Homeಕರ್ನಾಟಕಆಳಂದ ಮತಗಳ್ಳತನ ಪ್ರಕರಣ | ತನಿಖೆ ಚುರುಕುಗೊಳಿಸಿದ ಎಸ್‌ಐಟಿ; ಮಹತ್ವದ ಮಾಹಿತಿ ಬಹಿರಂಗ

ಆಳಂದ ಮತಗಳ್ಳತನ ಪ್ರಕರಣ | ತನಿಖೆ ಚುರುಕುಗೊಳಿಸಿದ ಎಸ್‌ಐಟಿ; ಮಹತ್ವದ ಮಾಹಿತಿ ಬಹಿರಂಗ

- Advertisement -
- Advertisement -

ದೇಶದಾದ್ಯಂತ ಚರ್ಚೆಯಾಗಿದ್ದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ ‘ಮತಗಳ್ಳತನ’ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿದೆ.

ಆಳಂದ ಸೇರಿದಂತೆ ರಾಜದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿ ಸೆಪ್ಟೆಂಬರ್ 20ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.

ಕರ್ನಾಟಕ ಪೊಲೀಸರ ಅಪರಾಧ ತನಿಖಾ ವಿಭಾಗ (ಸಿಐಡಿ) ತನಿಖೆ ನಡೆಸುತ್ತಿದ್ದ ಆಳಂದ ಪ್ರಕರಣವನ್ನು ಸೆಪ್ಟೆಂಬರ್ 26ರಂದು ಎಸ್‌ಐಟಿ ವಹಿಸಿಕೊಂಡಿದೆ. ಆ ಬಳಿಕ ಹಳ್ಳ ಹಿಡಿದಿದ್ದ ತನಿಖೆ ಮತ್ತೆ ಶುರುವಾಗಿದೆ.

ಎಸ್‌ಐಟಿ ತನಿಖೆ ವಹಿಸಿಕೊಂಡ ಬಳಿಕ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದೆ ಎಂಬುವುದು ವರದಿಗಳಿಂದ ಗೊತ್ತಾಗಿದೆ.

ಆಳಂದಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವಂತೆ ಚುನಾವಣಾ ಆಯೋಗಕ್ಕೆ ನಕಲಿ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ 80 ರೂಪಾಯಿಯನ್ನು ಡೇಟಾ ಸೆಂಟರ್ ಅಪರೇಟರ್‌ಗೆ ಪಾವತಿಸಲಾಗಿದೆ ಎಂಬುವುದು ಎಸ್‌ಐಟಿ ತನಿಖೆಯಿಂದ ಬಯಲಾಗಿದೆ.

ಡಿಸೆಂಬರ್ 2022ರಿಂದ ಫೆಬ್ರವರಿ 2023ರವರೆಗೆ ಕ್ಷೇತ್ರದ ಒಟ್ಟು 6,018 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲು ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದಕ್ಕಾಗಿ ಒಟ್ಟು 4.8 ಲಕ್ಷ ರೂ. ಪಾವತಿಸಲಾಗಿದೆ ಎಂದು ಎಸ್‌ಐಟಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಳಂದ ಮತಗಳ್ಳತನ ಪ್ರಕರಣ 2023ರ ವಿಧಾನಸಭಾ ಚುನಾವಣೆಗೆ ಮುನ್ನ ನಕಲಿ ಫಾರ್ಮ್ 7ರ ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಡೆಸಿದ್ದ ಪಿತೂರಿಗೆ ಸಂಬಂಧಿಸಿದೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸಲು ಅಗತ್ಯವಾದ ನಿರ್ಣಾಯಕ ದತ್ತಾಂಶಗಳನ್ನು ಚುನಾವಣಾ ಆಯೋಗ ಸಿಐಡಿ ಜೊತೆ ಹಂಚಿಕೊಳ್ಳದ ಕಾರಣ ಪ್ರಕರಣ ಬಹುತೇಕ ಹಳ್ಳಹಿಡಿದಂತೆ ಕಾಣುತ್ತಿದೆ ಎಂದು ದಿ ಹಿಂದೂ ಪತ್ರಿಕೆ ಸೆಪ್ಟೆಂಬರ್ 7ರಂದು ವಿಸ್ತೃತ ವರದಿ ಪ್ರಕಟಿಸಿತ್ತು.

ಸೆಪ್ಟೆಂಬರ್ 18ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ ಆಳಂದ ಪ್ರಕರಣದ ದಾಖಲೆ ಬಿಡುಗಡೆ ಮಾಡಿದ್ದರು.

