ್ಟಿದ್ದಾರೆ ಎನ್ನುವುದನ್ನು ಸಮುದಾಯದ ಯುವಕರು, ಮುಖಂಡರು, ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರ ಇದ್ದರೂ, ಸಮುದಾಯಗಳು ಅಭಿವೃದ್ಧಿ ಕಾಣದೆ ಇರುವುದು ದುರಂತ. ಸಮುದಾಯ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ನೂರಾರು ಕೋಟಿ ಹಗರಣ ನಡೆದರೂ ತುಟಿ ಬಿಚ್ಚದ ಸಮಾಜದ ಮುಖಂಡರು, ಸಚಿವರು, ಶಾಸಕರು ಮೀಸಲಾತಿ ಹೆಸರಿನಲ್ಲಿ ಅಧಿಕಾರ ಹಿಡಿದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ಸಮುದಾಯದ ಯುವಕರು ಪ್ರಶ್ನಿಸುವಂತಾಗಬೇಕು. ಶಿಕ್ಷಣ, ಸಂಘಟನೆಯಲ್ಲಿ ಮುಂದೆ ಬರಬೇಕು ಎಂದು ಹೇಳಿದ್ದಾರೆ.

ನಕಲಿ ಜಾತಿಪ್ರಮಾಣ ಪತ್ರಗಳು ಹಿಡಿದು ಸಮುದಾಯಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ಆದರೆ, ಇದರ ಬಗ್ಗೆ ಯಾರೂ ಮಾತಾಡಲು ತಯಾರಿಲ್ಲ. ಸಮಾಜದ ಯುವಕರು ಕೇಸರಿ ಭಯೋತ್ಪಾದಕರಿಂದ ಅಂತರ ಕಾಯ್ದುಕೊಂಡು ರಾಮನ ಜಪ ಬಿಟ್ಟು, ಇಂಥ ವಿಷಯಗಳ ಬಗ್ಗೆ ಜಾಗೃತಿ ಮಾಡಿಸುವ ಕೆಲಸಕ್ಕೆ ಮುಂದಾಗಬೇಕು. ಆರ್‌ಎಸ್ಎಸ್, ಬಿಜೆಪಿಗಳಂತಹ ದೇಶದ್ರೋಹಿ ಸಂಘಟನೆಗಳ ಕಾಲಾಳುಗಳಾಗಿ ಬದುಕನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.

ಯುವಜನರು ಅತಿ ಹೆಚ್ಚು ಈ ಸಮುದಾಯದಿಂದ ಹಿಂದೆ ಸರಿಯುತ್ತಿರುವುದರ ಬಗ್ಗೆ ಸಂಬಂಧಪಟ್ಟವರು ಅಧ್ಯಯನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಾಜದ ಯುವಕರು ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಮಾರ್ಗಕ್ಕೆ ಮುಂದಾಗಬೇಕು. ಆಗ ಮಾತ್ರ ಬುಡಕಟ್ಟು ಸಮುದಾಯಗಳು, ದಮನಿತ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಲಕ್ಷ್ಮಣ ಮಂಡಲಗೇರಾ ಅಭಿಪ್ರಾಯಪಟ್ಟಿದ್ದಾರೆ.

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...