Homeಕರ್ನಾಟಕಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

- Advertisement -
- Advertisement -

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ವಾಗ್ವಾದದಲ್ಲಿ ಕೊನೆಯಾಗಿದೆ. 

ಆರ್.ಎಸ್.ಎಸ್ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನ ನಡೆಸುವಂತೆ ಅನುಮತಿ ಪಡೆಯಲು ಸಂಘಟನೆಗೆ ಅವಕಾಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಸೇರಿದಂತೆ ಹಲವು ಸಂಘಟನೆಗಳು ಅದೇ ದಿನ ಅಂದರೆ ನವೆಂಬರ್ 2ರಂದು ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ ಅಕ್ಟೋಬರ್‌ 21ರ ಮಂಗಳವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. 

“ಆರೆಸ್ಸೆಸ್‌ನ ಕಾರ್ಯಗಳು ಮತ್ತು ಆಲೋಚನೆಗಳು ಯುವಜನರು ಹಾಗೂ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದಲಿತ ಪ್ಯಾಂಥರ್ಸ್, ಒಂದು ಕೈಯಲ್ಲಿ ಸಂವಿಧಾನದ ಪೀಠಿಕೆ, ಇನ್ನೊಂದು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ರ‍್ಯಾಲಿ ನಡೆಸಲು ಅನುಮತಿ ಕೋರಿತ್ತು. ಇದರ ನಡುವೆ ಭೀಮ್ ಆರ್ಮಿ ಕೂಡ ತ್ರಿವರ್ಣ ಧ್ವಜ, ಬೌದ್ಧ ಧರ್ಮದ ಪಂಚಶೀಲ ಧ್ವಜ ಮತ್ತು ಬಿದಿರಿನ ಕೋಲು ಹಿಡಿದು ರ‍್ಯಾಲಿ ನಡೆಸಲು ಅನುಮತಿ ಕೇಳಿತ್ತು. ಇದಾದ ನಂತರ ಈವರೆಗೆ ಸುಮಾರು 12 ಸಂಘಟನೆಗಳು ನವೆಂಬರ್‌ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. 

ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ. “ಈ ವಿಷಯವನ್ನು ಹೆಚ್ಚು ದಿನ ಎಳೆಯುವುದು ಒಳಿತಲ್ಲ, ಆದಷ್ಟು ಬೇಗ ಇದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ,” ಎಂದು ಎರಡೂ ಕಡೆಯವರಿಗೆ ಮೌಖಿಕವಾಗಿ ಸಲಹೆ ನೀಡಿತ್ತು.

ಹೈಕೋರ್ಟ್ ಸೂಚನೆಯಂತೆ ಶಾಂತಿ ಸಭೆ ನೇತೃತ್ವ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸೇಡಂ ಸಹಾಯ ಆಯುಕ್ತರು, ಚಿತ್ತಾಪೂರ ತಹಸೀಲ್ದಾರ, ಪುರಸಭೆಯ ಮುಖ್ಯಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡಿರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್.ಡಿ, ಶಹಾಬಾದ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು, ಚಿತ್ತಾಪೂರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ಎಲ್ಲಾ ಸಂಘಟನೆಗಳಿ 10 ನಿಮಿಷ ಮಾತನಾಡುವ ಅವಕಾಶ ನೀಡಲಾಗಿತ್ತು. ಆರೆಸ್ಸೆಸ್ ಸಂಘಟಕರು ನ್ಯಾಯಾಲಯ ನೀಡುವ ದಿನಾಂಕಕ್ಕೆ ಪಥಸಂಚಲನ ಮಾಡುವುದಾಗಿ ತಿಳಿಸಿದರು.

ಇದರಿಂದಾಗಿ ದಲಿತ ಸಂಘಟನೆಗಳು ಹಾಗೂ ಆರ್.ಎಸ್.ಎಸ್ ಸಂಘಟನೆಗಳ ನಡುವೆ ವಾಗ್ವಾದ ಏರ್ಪಟ್ಟಿದ್ದು, ಶಾಂತಿ ಸಭೆಯಲ್ಲಿ ಒಮ್ಮತದ ಒಪ್ಪಂದ ಸಾಧ್ಯವಾಗದೆ ವಾಗ್ವಾದದಲ್ಲಿ ಸಭೆ ಮುಕ್ತಾಯಗೊಂಡಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...