Homeಕರ್ನಾಟಕ'ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

‘ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

- Advertisement -
- Advertisement -

ನಮ್ಮ ಹಕ್ಕೊತ್ತಾಯಗಳು ಮತ್ತು ಬೇಡಿಕೆಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಪ್ರತಿಭಟನೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಒಳಮೀಸಲಾತಿ ಜಾರಿ ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ರಾಜೀನಾಮೆಗೆ ಆಗ್ರಹಿಸಿದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು, ಸಚಿವರ ಮನೆಗೆ ಮುತ್ತಿಗೆ ಹಾಕುವುದಕ್ಕೆ ಮುಂದಾದಾಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟ, “ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಆಗ್ರಹಿಸಿ ಕಳೆದ 35 ವರ್ಷಗಳಿಂದ ನಿರಂತರವಾಗಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟದಿಂದಾಗಿ ಆಗಸ್ಟ್‌ 1 2024ರಂದು ಮಾನ್ಯ ಸರ್ವೋಚ್ಚ ನ್ಯಾಯಾಲಯದ 7 ಜನ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಒಳಮೀಸಲಾತಿಯ ಪರವಾಗಿ ತೀರ್ಪು ನೀಡಿ, ರಾಜ್ಯ ಸರ್ಕಾರಗಳ ಹೆಗಲಿಗೆ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ನೀಡಿ 14 ತಿಂಗಳುಗಳು ಕಳೆದರೂ ಒಳಮೀಸಲಾತಿ ಕುರಿತಂತೆ ತಾರ್ಕಿಕ ಅಂತ್ಯ ಕಂಡಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಕರ್ನಾಟಕ ಸರ್ಕಾರ ತಡವಾಗಿ ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರಾದ ಹೆಚ್‌. ಎನ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸಂಗ್ರಹ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಯ ಕುರಿತು ನಿರ್ಣಯ ಮಾಡಲಾಗಿದೆ. ಇದು ಒಳಮೀಸಲಾತಿ ಹೋರಾಟಕ್ಕೆ ತಾತ್ವಿಕ ಗೆಲುವು ಸಿಕ್ಕಂತಾಗಿದೆ. ಆದರೆ, ಒಳಮೀಸಲಾತಿಯನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ರಾಜ್ಯ ಸರ್ಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯು ವಿಳಂಬ ಧೋರಣೆ ಅನುಸರಿಸುತ್ತಿರುವುದು ಒಳಮೀಸಲಾತಿ ಹೋರಾಟಗಾರರಲ್ಲಿ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಾಗೂ ಕರ್ನಾಟಕ ಸರ್ಕಾರದ ಮೇಲೆ ವಿಶ್ವಾಸವಿಲ್ಲದಾಗಿದೆ” ಎಂದು ಹೇಳಿದ್ದಾರೆ.

ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ ಮನೆಗೆ ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ಬಂಧಿಸಿದರು.

“ನಮ್ಮ ಹಕ್ಕೊತ್ತಾಯಗಳಿಗೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳದಿದ್ದರೆ ಹೋರಾಟವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು, ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗುವುದು” ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯಗಳು

1. ಬಡ್ತಿ, ಬ್ಯಾಕ್ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿಯನ್ನು ಅನ್ವಯಿಸಿ ಕೂಡಲೇ ಆದೇಶ ಹೊರಡಿಸಬೇಕು.

2. ಎಕೆ, ಎಡಿ, ಎಎ ಕುರಿತು ಈಗಾಗಲೇ ಹೊರಡಿಸಿರುವ ಆದೇಶದಲ್ಲಿ ಹಲವು ಗೊಂದಲಗಳಿರುವುದರಿಂದ ಪರಿಷ್ಕರಿಸಿ ಮರು ಆದೇಶವನ್ನು ತಕ್ಷಣವೇ ಹೊರಡಿಸಬೇಕು.

3. ಜಸ್ಟೀಸ್‌ ಎಚ್‌.ಎನ್‌. ನಾಗಮೋಹನ್‌ ದಾಸ್‌ ವರದಿಯಲ್ಲಿರುವ 4 ಲಕ್ಷ 73 ಸಾವಿರ ಜನರಲ್ಲಿ ನಕಲಿ ಜನರಿರುವ ಸಂಶಯ ಒಳಮೀಸಲಾತಿ ಹೋರಾಟಗಾರರಲ್ಲಿದೆ. ಹಾಗಾಗಿ, ಕೂಡಲೇ ಈ 4 ಲಕ್ಷ 73 ಸಾವಿರ ಜನರ ಮಾಹಿತಿಯನ್ನು ಬಹಿರಂಗಗೊಳಿಸಬೇಕು.

4. ತೆಲಂಗಾಣ ಮಾದರಿಯಂತೆ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಬೇಕು.

5. ಆರ್ಥಿಕ ಕ್ಷೇತ್ರಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಿ ಆದೇಶ ಹೊರಡಿಸಬೇಕು.

6. ಶಾಶ್ವತ ಆಯೋಗ ರಚಿಸಿ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿಯನ್ನು ನೀಡಬೇಕು.

7. ಎಸ್‌ಸಿಎಸ್‌ಪಿ/ಟಿಎಸ್‌ಪಿ ಸಲಹೆಗಾರರ ಹುದ್ದೆಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕು.

8. ⁠ಒಳಮೀಸಲಾತಿ ಜಾರಿ ಕಾವಲು ಸಮಿತಿಯನ್ನು ರಚಿಸಬೇಕು.

ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...