Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

- Advertisement -
- Advertisement -

ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ​​ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಮಾಸ್, ಪ್ಯಾಲೆಸ್ಟಿನೀಯನ್ ಇಸ್ಲಾಮಿಕ್ ಜಿಹಾದ್ ಮತ್ತು ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಷನ್ ಆಫ್ ಪ್ಯಾಲೆಸ್ಟೈನ್ (ಪಿಎಫ್‌ಎಲ್‌ಎಫ್‌) ಸಂಘಟನೆಗಳು ಗಾಝಾ ಪಟ್ಟಿಯ ಮೇಲೆ ‘ಯಾವುದೇ ವಿದೇಶಿ ಆಡಳಿತ’ವನ್ನು ತಿರಸ್ಕರಿಸುವುದಾಗಿ ಹೇಳಿವೆ.

ಇದೇ ವೇಳೆ, ಗಾಜಾ ಅಧಿಕಾರಿಗಳು ಇಸ್ರೇಲ್‌ ಗಾಝಾದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ನಡೆದ ಯುದ್ಧಾಪರಾಧಗಳು ಮತ್ತು ಜನಾಂಗೀಯ ಹತ್ಯಾಕಾಂಡದ ಬಗ್ಗೆ ಸ್ವತಂತ್ರವಾದ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದ್ದಾರೆ.

ಗಾಝಾದ ಎಲ್ಲಾ ಗಡಿಗಳನ್ನು ತೆರೆಯುವಂತೆ ಪ್ಯಾಲೆಸ್ತೀನ್ ನಿರಾಶ್ರಿತರ ಪರ ಕೆಲಸ ಮಾಡುವ ವಿಶ್ವಸಂಸ್ಥೆಯ ಸಂಸ್ಥೆ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಫ್ಯೂಜಿ ಇನ್ ದ ನಿಯರ್ ಈಸ್ಟ್ (ಯುನ್‌ಆರ್‌ಡಬ್ಲ್ಯುಎ) ಒತ್ತಾಯಿಸಿದೆ. ಗಡಿ ತೆರೆದ ಗಂಟೆಗಳಲ್ಲಿ ಗಾಝಾ ತಲುಪಲು 6,000 ನೆರವು ಟ್ರಕ್‌ಗಳು ಸಿದ್ಧವಾಗಿವೆ ಎಂದು ಅದು ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಸುಮಾರು 135 ಪ್ಯಾಲೆಸ್ತೀನಿಯರ ಶವಗಳನ್ನು ಶುಕ್ರವಾರ ಗಾಝಾದ ವಿವಿಧ ಆಸ್ಪತ್ರೆಗಳಿಗೆ ತರಲಾಗಿದೆ ಎಂದು ವಫಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ ಬಾಂಬ್ ದಾಳಿಯನ್ನು ನಿಲ್ಲಿಸಿರುವ ಸಂದರ್ಭವನ್ನು ಬಳಸಿಕೊಂಡು ರಕ್ಷಣಾ ತಂಡಗಳು ನಾಶವಾದ ಕಟ್ಟಡಗಳನ್ನು ತಲುಪುತ್ತಿವೆ.

ಶುಕ್ರವಾರ ಇಸ್ರೇಲಿ ವಾಯುದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಈ ಹಿಂದೆ ಉಂಟಾದ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಗಾಝಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಸಮುದ್ರದ ಮೂಲಕ ನೆರವು ತಲುಪಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇನ್ನೂ ಐದು ಜನರನ್ನು ಇಸ್ರೇಲ್‌ ಬಂಧನದಿಂದ ಬಿಡುಗಡೆ ಮಾಡಿದೆ ಎಂದು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಹೇಳಿದೆ.

ದಕ್ಷಿಣ ಲೆಬನಾನ್‌ನ ಅಲ್-ನಝರಿಯಾ ಗ್ರಾಮದ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಹಿನ್ನೆಲೆ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲೆಬನಾನಿನ ಸಶಸ್ತ್ರ ಗುಂಪಿಗೆ ಸೇರಿದ ಮೂಲಸೌಕರ್ಯವನ್ನು ಪುನಃಸ್ಥಾಪಿಸಲು ಬಳಸುವ ಉಪಕರಣಗಳನ್ನು ಸಂಗ್ರಹಿಸುತ್ತಿದ್ದ ಹಿಜ್ಬೊಲ್ಲಾ ತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಆಕ್ರಮಿತ ಪಶ್ಚಿಮ ದಂಡೆಯ ದುರಾ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲಿ ಸೇನೆಯು ಒಬ್ಬ ಪ್ಯಾಲೆಸ್ತೀನ್ ವ್ಯಕ್ತಿಯ ಮೇಲೆ ಗುಂಡು ಹಾರಿಸಿದೆ ಮತ್ತು ನಂತರ ಗಾಯಾಳು ವ್ಯಕ್ತಿಯನ್ನು ತಲುಪದಂತೆ ಆಂಬ್ಯುಲೆನ್ಸ್‌ಗಳನ್ನು ತಡೆದಿದೆ ಎಂದು ವರದಿಗಳು ಹೇಳಿವೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...