Homeಮುಖಪುಟನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

- Advertisement -
- Advertisement -

ಬಿಹಾರದ ಪ್ರಮುಖ ಕ್ಷೇತ್ರಗಳ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆದರಿಸುತ್ತಿದ್ದಾರೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ.

ಪಾಟ್ನಾದ ಶೇಖ್‌ಪುರ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭಯದಿಂದಾಗಿ ಬಿಜೆಪಿ ಒತ್ತಡ ತಂತ್ರಗಳನ್ನು ಬಳಸುತ್ತಿದೆ. ಯಾರೇ ಗೆದ್ದರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಅಂದುಕೊಂಡಿತ್ತು. ಆದರೆ ಈ ಬಾರಿ, ಅವರ ವಿಶ್ವಾಸವನ್ನು ಜನ್ ಸುರಾಜ್ ಪಕ್ಷ ಅಲುಗಾಡಿಸಿದೆ ಎಂದು ಹೇಳಿದ್ದಾರೆ.

ದಾನಾಪುರದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಅಖಿಲೇಶ್ ಕುಮಾರ್ ಅಲಿಯಾಸ್ ಮುತೂರ್ ಶಾ ಅವರನ್ನು ಬಂಧಿಸಿಟ್ಟ ಬಿಜೆಪಿ ನಾಮಪತ್ರ ಸಲ್ಲಿಸದಂತೆ ತಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರೊಂದಿಗೆ ನಮ್ಮ ಅಭ್ಯರ್ಥಿಯನ್ನು ಇಡೀ ದಿನ ಕೂರಿಸಲಾಗಿತ್ತು ಎಂದು ಪ್ರಶಾಂತ್ ಕಿಶೋರ್ ಆರೋಪ ಮಾಡಿದ್ದಾರೆ.

“ಆರ್‌ಜೆಡಿ ಗೂಂಡಾಗಳು ನಮ್ಮ ಅಭ್ಯರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಜನರಿಗೆ ಹೇಳಲಾಗಿತ್ತು. ಆದರೆ, ವಾಸ್ತವವಾಗಿ ನಮ್ಮ ಅಭ್ಯರ್ಥಿ ದೇಶದ ಗೃಹ ಸಚಿವರೊಂದಿಗೆ ಕುಳಿತಿದ್ದರು. ಚುನಾವಣಾ ಆಯೋಗ ಇದನ್ನು ಗಮನಿಸಬೇಕು. ಗೃಹ ಸಚಿವರು ಅಭ್ಯರ್ಥಿಯನ್ನು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಅವರು ನಾಮಪತ್ರ ಸಲ್ಲಿಸುವುದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಕಿಶೋರ್ ಪ್ರಶ್ನಿಸಿದ್ದು, “ಇದು ಬಿಜೆಪಿಯ ನಿಜವಾದ ಮುಖ ಮತ್ತು ನಡವಳಿಕೆ” ಎಂದಿದ್ದಾರೆ.

ಮೂವರು ಜನ್ ಸುರಾಜ್ ಅಭ್ಯರ್ಥಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕುವಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಆರೋಪಿಸಿದ ಕಿಶೋರ್, ಜನ್ ಸುರಾಜ್‌ ಪಕ್ಷದ ಬ್ರಹ್ಮಪುರ ಅಭ್ಯರ್ಥಿ ಡಾ. ಸತ್ಯ ಪ್ರಕಾಶ್ ತಿವಾರಿ ಅವರೊಂದಿಗೆ ಧರ್ಮೇಂದ್ರ ಪ್ರಧಾನ್ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

