Homeದಲಿತ್ ಫೈಲ್ಸ್ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ 'ಆತ್ಮಹತ್ಯೆ' ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

- Advertisement -
- Advertisement -

ಹರಿಯಾಣದ ಉನ್ನತ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಚಂಡೀಗಢ ಪೊಲೀಸರು ನಿನ್ನೆ ರಾತ್ರಿ ದಾಖಲಿಸಿದ ಎಫ್‌ಐಆರ್‌ನಿಂದ ತೃಪ್ತರಾಗದ ಮೃತ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬ, ಎಫ್‌ಐಆರ್‌ನಲ್ಲಿ ಕೆಲ ಬದಲಾವಣೆಗಳನ್ನು ಕೋರಿದೆ.

ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅವರಿಗೆ ಐಎಎಸ್ ಅಧಿಕಾರಿ ಮತ್ತು ಪೂರಣ್ ಕುಮಾರ್ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರು ಬರೆದ ಪತ್ರದಲ್ಲಿ, “ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಅಗತ್ಯವಾದ ವಿವರಗಳು ದಾಖಲೆಯಲ್ಲಿ ಇಲ್ಲ” ಎಂದು ಒತ್ತಿ ಹೇಳಿದರು.

ಅಕ್ಟೋಬರ್ 8 ರಂದು ಸಲ್ಲಿಸಿದ ದೂರನ್ನು ಉಲ್ಲೇಖಿಸಿ ಪತ್ರ ಬರೆದಿರುವ ಅಮ್ನೀತ್ ಅವರು, “ಇಬ್ಬರು ಆರೋಪಿಗಳಾದ ಶತ್ರುಜೀತ್ ಕಪೂರ್ (ಹರಿಯಾಣ ಡಿಜಿಪಿ) ಮತ್ತು ನರೇಂದ್ರ ಬಿಜಾರ್ನಿಯಾ (ರೋಹ್ಟಕ್ ಎಸ್‌ಪಿ) ಅವರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ನಮೂದಿಸಲಾಗಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಚಂಡೀಗಢ ಪೊಲೀಸರು ಹೇಳಿಕೆಯಲ್ಲಿ, ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ಎಲ್ಲ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಚಂಡೀಗಢ ಪೊಲೀಸರು ತಿಳಿಸಿದ್ದಾರೆ.

ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ, ಅವರು ತಮ್ಮ ಸಾವಿಗೆ ಪ್ರಸ್ತುತ ಹರಿಯಾಣ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸೇರಿದಂತೆ ಹರಿಯಾಣದ 11 ಉನ್ನತ ಪೊಲೀಸರನ್ನು ಹೆಸರಿಸಿದ್ದಾರೆ. ಅಕ್ಟೋಬರ್ 7 ರಂದು, ಅವರು ಚಂಡೀಗಢದಲ್ಲಿರುವ ಖಾಸಗಿ ನಿವಾಸದಲ್ಲಿ ತಮ್ಮ ಸೇವಾ ರಿವಾಲ್ವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡರು.

ಆದರೂ, ಮೃತ ಅಧಿಕಾರಿಯ ಪತ್ನಿ ನಿಗದಿತ ಎಫ್‌ಐಆರ್ ಸ್ವರೂಪದ ಪ್ರಕಾರ, ಎಲ್ಲಾ ಆರೋಪಿಗಳ ಹೆಸರುಗಳನ್ನು ಕಾಲಮ್ ಸಂಖ್ಯೆ ಏಳರ ಅಡಿಯಲ್ಲಿ ಸ್ಪಷ್ಟವಾಗಿ ಪಟ್ಟಿ ಮಾಡಬೇಕು. ಆದರೆ, ಅದನ್ನು ಅನುಸರಿಸಲಾಗಿಲ್ಲ ಎಂದು ಆರೋಪಿಸಿದ್ದಾರೆ. “ಸರಿಯಾದ ವಿಭಾಗದಲ್ಲಿ ಎಲ್ಲ ಆರೋಪಿ ವ್ಯಕ್ತಿಗಳ ಹೆಸರುಗಳನ್ನು ನಿಖರವಾಗಿ ಪ್ರತಿಬಿಂಬಿಸಲು ಎಫ್‌ಐಆರ್ ಅನ್ನು ತಿದ್ದುಪಡಿ ಮಾಡಬೇಕೆಂದು ವಿನಂತಿಸಲಾಗಿದೆ” ಎಂದು ಅವರು ಪತ್ರ ಬರೆದಿದ್ದಾರೆ.

