HomeUncategorizedಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ: ಕಲಬುರಗಿಯಲ್ಲಿಂದು ಶಾಂತಿ ಸಭೆ, ಹಲವು ಮುಖಂಡರಿಗೆ ಆಹ್ವಾನ.

ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ: ಕಲಬುರಗಿಯಲ್ಲಿಂದು ಶಾಂತಿ ಸಭೆ, ಹಲವು ಮುಖಂಡರಿಗೆ ಆಹ್ವಾನ.

- Advertisement -
- Advertisement -

ಶುಕ್ರವಾರ ಕರ್ನಾಟಕ ಹೈಕೋರ್ಟ್ ನೀಡಿದ ನಿರ್ದೇಶನದಂತೆ ಇಂದು (ನವೆಂಬರ್ 2) ಚಿತ್ತಾಪುರದಲ್ಲಿ ತಮ್ಮ ಮಾರ್ಗ ಮೆರವಣಿಗೆ ನಡೆಸಲು ಅನುಮತಿ ಕೋರಿರುವ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಶಾಂತಿ ಸಭೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ಸ್, ಗೊಂಡ ಕುರುಬ ಎಸ್‌ಟಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ 10 ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ.

ಸಭೆಯು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಪ್ರಾರಂಭವಾಗಲಿದೆ. ಪ್ರತಿ ಸಂಘಟನೆಯಿಂದ ಗರಿಷ್ಠ ಮೂವರು ಸದಸ್ಯರಿಗೆ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಎಲ್ಲಾ ಗುಂಪುಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.

ಆರೆಸ್ಸೆಸ್‌ 100 ವರ್ಷದ ತುಂಬಿದ ಹಿನ್ನೆಲೆಯಲ್ಲಿ ದೊಣ್ಣೆ ಹಿಡಿದು ರಾಜ್ಯದ ಹಲವು ಭಾಗಗಳಲ್ಲಿ ಸಾರ್ವಜನಿಕವಾಗಿ ಪಥಸಂಚಲನ ಮಾಡಿವೆ. ಇದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದೆ ಅಲ್ಲದೆ ಆರೆಸ್ಸೆಸ್‌ ಸಾರ್ವಜನಿಕ ಸ್ಥಳಗಳಲ್ಲಿ ಶಾಖೆಗಳನ್ನು ನಡೆಸುತ್ತಿರುವುದಕ್ಕೆ ಹಾಗೂ ಆ ರೀತಿಯ ಚಟುವಟಿಕೆ ನಡೆಸಲು ನಿರ್ಭಂದಿಸಬೇಕು ಎಂದು ಕೋರಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವರಾದ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಸರ್ಕಾರದ ಅನುಮತಿ ಖಡ್ಡಾಯ ಎಂದು ಸರ್ಕಾರ ಇತ್ತೀಚೆಗೆ ಆದೇಶ ಹೊಡಿಸಿತ್ತು.

ಪ್ರಿಯಾಂಕ್‌ ಖರ್ಗೆಯವರ ಈ ಪತ್ರದ ವಿರುದ್ದ ದೇಶದ ನಾನಾ ಭಾಗಗಳಿಂದ ಬೆದರಿಕೆ ಕರೆಗಳು ಬಂದಿದ್ದವು. ಪ್ರಿಯಾಂಕ್‌ ಖರ್ಗೆ ಆರೆಸ್ಸೆಸ್‌ ಸಂವಿಧಾನ ವಿರೋಧಿ ಎಂಬುದನ್ನು ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಆರೆಸ್ಸೆಸ್‌ ನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರಿಯಾಂಕ್‌ ಖರ್ಗೆಯವರ ಈ ನಿಲುವನ್ನು ವಿರೋಧಿಸಿ ಅವರ ಕ್ಷೇತ್ರವಾದ ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಆರೆಸ್ಸೆಸ್‌ ಮುಂದಾಗಿತ್ತು.

ಪ್ರಿಯಾಂಕ್‌ ಖರ್ಗೆ ನಿಲುವನ್ನು ಬೆಂಬಲಿಸಿ ಭೀಮ್‌ ಆರ್ಮಿ, ದಲಿತ ಸಂಘಟನೆಗಳು ಹಾಗೂ ಇನ್ನಿತರೆ ಸಂಘಟನೆಗಳು ಆರೆಸ್ಸೆಸ್‌ ಪಥಸಂಚಲನ ನಡೆಸಲು ಉದ್ದೇಶಿಸಿರುವ ಮಾರ್ಗದಲ್ಲೇ ತಮಗೂ ಮೆರವಣಿಗೆಗೆ ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದವು. ಅಲ್ಲದೇ ತಮಗೂ ದೊಣ್ಣೆ ಸೇರಿದಂತೆ ಪರವಾನಗಿ ಪಡೆದ ಬಂದೂಕುಗಳನ್ನೂ ಮೆರವಣಿಗೆಯಲ್ಲಿ ಬಳಸಲು ಅನುಮತಿ ಕೇಳಿದ್ದವು.

ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ತಾಲೂಕು ಆಡಳಿತವು ಪಥಸಂಚಲದ ಆಯೋಜಕರಿಗೆ ಹಲವು ಮಾಹಿತಿ ಕೋರಿ ಅನುಮತಿಯನ್ನು ನಿರಾಕರಿಸಲಾಗಿತ್ತು. ಆರ್‌ಎಸ್‌ಎಸ್ ನಾಯಕ ಅಶೋಕ್ ಪಾಟೀಲ್ ಅವರು ತಹಶೀಲ್ದಾರ್ ಅವರ ನಿರ್ಧಾರವನ್ನು ಪ್ರಶ್ನಿಸಿ ಕಲಬುರಗಿಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಅಕ್ಟೋಬರ್ 19 ರಂದು ವಿಶೇಷ ಸಭೆಯಲ್ಲಿ ಈ ವಿಷಯವನ್ನು ಆಲಿಸಿದ ನ್ಯಾಯಾಲಯವು, ಅಕ್ಟೋಬರ್‌ 28ಕ್ಕೆ (ಇಂದು) ಶಾಂತಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...