ಪ್ರಸ್ತುತ ತನಿಖೆ ಕೈಗೆತ್ತಿಕೊಂಡಿರುವ ಎಸ್‌ಐಟಿ, ಕಳೆದ ವಾರ 2023ರಲ್ಲಿ ಕಾಂಗ್ರೆಸ್‌ನ ಬಿ. ಆರ್ ಪಾಟೀಲ್ ವಿರುದ್ಧ ಸೋತಿದ್ದ ಬಿಜೆಪಿ ನಾಯಕ ಸುಭಾಷ್ ಗುತ್ತೇದಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿದೆ ಎಂದು ವರದಿಯಾಗಿದೆ.

ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಕಲಬುರಗಿಯ ಕೇಂದ್ರ ಸ್ಥಾನದಲ್ಲಿರುವ ಒಂದು ಡೇಟಾ ಸೆಂಟರ್‌ನಿಂದ ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಸ್ಥಳೀಯ ನಿವಾಸಿ ಮೊಹಮ್ಮದ್ ಅಶ್ಫಾಕ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಸೂಚನೆಗಳು ಎಸ್‌ಐಟಿ ತನಿಖೆಯಲ್ಲಿ ಕಂಡುಬಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

2023ರಲ್ಲಿ ಅಶ್ಫಾಕ್ ಅನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಆಗ ಆತ ತಾನು ನಿರಪರಾಧಿ ಎಂದು ಹೇಳಿಕೊಂಡು ತನ್ನ ಬಳಿ ಇರುವ ಎಲೆಕ್ಟ್ರಾನಿಕ್ ಸಾಧನಗಳನ್ನು ಒಪ್ಪಿಸುವುದಾಗಿ ಭರವಸೆ ನೀಡಿದ್ದ. ಪೊಲೀಸರಿಂದ ಬಿಡುಗಡೆಯಾದ ನಂತರ, ಆತ ದುಬೈಗೆ ತೆರಳಿದ್ದಾನೆ ಎಂದು ವರದಿ ತಿಳಿಸಿದೆ.

ಎಸ್‌ಐಟಿ ತಂಡವು ಮೊಹಮ್ಮದ್ ಅಶ್ಫಾಕ್‌ನಿಂದ ವಶಪಡಿಸಿಕೊಂಡ ಇಂಟರ್‌ನೆಟ್ ಪ್ರೊಟೊಕಾಲ್ ಡೀಟೇಲ್ ರೆಕಾರ್ಡ್‌ಗಳು ಮತ್ತು ಸಾಧನಗಳನ್ನು ಪರಿಶೀಲಿಸಿದ ನಂತರ, ಆತನು ತನ್ನ ಸಹಾಯಕ ಮೊಹಮ್ಮದ್ ಅಕ್ರಮ್ ಮತ್ತು ಇತರ ಮೂವರು ವ್ಯಕ್ತಿಗಳೊಂದಿಗೆ ಇಂಟರ್‌ನೆಟ್ ಕರೆಗಳ ಮೂಲಕ ಸಂಪರ್ಕದಲ್ಲಿದ್ದನೆಂದು ಕಂಡುಹಿಡಿದಿದೆ.

ಕಳೆದ ವಾರ ಎಸ್‌ಐಟಿ ಈ ನಾಲ್ವರಿಗೆ ಸಂಬಂಧಿಸಿದ ಆಸ್ತಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು ಮತ್ತು ಕಲಬುರಗಿ ಪ್ರದೇಶದಲ್ಲಿ ಮತದಾರರ ಪಟ್ಟಿಯನ್ನು ತಿರುಚಲು ಡೇಟಾ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದದ್ದಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಹಾಗೂ ಪ್ರತಿ ಮತದಾರರ ಹೆಸರು ತೆಗೆದುಹಾಕಲು 80 ರೂ. ಪಾವತಿಸಿರುವ ವಿವರಗಳನ್ನು ಕಂಡುಕೊಂಡಿದೆ ಎಂದು ವರದಿ ಹೇಳಿದೆ.

ಮೊಹಮ್ಮದ್ ಅಕ್ರಮ್ ಮತ್ತು ಅಶ್ಫಾಕ್ ಡೇಟಾ ಸೆಂಟರ್‌ನ ಜವಾಬ್ದಾರಿಯನ್ನು ಹೊತ್ತಿದ್ದರು. ಇತರರು ಡೇಟಾ ಎಂಟ್ರಿ ಮಾಡುವ ಕೆಲಸಗಾರರಾಗಿದ್ದರು. ತನಿಖೆಯಲ್ಲಿ ಒಂದು ಲ್ಯಾಪ್‌ಟಾಪ್ ಕಂಡುಬಂದಿದೆ, ಅದನ್ನು ಈ ಕಾನೂನುಬಾಹಿರ ಅರ್ಜಿಗಳನ್ನು ತಯಾರಿಸಲು ಬಳಸಲಾಗಿತ್ತು ಎನ್ನಲಾಗಿದೆ.