“ಎಸ್‌ಸಿ/ಎಸ್‌ಟಿ ಕಾಯ್ದೆಯ ದುರ್ಬಲಗೊಳಿಸಿದ ವಿಭಾಗಗಳನ್ನು ತಿದ್ದುಪಡಿ ಮಾಡಬೇಕು” ಎಂದು ಅವರು ಒತ್ತಿ ಹೇಳಿದರು. “ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಉಲ್ಲೇಖಿಸಲಾದ ವಿಭಾಗವನ್ನು ದುರ್ಬಲಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಅನ್ವಯವಾಗುವ ಸೂಕ್ತ ವಿಭಾಗವೆಂದರೆ ತಿದ್ದುಪಡಿ ಮಾಡಲಾದ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(ವಿ) ಆಗಿದೆ. ಸರಿಯಾದ ಕಾನೂನು ನಿಬಂಧನೆಗಳನ್ನು ಅನ್ವಯಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಈ ವಿಭಾಗಗಳನ್ನು ಅದಕ್ಕೆ ಅನುಗುಣವಾಗಿ ಸೇರಿಸಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸೆಕ್ಷನ್ 3(2)(ವಿ) ಪ್ರಕಾರ, ಬಲಿಪಶು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ಸದಸ್ಯನಾಗಿರುವುದರಿಂದ ಮಾತ್ರ ಅಪರಾಧ ಎಸಗುವ ವ್ಯಕ್ತಿಗಳು ಜೀವಾವಧಿ ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗುತ್ತಾರೆ.

ಅಮ್ನೀತ್ ಅವರು ಅಕ್ಟೋಬರ್ 8 ರಂದು ಚಂಡೀಗಢ ಪೊಲೀಸರಿಗೆ ನೀಡಿದ ದೂರಿನಲ್ಲಿ, ತನ್ನ ಪತಿಯ ಸಾವು ಸಾಮಾನ್ಯ ಆತ್ಮಹತ್ಯೆಯಲ್ಲ, ಬದಲಾಗಿ ತನ್ನ ಪತಿಯ ಮೇಲೆ ವ್ಯವಸ್ಥಿತವಾಗಿ ಕಿರುಕುಳ ನೀಡಿದ ಪರಿಣಾಮವಾಗಿದೆ. ಎಸ್‌ಸಿ ಸಮುದಾಯದ ಅಧಿಕಾರಿಯಾಗಿದ್ದ ಅವರಿಗೆ ಮೇಲಧಿಕಾರಿಗಳು ತಮ್ಮ ಸ್ಥಾನಗಳನ್ನು ಬಳಸಿಕೊಂಡು ಮಾನಸಿಕವಾಗಿ ಹಿಂಸೆ ನೀಡಿ ಸಾವಿಗೆ ಕಾರಣರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಚಂಡೀಗಢ ಪೊಲೀಸರಿಂದ ಕ್ರಮ ಕೈಗೊಳ್ಳುವಂತೆ ಕೇಳಿದೆ.

ಕ್ರಮಕ್ಕೆ ಆಗ್ರಹ

ಹರಿಯಾಣದಲ್ಲಿ ನಡೆದಿರುವ ಐಪಿಎಸ್‌ ಆತ್ಮಹತ್ಯೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ವಿರುದ್ಧ ಸಾರ್ವಜನಿಕರು ಹಾಗೂ ವಿಪಕ್ಷ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಲಿತ ಸಂಘಟನೆಗಳಿಂದ ಹಿಡಿದು ಹಿರಿಯ ವಿರೋಧ ಪಕ್ಷದ ನಾಯಕರವರೆಗೆ ಎಲ್ಲರೂ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಗೆ ಬಿಜೆಪಿ-ಆರ್‌ಎಸ್‌ಎಸ್‌ನ ‘ಮನುವಾದಿ’ ಸಿದ್ಧಾಂತವೇ ಕಾರಣ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...