Homeಮುಖಪುಟದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ...

ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ ಸೋನಿಪತ್ ರ‍್ಯಾಲಿ ರದ್ದು

- Advertisement -
- Advertisement -

ಜಾತಿ ದೌರ್ಜನ್ಯದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಹರಿಯಾಣ ಸರ್ಕಾರ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರಾಜೀವ್ ಜೇಟ್ಲಿ ಸೋಮವಾರ (ಅ.13) ದೃಢಪಡಿಸಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸೋನಿಪತ್ ಭೇಟಿ ರದ್ದಾಗಿದೆ.

ಶತ್ರುಜೀತ್ ಕಪೂರ್ ಅವರ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಹರಿಯಾಣ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಹರಿಯಾಣ ರಾಜ್ಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದ ಮಹಾನಿರ್ದೇಶಕರಾಗಿರುವ 1992ರ ಬ್ಯಾಚ್ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ನೀಡಿದೆ.

ಈ ವರ್ಷದ ಡಿಸೆಂಬರ್ 31 ರಂದು ನಿವೃತ್ತರಾಗಲಿರುವ ಸಿಂಗ್, ಕಪೂರ್ ಅವರ ರಜೆಯ ಸಮಯದಲ್ಲಿ ಅವರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಪೂರಣ್ ಕುಮಾರ್ ಸಾವಿಗೆ ಸಂಬಂಧಿಸಿದಂತೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಬಿಜಾರ್ನಿಯಾ ಅವರನ್ನು ಹುದ್ದೆ ಗೊತ್ತುಪಡಿಸದೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ.

ಪೂರಣ್ ಕುಮಾರ್ ಅವರು ಸಾವಿಗೂ ಮುನ್ನ ಬರೆದಿರುವ 9 ಪುಟಗಳ ಸುದೀರ್ಘ ಡೆತ್ ನೋಟ್‌ನಲ್ಲಿ ಮೇಲಧಿಕಾರಿಗಳ ವಿರುದ್ದ ಜಾತಿ ತಾರತಮ್ಯದ ಆರೋಪ ಹೊರಿಸಿದ್ದಾರೆ. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹಾಗಾಗಿ, ಒತ್ತಡದ ಹಿನ್ನೆಲೆ ಮತ್ತು ಪರಿಶಿಷ್ಟ ಜಾತಿ, ಸಮುದಾಯಗಳನ್ನು ಸಮಾಧಾನ ಮಾಡಲು ಸರ್ಕಾರ ಡಿಜಿಪಿ ವಿರುದ್ದ ಕ್ರಮ ಕೈಗೊಂಡಿದೆ ಎಂದು ಹೇಳಲಾಗ್ತಿದೆ.

ಡೆತ್ ನೋಟ್‌ನಲ್ಲಿ ಪೂರಣ್ ಕುಮಾರ್ ಅವರು ಕಪೂರ್, ಬಿಜಾರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ಅಧಿಕಾರ ದುರುಪಯೋಗದ ಆರೋಪ ಹೊರಿಸಿದ್ದಾರೆ.

ಕುಮಾರ್ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಅಮ್ನೀತ್ ಅವರು, ತಮ್ಮ ಪತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಪೂರ್ ಮತ್ತು ಬಿಜಾರ್ನಿಯಾ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗೆ ಒಪ್ಪಿಗೆ ನೀಡಲು ಕುಟುಂಬ ನಿರಾಕರಿಸಿದೆ.

ಪ್ರಧಾನಿ ಮೋದಿ ಭೇಟಿ ರದ್ದು

ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವ ಆಚರಣೆಗಾಗಿ ಅಕ್ಟೋಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಪತ್‌ಗೆ ಭೇಟಿ ನೀಡಬೇಕಿತ್ತು. ಆದರೆ, ಅಧಿಕಾರಿಯ ಆತ್ಮಹತ್ಯೆಯಿಂದ ಉಂಟಾದ ಜನಾಕ್ರೋಶ ಮೋದಿ ಪ್ರವಾಸ ರದ್ದತಿಗೆ ಕಾರಣವಾಗಿದೆ.

ಇದಲ್ಲದೆ, ಮಂಗಳವಾರ ನಡೆಯಲಿರುವ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಸಿಎಂ ಸೈನಿ ಅವರು ನೂಹ್‌ಗೆ ಭೇಟಿ ನೀಡುವುದನ್ನು ಕೂಡ ರದ್ದುಗೊಳಿಸಲಾಗಿದೆ.

ಸೋನಿಪತ್‌ನ ರಾಯ್‌ನಲ್ಲಿರುವ ಎಜುಕೇಶನ್ ಸಿಟಿಯಲ್ಲಿ ‘ಜನ್ ವಿಶ್ವಾಸ್-ಜನ್ ವಿಕಾಸ್’ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು ಮತ್ತು ಹಲವಾರು ಹೊಸ ಉಪಕ್ರಮಗಳಿಗೆ ಚಾಲನೆ ನೀಡಬೇಕಿತ್ತು. ಆದರೆ, ಏಕಾಏಕಿ ಕಾರ್ಯಕ್ರಮ ಭೇಟಿ ರದ್ದಾಗಿದೆ.

ರದ್ದತಿಗೆ ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲವಾದರೂ, ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯ ನಂತರದ ಪರಿಸ್ಥಿತಿಯು ಪ್ರಧಾನಿಯವರ ಭೇಟಿಗೆ ಅನುಕೂಲಕರವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...