Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...