Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ಬಿಹಾರ ವಿಧಾನಸಭೆ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಮೂಲಕ ಎರಡು ಹಂತದ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಎನ್‌ಡಿಎ ಬಣದ ಮೊದಲ ಪಕ್ಷ ಎನಿಸಿಕೊಂಡಿದೆ. ಮೊದಲ ಪಟ್ಟಿಯಲ್ಲಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ.

ಚೌಧರಿ ಮುಂಗೇರ್‌ನ ತಾರಾಪುರದಿಂದ ಸ್ಪರ್ಧಿಸಿದರೆ, ಸಿನ್ಹಾ ಲಖಿಸರಾಯ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಜೆಡಿಯುನ ರಾಜೀವ್ ಕುಮಾರ್ ಸಿಂಗ್ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ತಾರಾಪುರ ಸ್ಥಾನವನ್ನು ಗೆದ್ದಿದ್ದರು.

71 ಅಭ್ಯರ್ಥಿಗಳ ಪೈಕಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. ಬಿಹಾರ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರ ಹೆಸರು ಪಟ್ಟಿಯಲ್ಲಿಲ್ಲ. ಯಾದವ್ ಅವರ ಬದಲಿಗೆ ಪಾಟ್ನಾ ಸಾಹೇಬ್‌ನಿಂದ ಹೊಸ ಅಭ್ಯರ್ಥಿ ರತ್ನೇಶ್ ಕುಶ್ವಾಹ ಅವರನ್ನು ಕಣಕ್ಕಿಳಿಸಲಾಗಿದೆ.

ವಿಧಾನ ಪರಿಷತ್ ಸದಸ್ಯರಾಗಿರುವ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರಿಗೂ ಟಿಕೆಟ್ ನೀಡಲಾಗಿದೆ. ಅವರು ತಮ್ಮ ತವರು ಜಿಲ್ಲೆಯ ಸಿವಾನ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಪಾಟಲಿಪುತ್ರದ ಮಾಜಿ ಸಂಸದ ರಾಮ್ ಕೃಪಾಲ್ ಯಾದವ್ ಅವರು ದಾನಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಕೇಂದ್ರ ಸಚಿವರೂ ಆಗಿರುವ ರಾಮ್ ಕೃಪಾಲ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ವಿರುದ್ಧ ಸೋತಿದ್ದರು.

ಪ್ರಮುಖ ಕ್ಷೇತ್ರಗಳಾದ ಬೆಟ್ಟಿಯಾದಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ರೇಣು ದೇವಿ, ಪರಿಹಾರ್‌ನಿಂದ ಗಾಯತ್ರಿ ದೇವಿ, ಛಾತಾಪುರದಿಂದ ನೀರಜ್ ಕುಮಾರ್ ಸಿಂಗ್ ಬಬ್ಲು ಮತ್ತು ಗಯಾದಿಂದ ಪ್ರೇಮ್ ಕುಮಾರ್‌ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಹಿಸುವಾ ಸ್ಥಾನವನ್ನು ಉಳಿಸಿಕೊಂಡಿದ್ದು, ಅನಿಲ್ ಕುಮಾರ್ ಅವರನ್ನು ಮತ್ತೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಮಾಜಿ ಉಪಮುಖ್ಯಮಂತ್ರಿ ತರ್ಕಿಶೋರ್ ಪ್ರಸಾದ್ ಕತಿಹಾರ್‌ನಿಂದ ಸ್ಪರ್ಧಿಸಲಿದ್ದಾರೆ ಮತ್ತು ಅಲೋಕ್ ರಂಜನ್ ಝಾ ಸಹರ್ಸಾದಿಂದ ಸ್ಪರ್ಧೆ ಮಾಡಲಿದ್ದಾರೆ.

ಮಂಗಳವಾರ (ಇಂದು) ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಬೆಳಿಗ್ಗೆ ಹೇಳಿದ್ದರು. ಅದರಂತೆ ಪಟ್ಟಿ ಪ್ರಕಟಿಸಲಾಗಿದೆ.

ಆದಾಗ್ಯೂ, ಬಿಜೆಪಿ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಗೆ ಹಂಚಿಕೆ ಮಾಡಲಾದ ಕೆಲವು ಸ್ಥಾನಗಳ ಬಗ್ಗೆ ಜೆಡಿಯು ಅಸಮಾಧಾನ ವ್ಯಕ್ತಪಡಿಸಿದೆ.

ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ ಮತ್ತು ಜೆಡಿ(ಯು) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್‌ವಿ) ಪಕ್ಷಕ್ಕೆ 29 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದ್ದು, ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂ ಮತ್ತು ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.

ಹರಿಯಾಣ| ಮೃತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...