Homeಕರ್ನಾಟಕಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ...

ಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್

- Advertisement -
- Advertisement -

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಹಿರಂಗ ಬೆದರಿಕೆ ಹಾಕಿದ್ದಾರೆ.

ಅಕ್ಟೋಬರ್ 16ರಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಠೋಡ್, “ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಇವತ್ತು ಫೋನ್ ಮೂಲಕ ಬೆದರಿಕೆ ಹಾಕಿದವರು, ಮುಂದೆ ನಿಮ್ಮ ಮನೆಗೂ ಬರಬಹುದು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರು ಬಹಳ ಕಟ್ಟರ್ ಪಂಥದವರು, ಸ್ವಾಭಿಮಾನಿ ದೇಶ ಭಕ್ತರು, ಹಣಕ್ಕಾಗಿ ಯಾವುದೋ ಪರಿವಾರದ ಗುಲಾಮಗಿರಿ ಬಿಳಿಸುವವರು ಆರ್‌ಎಸ್‌ಎಸ್‌ನವರು ಅಲ್ಲ” ಎಂದಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಿಷೇಧ ಮಾಡಲಿ ಮುಂದೆ ನೋಡುವ, ಸರ್ಕಾರ ಶಾಶ್ವತ ಇರುವುದಿಲ್ಲವಲ್ಲ. ಸಚಿವ ಸಂಪುಟದಲ್ಲಿ ತೀರ್ಮಾನ ಆದರೆ ಇಡೀ ಕರ್ನಾಟಕದ ಕಾನೂನು, ಸುವ್ಯವಸ್ಥೆ ಕೆಟ್ಟು ಹೋಗುವ ಪರಿಸ್ಥಿತಿ ಬರುತ್ತದೆ” ಎಂದು ಹೇಳಿದ್ದಾರೆ.

ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಪ್ರತಿದಿನ ಹೊಸ ಪುರಾವೆಗಳು ಸಿಗುತ್ತಿವೆ: ಬೆದರಿಕೆಗಳು ಮುಂದುವರಿಯುತ್ತಿವೆ, ಆದರೆ ನಾನು ಬೆದರಿಸುವುದಿಲ್ಲ” ಎಂದಿದ್ದಾರೆ.

“ಅವರು ಫೋನ್ ಕರೆಗಳ ಮೂಲಕ ಪ್ರಯತ್ನಿಸಿದರು. ಅದು ವಿಫಲವಾದಾಗ ಇನ್ನು ಹೆಚ್ಚಿನದ್ದನ್ನು ಮಾಡುತ್ತಿದ್ದಾರೆ. ನಿನ್ನೆ ನೀಲಿ ಕಣ್ಣಿನ ಹುಡುಗ ಮತ್ತು ಬಿಜೆಪಿ ಚಿತ್ತಾಪುರ ಶಾಸಕ ಅಭ್ಯರ್ಥಿ, ‘ಈಗ ನಿಮಗೆ ಫೋನ್ ಮೂಲಕ ಮಾತ್ರ ಬೆದರಿಕೆ ಹಾಕಲಾಗುತ್ತಿದೆ, ಮುಂದಿನ ದಿನಗಳಲ್ಲಿ ಆರ್‌ಎಸ್‌ಎಸ್‌ನವರು ನೇರವಾಗಿ ನಿಮ್ಮ ಮನೆಗೆ ಬರಬಹುದು. ಆರ್‌ಎಸ್‌ಎಸ್‌ನವರು ಕಟ್ಟರ್ ಪಂಥೀಯರು ಮತ್ತು ದೇಶ ಭಕ್ತರು” ಎಂದು ಎಚ್ಚರಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರೇ
ನಿಮ್ಮ ಗೂಂಡಾಗಳು ಪ್ರಯತ್ನಿಸುತ್ತಲೇ ಇರಬಹುದು. ನಾನು ಎಲ್ಲಿ ವಾಸಿಸುತ್ತಿದ್ದೇನೆಂದು ನಿಮಗೆ ತಿಳಿದಿದೆ” ಎಂದು ಹೇಳಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಆರೋಪಿಯನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...