Homeಮುಖಪುಟಪಶ್ಚಿಮ ಬಂಗಾಳದಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಪಶ್ಚಿಮ ಬಂಗಾಳದಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಶನಿವಾರ (ಅ.11) ವರದಿಯಾಗಿದೆ.

ಶುಕ್ರವಾರ (ಅ. 10) ರಾತ್ರಿ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗೆ ಎರಡನೇ ವರ್ಷದ ವಿದ್ಯಾರ್ಥಿನಿ ತನ್ನ ಸ್ನೇಹಿತರೊಬ್ಬರ ಜೊತೆ ಊಟಕ್ಕೆ ಹೋಗಿದ್ದಾಗ ದೌರ್ಜನ್ಯ ನಡೆದಿದೆ ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ.

ಒಡಿಶಾದ ಜಲೇಶ್ವರ ಮೂಲದ ಸಂತ್ರಸ್ಥೆ ವಿದ್ಯಾರ್ಥಿನಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

“ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧರಿಸಿ ನಾವು ತನಿಖೆ ಪ್ರಾರಂಭಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, “ನಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಿಗ್ಗೆ ದುರ್ಗಾಪುರ ತಲುಪಿದ್ದೇವೆ” ಎಂದು ಹೇಳಿದ್ದಾರೆ.

ಶುಕ್ರವಾರ (ಅಕ್ಟೋಬರ್ 10) ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗಳು ಕಾಲೇಜು ಕ್ಯಾಂಪಸ್‌ನಿಂದ ಸ್ನೇಹಿತೆಯೊಬ್ಬಳೊಂದಿಗೆ ಊಟಕ್ಕೆ ಹೋಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ತಾಯಿ ಹೇಳಿಕೊಂಡಿದ್ದಾರೆ.

“ನಾವು ಇಂದು ಬೆಳಿಗ್ಗೆ ಇಲ್ಲಿಗೆ ಬಂದು ಪೊಲೀಸರಿಗೆ ದೂರು ನೀಡಿದ್ದೇವೆ. ಕಾಲೇಜು ಶೈಕ್ಷಣಿಕವಾಗಿ ಉತ್ತಮವಾಗಿದೆ ಎಂದು ನಾವು ಕೇಳ್ಪಟ್ಟಿದ್ದೆವು. ಹಾಗಾಗಿ, ನಾವು ನಮ್ಮ ಮಗಳನ್ನು ಇಲ್ಲಿ ವೈದ್ಯಕೀಯ ಅಧ್ಯಯನಕ್ಕೆ ಕಳುಹಿಸಿದ್ದೇವೆ” ಎಂದು ವಿದ್ಯಾರ್ಥಿನಿಯ ತಂದೆ ತಿಳಿಸಿದ್ದಾರೆ.

ಶುಕ್ರವಾರ (ಅಕ್ಟೋಬರ್ 10) ರಾತ್ರಿ 8-8.30 ರ ನಡುವೆ ವಿದ್ಯಾರ್ಥಿನಿ ತನ್ನ ಸ್ನೇಹಿತೆಯೊಂದಿಗೆ ಕ್ಯಾಂಪಸ್ ಹೊರಗೆ ಹೋಗಿದ್ದರು. ಈ ವೇಳೆ ಮೂವರು ಅಪರಿಚಿತ ವ್ಯಕ್ತಿಗಳು ಅಲ್ಲಿಗೆ ಬಂದಿದ್ದಾರೆ. ಈ ವೇಳೆ ಸ್ನೇಹಿತೆ ಆಕೆಯನ್ನು ಒಂಟಿಯಾಗಿ ಬಿಟ್ಟು ಹೋಗಿದ್ದಾಳೆ. ಆ ವ್ಯಕ್ತಿಗಳು ಆಕೆಯ ಫೋನ್ ಕಸಿದುಕೊಂಡು ಕ್ಯಾಂಪಸ್‌ ಹೊರಗಿನ ಕಾಡಿಗೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆರೋಪಿಗಳು ವಿದ್ಯಾರ್ಥಿನಿ ಮೊಬೈಲ್ ಫೋನ್ ಹಿಂತಿರುಗಿಸಲೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. ವಿದ್ಯಾರ್ಥಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ತಂಡವು ಸಂತ್ರಸ್ತೆ ಮತ್ತು ಆಕೆಯ ಪೋಷಕರನ್ನು ಭೇಟಿ ಮಾಡಲು ದುರ್ಗಾಪುರಕ್ಕೆ ತೆರಳುತ್ತಿದೆ. “ಬಂಗಾಳದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚುತ್ತಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸರು ಯಾವುದೇ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಇದು ತುಂಬಾ ದುರದೃಷ್ಟಕರ. ಇಂತಹ ಅಪರಾಧಗಳ ಹೆಚ್ಚಳವನ್ನು ತಡೆಯಲು ಒಟ್ಟಾಗಿ ಕೆಲಸ ಮಾಡಲು ಮುಖ್ಯಮಂತ್ರಿಗಳು ಮುಂದೆ ಬರಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಎನ್‌ಸಿಡಬ್ಲ್ಯು ಸದಸ್ಯೆ ಅರ್ಚನಾ ಮಜುಂದಾರ್ ಹೇಳಿದ್ದಾಗಿ ವರದಿಗಳು ವಿವರಿಸಿವೆ.

ಪಶ್ಚಿಮ ಬಂಗಾಳ ರಾಜ್ಯ ಆರೋಗ್ಯ ಇಲಾಖೆ ಶನಿವಾರ (ಅಕ್ಟೋಬರ್ 11) ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಿಂದ ವರದಿ ಕೇಳಿದೆ ಎಂದು ವರದಿಯಾಗಿದೆ.

ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ: ರೋಹ್ಟಕ್ ಎಸ್‌ಪಿ ನರೇಂದ್ರ ಬಿಜಾರ್ನಿಯಾ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...