ಈ ಸಾಕ್ಷ್ಯಗಳನ್ನು ಕಂಡುಕೊಂಡ ನಂತರ, ಎಸ್‌ಐಟಿ ತಂಡವು ಅಕ್ಟೋಬರ್ 17 ರಂದು ಬಿಜೆಪಿ ನಾಯಕ ಗುತ್ತೇದಾರ್, ಅವರ ಮಕ್ಕಳಾದ ಹರ್ಷನಂದ, ಸಂತೋಷ್ ಮತ್ತು ಅವರ ಚಾರ್ಟರ್ಡ್ ಅಕೌಂಟೆಂಟ್ ಮಲ್ಲಿಕಾರ್ಜುನ ಮಹಾಂತಗೋಳ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ವೇಳೆ ಏಳಕ್ಕೂ ಹೆಚ್ಚು ಲ್ಯಾಪ್‌ಟಾಪ್‌ಗಳು ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ, ಈ ಕೆಲಸಕ್ಕೆ ಕೊಟ್ಟ ಹಣ ಎಲ್ಲಿಂದ ಬಂದಿದೆ ಎಂದು ತನಿಖೆ ಕೈಗೊಂಡಿದೆ.

ಆಳಂದ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಅಳಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ನಕಲಿ ಅರ್ಜಿಗಳನ್ನು ಸಲ್ಲಿಸಲು ಒಟ್ಟು 75 ಮೊಬೈಲ್ ನಂಬರ್‌ಗಳನ್ನು ಬಳಸಲಾಗಿತ್ತು. ಈ ನಂಬರ್‌ಗಳು ಕೋಳಿ ಫಾರ್ಮ್ ಕೆಲಸಗಾರರಿಂದ ಹಿಡಿದು ಪೊಲೀಸರ ಸಂಬಂಧಿಕರವರೆಗಿನ ವಿವಿಧ ವ್ಯಕ್ತಿಗಳಿಗೆ ಸೇರಿವೆ ಎಂದು ಕಂಡುಬಂದಿದೆ.

ಯಾವ ರೀತಿಯಲ್ಲಿ ಚುನಾವಣಾ ಆಯೋಗದ ಪೋರ್ಟಲ್‌ಗೆ ನಕಲಿ ಗುರುತಿನ ಮಾಹಿತಿಯನ್ನು ಬಳಸಿ ಪ್ರವೇಶ ಪಡೆಯಲಾಯಿತು ಮತ್ತು ಮತದಾರರ ಹೆಸರು ಅಳಿಸಲು ಅರ್ಜಿಗಳನ್ನು ಸಲ್ಲಿಸಲಾಯಿತು ಎಂಬುವುದನ್ನು ಎಸ್‌ಐಟಿ ಇನ್ನೂ ಪತ್ತೆ ಮಾಡಬೇಕಿದೆ. ಚುನಾವಣಾ ಆಯೋಗದ ಪೋರ್ಟಲ್‌ಗೆ ಪ್ರವೇಶಿಸಲು ಯಾರ ಗುರುತಿನ ಮಾಹಿತಿಯನ್ನು ಬಳಸಲಾಯಿತೋ ಅಥವಾ ಯಾರ ಹೆಸರಿನಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಯಿತೋ, ಆ ಎರಡೂ ಗುಂಪಿನ ಜನರಿಗೆ ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಆಳಂದ ವಿಧಾನಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಬಿಜೆಪಿಯ ಸುಭಾಷ್ ಗುತ್ತೇದಾರ್, ಮತದಾರರ ಹೆಸರು ಅಳಿಸುವಿಕೆ ಪ್ರಯತ್ನಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. 2023ರಲ್ಲಿ ಗೆದ್ದ ಕಾಂಗ್ರೆಸ್‌ನ ಬಿ.ಆರ್ ಪಾಟೀಲ್ ಅವರು ವೈಯಕ್ತಿಕ ಲಾಭಕ್ಕಾಗಿ ಈ ಆರೋಪಗಳನ್ನು ಮಾಡುತ್ತಿದ್ದಾರೆ. ಪಾಟೀಲ್ ಸಚಿವ ಸ್ಥಾನ ಬಯಸುತ್ತಿದ್ದಾರೆ. ಇದಕ್ಕಾಗಿ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗುತ್ತೇದಾರ್ ಹೇಳಿದ್ದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

‘ಸತೀಶ್ ಜಾರಕಿಹೊಳಿ ಅವರಿಗೆ ಸಿದ್ದರಾಮಯ್ಯ ‘ಮಾರ್ಗದರ್ಶಕ’ರಾಗಬೇಕು..’; ಕುತೂಹಲ ಮೂಡಿಸಿದ ಯತೀಂದ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....