Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...