Homeಮುಖಪುಟಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಅವರ ಪುಣ್ಯತಿಥಿಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮುಂಬೈನ ಟಾಟಾ ಇನ್ಸಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ (ಟಿಐಎಸ್‌ಎಸ್‌) ಕನಿಷ್ಠ 10 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸೋಮವಾರ (ಅ.13) ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಇತರ ಕೆಲವರ ವಿಳಾಸಗಳನ್ನು ಹುಡುಕುತ್ತಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ. ಬಂಧಿತರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಶೇಕಡ 90ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿದ್ದ ಮತ್ತು ಗಾಲಿಕುರ್ಚಿ ಬಳಸುತ್ತಿದ್ದ ಸಾಯಿಬಾಬಾ ಅವರು, ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರು.

ಮಾರ್ಚ್ 2024ರಲ್ಲಿ ಬಾಂಬೆ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿ ಬಿಡುಗಡೆ ಮಾಡಿತ್ತು. ಏಳು ತಿಂಗಳ ನಂತರ, ಅಕ್ಟೋಬರ್ 12ರಂದು ಹೈದರಾಬಾದ್‌ನಲ್ಲಿ ಶಸ್ತ್ರಚಿಕಿತ್ಸೆಯ ನಂತರದ ತೊಡಕುಗಳಿಂದ ಅವರು ನಿಧನರಾದರು.

ಭಾನುವಾರ (ಅ.12) ಕೆಲವು ಟಿಐಎಸ್ಎಸ್ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಒಟ್ಟುಗೂಡಿ ಸಾಯಿಬಾಬಾ ಅವರ ಪುಣ್ಯತಿಥಿಯನ್ನು ಸ್ಮರಿಸಲು ಮೇಣದಬತ್ತಿಗಳನ್ನು ಬೆಳಗಿಸಿ, ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ, ಡೆಮಾಕ್ರಟಿಕ್ ಸೆಕ್ಯುಲರ್ ಸ್ಟೂಡೆಂಟ್ಸ್ ಫೋರಮ್ ಎಂಬ ಗುಂಪಿನೊಂದಿಗೆ ಸಂಬಂಧ ಹೊಂದಿದ್ದ ಕೆಲವು ವಿದ್ಯಾರ್ಥಿಗಳು ಕೆಲವು ಪೋಸ್ಟರ್‌ಗಳನ್ನು ಹರಿದು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಅಲ್ಲದೆ, ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಫೋಟೊಗಳನ್ನು ಕೂಡ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಟಿಐಎಸ್ಎಸ್ ಆಡಳಿತ ಮಂಡಳಿಯ ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎಫ್‌ಐಆರ್‌ನಲ್ಲಿ “ರಾಷ್ಟ್ರದ ವಿರುದ್ಧ ಪಿತೂರಿ”, “ಗುಂಪುಗಳ ನಡುವೆ ದ್ವೇಷ ಹರಡುವುದು” ಹಾಗೂ “ಕಾನೂನುಬಾಹಿರವಾಗಿ ಸಭೆ ನಡೆಸುವುದು” ಸೇರಿದಂತೆ ವಿವಿಧ ಆರೋಪಗಳನ್ನು ಹೊರಿಸಲಾಗಿದೆ ಎಂದು ವರದಿ ಹೇಳಿದೆ.

2020ರ ದೆಹಲಿ ಗಲಭೆಯ ಹಿಂದಿನ ಪಿತೂರಿಯ ಆರೋಪದ ಮೇಲೆ ಕಳೆದ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿರುವ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ, ಭಾನುವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ‘ದಿ ವೈರ್’ ಜೊತೆ ಮಾತನಾಡಿ, ಕಾರ್ಯಕ್ರಮದಲ್ಲಿ ಯಾವುದೇ ಘೋಷಣೆಗಳನ್ನು ಕೂಗಲಾಗಿಲ್ಲ ಎಂದು ಹೇಳಿದ್ದಾರೆ.

‘ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..’; ಬಿಜೆಪಿಗೆ ಪ್ರಿಯಾಂಕ್‌ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...