ಪ್ರಶಾಂತ್ ಕಿಶೋರ್ ಆರೋಪಗಳ ಬಗ್ಗೆ ಬಿಜೆಪಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಎಲ್‌ಜೆಪಿಯ ಪ್ರಾಬಲ್ಯ ಹೊಂದಿರುವ ಬ್ರಹ್ಮಪುರದಲ್ಲಿ ನಮ್ಮ ಅಭ್ಯರ್ಥಿ, ಪಾಟ್ನಾದಲ್ಲಿ ಪ್ರಮುಖ ಆಸ್ಪತ್ರೆ ನಡೆಸುತ್ತಿರುವ ವೈದ್ಯ ಡಾ. ತಿವಾರಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರು. ನಂತರ ಇದ್ದಕ್ಕಿದ್ದಂತೆ ಹಿಂದೆ ಸರಿದರು. ಧರ್ಮೇಂದ್ರ ಪ್ರಧಾನ್ ಜೊತೆ ತಿವಾರಿ ಇರುವ ಫೋಟೋ ಅವರ ಮೇಲೆ ಹೇರಲಾದ ಒತ್ತಡಕ್ಕೆ ಪುರಾವೆಯಾಗಿದೆ. ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಸಚಿವರು ಎದುರಾಳಿ ಅಭ್ಯರ್ಥಿಯನ್ನು ಭೇಟಿಯಾಗುವುದು ಆಶ್ಚರ್ಯಕರ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಗೋಪಾಲ್‌ಗಂಜ್‌ನ ಬಿಜೆಪಿ ನಾಯಕರು ನಮ್ಮ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯ ರಾಜಕೀಯ ನಾಯಕ ರಘುನಾಥ್ ಪಾಂಡೆ ಅವರ ಅಳಿಯ ಡಾ. ಶಶಿ ಶೇಖರ್ ಸಿನ್ಹಾ ಅವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ. ಎರಡು ದಿನಗಳ ಹಿಂದಿನವರೆಗೂ ಸಿನ್ಹಾ ಅವರು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದರು. ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಲು ನನಗೆ ಕರೆ ಮಾಡಿದ್ದರು. ಆದರೆ, ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಇದಾಗಿ ಎರಡು ಗಂಟೆಗಳ ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು. ಫೋನ್ ಸ್ವಿಚ್ ಆಫ್ ಮಾಡಿದರು. ರಾಜ್ಯಾದ್ಯಂತ ಇತರ ಅಭ್ಯರ್ಥಿಗಳು ಇದೇ ರೀತಿಯ ಒತ್ತಡ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದಾರೆ” ಎಂದು ಕಿಶೋರ್ ವಿವರಿಸಿದ್ದಾರೆ.

“ಕುಮ್ರಾರ್‌ ಕ್ಷೇತ್ರದ ನಮ್ಮ ಅಭ್ಯರ್ಥಿ ಪ್ರೊ. ಕೆ. ಸಿ. ಸಿನ್ಹಾ ಅವರ ಮೇಲೆ ಒತ್ತಡ ಹೇರಲಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳುವಂತೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದ್ದಾರೆ. ಎರಡು ವರ್ಷಗಳ ಹಿಂದೆ ಜನ್ ಸುರಾಜ್‌ಗೆ ಸೇರಲು ಬಿಜೆಪಿಗೆ ರಾಜೀನಾಮೆ ನೀಡಿರುವ ಶಾಲಾ ಶಿಕ್ಷಕ ವಾಲ್ಮೀಕಿನಗರ ಅಭ್ಯರ್ಥಿ ಡಾ. ನಾರಾಯಣ್ ಪ್ರಸಾದ್ ಅವರ ರಾಜೀನಾಮೆಯನ್ನು ಇದುವರೆಗೆ ಅಂಗೀಕರಿಸಲಾಗಿಲ್ಲ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಸ್ಥಳೀಯ ಅಧಿಕಾರಿಗಳು ಬೆದರಿಸುತ್ತಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಕಿಶೋರ್, “ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗದಿದ್ದರೆ, ಇನ್ನು ಮತದಾರರನ್ನು ಹೇಗೆ ರಕ್ಷಿಸುತ್ತೀರಿ? ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ಈ ರೀತಿ ಬೆದರಿಕೆ ಹಾಕಿದರೆ, ಮತದಾನದ ದಿನದಂದು ಪಕ್ಷಗಳು ಮತದಾರರನ್ನು ಬೆದರಿಸುವುದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ?” ಎಂದು ಕೇಳಿದ್ದಾರೆ.

