Homeಕರ್ನಾಟಕಟ್ರಾನ್ಸ್‌ಜೆಂಡರ್ ಸಮೀಕ್ಷೆ: 'ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

ಟ್ರಾನ್ಸ್‌ಜೆಂಡರ್ ಸಮೀಕ್ಷೆ: ‘ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಹಮ್ಮಿಕೊಂಡಿರುವ ಟ್ರಾನ್ಸ್‌ಜೆಂಡರ್ ಸಮೀಕ್ಷೆಯಯಲ್ಲಿ ʼಸ್ಟ್ರಿಪ್ ಆ್ಯಂಡ್ ಸರ್ಚ್ʼ (ಬಟ್ಟೆ ತೆಗೆಸಿ ಶೋಧಿಸುವ) ವಿಧಾನಕ್ಕೆ ಹೈಕೋರ್ಟ್ ಬುಧವಾರ (ಅ.15) ತಡೆ ನೀಡಿದೆ.

ಸೆಪ್ಟೆಂಬರ್ 15ರಂದು ಪ್ರಾರಂಭವಾದ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು, ಎಲ್ಲೂ ಬಹಿರಂಗಪಡಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ನಡೆಸಲು ರಾಜ್ಯ ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ಕೋರಿ ಅನಿತಾ ಹ್ಯುಮಾನಿಟೇರಿಯನ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಸಮೀಕ್ಷೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019 ಹಾಗೂ ಸಂವಿಧಾನದ 14 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

“ಆಸ್ಪತ್ರೆಗಳಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ವಿವಸ್ತ್ರಗೊಳಿಸಿ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನು ಮಾಡುವವರು ಟ್ರಾನ್ಸ್‌ಜೆಂಡರ್ ಆದರೂ, ಅವರು ಲಿಂಗ ಗುರುತು ಸರಿಯಾಗಿ ಹೇಳಿಕೊಳ್ಳದವರು ಆಗಿರಬಹುದು. ಇದು ಟ್ರಾನ್ಸ್‌ಜೆಂಡರ್ ಜನರಿಗೆ ಅಪಮಾನ ಮತ್ತು ಖಾಸಗಿ ಭಾವನೆಗೆ ಧಕ್ಕೆ ತರುತ್ತದೆ. ಟ್ರಾನ್ಸ್‌ಜೆಂಡರ್‌ಗಳಿಗೆ ಸರ್ಕಾರ ಈಗಾಗಲೇ ಗುರುತಿನ ಚೀಟಿಗಳನ್ನು ನೀಡಿದೆ. ಇದರಿಂದ ಅವರ ಗುರುತು ಸುಲಭವಾಗಿ ಪತ್ತೆ ಮಾಡಬಹುದು. ಆದ್ದರಿಂದ, ಹೊಸ ಸಮೀಕ್ಷೆಗೆ ಮತ್ತೆ ಇಂತಹ ತಪಾಸಣೆ ಮಾಡುವ ಅಗತ್ಯವೇ ಇಲ್ಲ” ಎಂದು ಅನಿತಾ ಫೌಂಡೇಶನ್ ಪರ ವಕೀಲರು ವಾದಿಸಿದ್ದರು.

ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿರುವ ಪೀಠ, ಮುಂದಿನ ವಿಚಾರಣೆಯ ದಿನಾಂಕವಾದ ಡಿಸೆಂಬರ್ 5ರೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಮೀಕ್ಷೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ವಿಧಾನವನ್ನು ಸ್ಪಷ್ಟವಾಗಿ ವಿವರಿಸುವ ಅಫಿಡವಿಟ್ ಅನ್ನು 3 ದಿನಗಳಲ್ಲಿ ಸಲ್ಲಿಸುವಂತೆ ನ್ಯಾಯಾಲಯವು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದೆ.

“ಟ್ರಾನ್ಸ್‌ಜೆಂಡರ್ ಮತ್ತು ಲಿಂಗ ವೈವಿಧ್ಯ ಹೊಂದಿರುವ (ಜೆಂಡರ್ ಡೈವರ್ಸ್) ಎಲ್ಲ ವ್ಯಕ್ತಿಗಳಿಗೆ ಪರಿಹಾರ ಮತ್ತು ಪುನರ್ವಸತಿ ನಿಧಿ (ಕಾಂಪೆನ್ಸೇಶನ್ ಮತ್ತು ರಿಹ್ಯಾಬಿಲಿಟೇಶನ್ ಫಂಡ್) ಸ್ಥಾಪಿಸುವಂತೆ ಹಾಗೂ, ಈ ನಿಧಿಯನ್ನು ಸಮೀಕ್ಷೆ ವೇಳೆ ಬಲವಂತದ ಗುರುತು ಪರಿಶೀಲನೆ/ಸ್ಟ್ರಿಪ್ ಚೆಕಿಂಗ್ (ಬಲಪೂರ್ವಕ ದೇಹ ಪರಿಶೀಲನೆ) ಅಥವಾ ಇತರ ಅಪಮಾನದ ರೂಪಗಳಿಗೆ ಒಳಗಾದವರಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

“ಕಾನೂನುಬಾಹಿರ, ಆಕ್ರಮಣಕಾರಿ ಮತ್ತು ಅಸಂವಿಧಾನಿಕ ಸಮೀಕ್ಷೆ ಪ್ರಕ್ರಿಯೆ”ಯನ್ನು ಕೈಗೊಂಡಿದ್ದಕ್ಕಾಗಿ ರಾಜ್ಯ ಸರ್ಕಾರ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಅಂತಹ ಕ್ರಮಗಳು ಪುನರಾವರ್ತನೆಯಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಲ್ಲದೆ, ಆಕ್ಷೇಪಾರ್ಹ ಸಮೀಕ್ಷೆಯನ್ನು ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಯನ್ನು ಹೊರಿಸುವಂತೆ ಕೋರಲಾಗಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಲ್ಯಾಣಕ್ಕಾಗಿ ಭವಿಷ್ಯದಲ್ಲಿ ಯಾವುದೇ ನೀತಿ ಅಥವಾ ಯೋಜನೆಯನ್ನು ರೂಪಿಸುವುದು ಮತ್ತು ಜಾರಿಗೊಳಿಸುವುದಕ್ಕೆ ಮುನ್ನ ಟ್ರಾನ್ಸ್‌ಜೆಂಡರ್ ಮತ್ತು LGBTQIA ಸಮುದಾಯದ ಪ್ರತಿನಿಧಿಗಳೊಂದಿಗೆ ಸರಿಯಾದ ಸಮಾಲೋಚನೆ ನಡೆಸಬೇಕು ಮತ್ತು ಆ ನೀತಿ, ಯೋಜನೆಗಳು ಸುಪ್ರೀಂ ಕೋರ್ಟ್‌ನ NALSA v. Union of India ತೀರ್ಪು ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಸೆಕ್ಷನ್ 4ಕ್ಕೆ ಸಮ್ಮತವಾಗಿರಬೇಕು ಎಂದು ಆದೇಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...