Homeಮುಖಪುಟದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ...

ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ವಕೀಲನಿಂದ ಶೂ ಎಸೆತ ಪ್ರಯತ್ನದ ಬಳಿಕ, ಮುಖ್ಯ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಜಾತಿ ಗುರಿಯಾಗಿಸಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ದ ಪಂಜಾಬ್ ಪೊಲೀಸರು ಬುಧವಾರ (ಅ.8) ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯ ಜಾತಿ ನಿಂದನೆ ಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಾಕುವ ಮೂಲಕ ಶಾಂತಿ-ಸುವ್ಯವಸ್ಥೆಯನ್ನು ಕದಡಲು ಪ್ರಯತ್ನಿಸಿದ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ದ ಕಾನೂನಿನ ಪ್ರಕಾರ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ವಕ್ತಾರರು ತಿಳಿಸಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳು ಮತ್ತು ವಿಡಿಯೋಗಳು ಕೋಮು ಸೌಹಾರ್ದತೆ, ಶಾಂತಿ- ಸುವ್ಯವಸ್ಥೆಯನ್ನು ಕದಡುವ ಮತ್ತು ನ್ಯಾಯಾಂಗ ಸಂಸ್ಥೆಗಳ ಮೇಲಿನ ಗೌರವವನ್ನು ಕುಗ್ಗಿಸುವ ಉದ್ದೇಶದಿಂದ ಜಾತಿವಾದ ಮತ್ತು ದ್ವೇಷ ತುಂಬಿದ ಅಭಿವ್ಯಕ್ತಿಗಳನ್ನು ಒಳಗೊಂಡಿವೆ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

ಹಿಂಸೆಯನ್ನು ಉತ್ತೇಜಿಸುವ, ಸಂವಿಧಾನದ ಗೌರವವನ್ನು ಕುಗ್ಗಿಸುವ, ಪರಿಶಿಷ್ಟ ಜಾತಿಗಳ ಜನರ ವಿರುದ್ಧ ದ್ವೇಷ ಹರಡುವ, ಜಾತಿಯ ಆಧಾರದ ಮೇಲೆ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟುಮಾಡುವ, ಶಾಂತಿಭಂಗಕ್ಕೆ ಕಾರಣವಾಗುವಂತೆ ಅವಮಾನಿಸುವ ಮತ್ತು ಸಾರ್ವಜನಿಕ ಗೊಂದಲಕ್ಕೆ ಕಾರಣವಾಗುವ ಉದ್ದೇಶವನ್ನು ಈ ಪೋಸ್ಟ್‌ಗಳು ಹೊಂದಿವೆ ಎಂದಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ನಡೆಯುವ ಮುನ್ನವೇ ಯೂಟ್ಯೂಬ್ ವಿಡಿಯೋಗಳು, ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಮೂಲಕ, ಹಲವರು ಸಿಜೆಐ ಮೇಲೆ ದಾಳಿಗೆ ಪ್ರಚೋದಿಸಿದ್ದರು. ವಿಶೇಷವಾಗಿ ದಲಿತ ಸಮುದಾಯದವರಾದ ಸಿಜೆಐ ಅವರ ಜಾತಿ ಮುಂದಿಟ್ಟು ನಿಂದಿಸಲಾಗಿತ್ತು. ಶೂ ಎಸೆತ ಪ್ರಯತ್ನದ ಬಳಿಕ ಹಲವರು ಸಿಜೆಐ ಹತ್ಯೆಯನ್ನು ಬಯಸಿ ಪೋಸ್ಟ್ ಹಾಕಿದ್ದರು.

ಈ ಎಲ್ಲಾ ಪೋಸ್ಟ್‌ಗಳು ಮತ್ತು ವಿಡಿಯೋಗಳ ವಿರುದ್ದ ಪಂಜಾಬ್ ಹೊರತುಪಡಿಸಿ ಪೊಲೀಸರು ಕ್ರಮ ಕೈಗೊಂಡಿರುವ ಬಗ್ಗೆ ಎಲ್ಲೂ ವರದಿಯಾಗಿಲ್ಲ. ಕನಿಷ್ಠ ಪಕ್ಷ ಫೇಸ್‌ಬುಕ್‌, ಎಕ್ಸ್‌ನಂತಹ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಇಂತಹ ಬೆದರಿಕೆ, ಜಾತಿ ನಿಂದನೆಯ ಪೋಸ್ಟ್‌ಗಳನ್ನು ತೆಗೆದು ಹಾಕುವ ಪ್ರಯತ್ನವನ್ನೂ ಮಾಡಿಲ್ಲ.

ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...