“14 ಮಂದಿ ಜನ ಸುರಾಜ್ ಅಭ್ಯರ್ಥಿಗಳು ಬೆದರಿಕೆಗಳನ್ನು ಎದುರಿಸಿದ್ದಾರೆ. ಆದರೂ 240 ಮಂದಿ ಅಭ್ಯರ್ಥಿಗಳು ದೃಢವಾಗಿ ನಿಂತಿದ್ದಾರೆ. ಅವರಿಗೆ ನಾನು ನಮಸ್ಕರಿಸುತ್ತೇನೆ. ಅವರು ನಮ್ಮ ಮೇಲೆ ಬೆದರಿಕೆ, ಒತ್ತಡ ಹಾಕಬಹುದು. ಇದಕ್ಕೆ ನಾವು ಪ್ರತ್ಯತ್ತರ ಕೊಡುತ್ತೇವೆ” ಎಂದಿದ್ದಾರೆ.

“ಬಿಜೆಪಿ ಮಹಾಮೈತ್ರಿಕೂಟದ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿಲ್ಲ, ಬದಲಾಗಿ ಜನ ಸುರಾಜ್‌ನ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿದೆ. ಏಕೆಂದರೆ ನಮ್ಮ ಅಭ್ಯರ್ಥಿಗಳು ಉತ್ತಮ ವೃತ್ತಿಪರರು, ವೈದ್ಯರು ಮತ್ತು ಉದ್ಯಮಿಗಳು. ಅವರು ಬಲ ಪ್ರಯೋಗಕ್ಕೆ ಹೆದರುವವರು ಅಲ್ಲ, ಸಭ್ಯ ಜನರಿಗೆ ಹೆದರುವವರು. ಇದು ಜನ ಸುರಾಜ್‌ನ ಭಯ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಜನರು ಮತ್ತೆ ವಲಸೆ ಹೋಗಬಾರದು. ಹಾಗಾಗಿ, ಪೂರ್ಣ ಶಕ್ತಿಯಿಂದ ಎದ್ದು ಈ ಸರ್ಕಾರವನ್ನು ಉರುಳಿಸಿ” ಎಂದು ಬಿಹಾರದ ಯುವಜನತೆಗೆ ಪ್ರಶಾಂತ್ ಕಿಶೋರ್ ಕರೆ ಕೊಟ್ಟಿದ್ದಾರೆ.

ಅಭ್ಯರ್ಥಿ ಆಯ್ಕೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಕಿಶೋರ್, ಜನ್ ಸುರಾಜ್ ಅತ್ಯಂತ ಹಿಂದುಳಿದ ಸಮುದಾಯಗಳ 54 ಮತ್ತು ಮುಸ್ಲಿಂ ಸಮುದಾಯದ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾವು ಅತ್ಯಂತ ಹಿಂದುಳಿದ ಗುಂಪುಗಳಿಗೆ 70 ಟಿಕೆಟ್‌ಗಳನ್ನು ನೀಡಲು ಉದ್ದೇಶಿಸಿದ್ದೆವು. ಆದರೆ, 54 ನೀಡಲು ಸಾಧ್ಯವಾಯಿತು. ಇಷ್ಟು ಟಿಕೆಟ್ ಇತರ ಯಾವುದೇ ಪಕ್ಷಗಳು ಈ ಸಮುದಾಯಗಳಿಗೆ ನೀಡಿಲ್ಲ. ನಾವು ಮುಸ್ಲಿಮರ ಬಗ್ಗೆ ನಾಟಕೀಯ ಒಲವು ತೋರಿಸುತ್ತಿದ್ದೇವೆ ಎನ್ನುವರಿಗೆ, ನಾವು ಕೊಟ್ಟ ಟಿಕೆಟ್ ಸೇರಿದಂತೆ ಸಮುದಾಯಕ್ಕೆ ನೀಡಿದ ಪ್ರಾಮುಖ್ಯತೆಯ ಇತರ ದಾಖಲೆಗಳು ಪ್ರತ್ಯುತ್ತರವಾಗಿದೆ. ಈಗಾಗಲೇ ಮುಸ್ಲಿಂ ಶಾಸಕರು ಇರುವ ಕ್ಷೇತ್ರಗಳನ್ನು ಹೊರತುಪಡಿಸಿ, ಸಾಧ್ಯವಾದಲ್ಲೆಲ್ಲಾ ನಾವು ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದೇವೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...