Homeಮುಖಪುಟಪರೇಶ್ ರಾವಲ್ ಅವರ ‘ದಿ ತಾಜ್ ಸ್ಟೋರಿ’ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಪರೇಶ್ ರಾವಲ್ ಅವರ ‘ದಿ ತಾಜ್ ಸ್ಟೋರಿ’ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

- Advertisement -
- Advertisement -

ಪರೇಶ್ ರಾವಲ್ ಅವರ ಮುಂಬರುವ ಚಿತ್ರ ‘ದಿ ತಾಜ್ ಸ್ಟೋರಿ’ ಕೋಮು ಸಾಮರಸ್ಯವನ್ನು ಹಾಳು ಮಾಡುತ್ತದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಈಗಾಗಲೇ ವಿವಾದಾತ್ಮಕ ಪೋಸ್ಟರ್ ಬಿಡುಗಡೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ‘ದಿ ತಾಜ್ ಸ್ಟೋರಿ’ ಚಿತ್ರದ ವಿರುದ್ಧ ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸಿದೆ ಮತ್ತು ಕೋಮು ಸಾಮರಸ್ಯವನ್ನು ಕದಡಬಹುದು ಎಂದು ಆರೋಪಿಸಿ, ಅದರ ಬಿಡುಗಡೆಯ ವಿರುದ್ಧ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲಾಗಿದೆ.

ವಕೀಲ ಶಕೀಲ್ ಅಬ್ಬಾಸ್ ಸಲ್ಲಿಸಿರುವ ಅರ್ಜಿಯಲ್ಲಿ, ಅಕ್ಟೋಬರ್ 31 ರಂದು ರಾಷ್ಟ್ರವ್ಯಾಪಿ ಬಿಡುಗಡೆಯಾಗಲಿರುವ ಈ ಚಿತ್ರವು “ಸಂಪೂರ್ಣವಾಗಿ ಕಲ್ಪಿತ ಸಂಗತಿಗಳನ್ನು ಆಧರಿಸಿದೆ” ಮತ್ತು “ಭಾರತದ ವಿವಿಧ ಸಮುದಾಯಗಳ ನಡುವೆ ಕೋಮು ಗಲಭೆಯನ್ನು ಸೃಷ್ಟಿಸುವ ಒಂದು ಹೆಜ್ಜೆ” ಎಂದು ವಾದಿಸಲಾಗಿದೆ. 

“ಚಿತ್ರದ ಟೀಸರ್ ಮತ್ತು ಪ್ರಚಾರದ ಪೋಸ್ಟರ್‌ಗಳು ತಾಜ್ ಮಹಲ್ ಗುಮ್ಮಟವನ್ನು ಎತ್ತಿ ಅದರಿಂದ ಹೊರಹೊಮ್ಮುವ ಶಿವನ ಆಕೃತಿಯನ್ನು ಬಹಿರಂಗಪಡಿಸುವ ಚಿತ್ರಣವನ್ನು ತೋರಿಸುತ್ತವೆ. ಈ ಅಂಶಗಳು ಕೋಮು ಸಾಮರಸ್ಯ ಮತ್ತು ಐತಿಹಾಸಿಕ ಹಕ್ಕುಗಳ ಸತ್ಯಾಸತ್ಯತೆಯ ಬಗ್ಗೆ ಸಾಕಷ್ಟು ಸಾರ್ವಜನಿಕ ಚರ್ಚೆ ಮತ್ತು ಕಳವಳವನ್ನು ಹುಟ್ಟುಹಾಕಿವೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅರ್ಜಿದಾರರು ಭಾರತ ಒಕ್ಕೂಟ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC), ಚಿತ್ರದ ನಿರ್ಮಾಪಕರು, ಸ್ವರ್ಣಿಮ್ ಗ್ಲೋಬಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ನಿರ್ಮಾಪಕ ಸಿಎ ಸುರೇಶ್ ಝಾ, ನಿರ್ದೇಶಕ ತುಷಾರ್ ಅಮರೀಶ್ ಗೋಯೆಲ್, ಬರಹಗಾರ ಸೌರಭ್ ಎಂ ಪಾಂಡೆ, ಜೀ ಮ್ಯೂಸಿಕ್ ಕಂಪನಿ ಮತ್ತು ನಟ ಪರೇಶ್ ರಾವಲ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

“ಪ್ರತಿವಾದಿಗಳು ತಾಜ್ ಮಹಲ್ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ನಿಖರವಾದ ಇತಿಹಾಸವನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಆದಾಗ್ಯೂ, ಸಿಬಿಎಫ್‌ಸಿ ಮತ್ತು ಇತರ ಅಧಿಕಾರಿಗಳು ಸದರಿ ಚಿತ್ರದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು  ಆರೋಪಿಸಲಾಗಿದೆ.

ಜೊತೆಗೆ ಈ ಚಿತ್ರವು ‘ಊಹಾತ್ಮಕ ಸಿದ್ಧಾಂತಗಳನ್ನು ಉತ್ತೇಜಿಸುತ್ತದೆ’ ಎಂದು ತಿಳಿಸಿದ್ದಾರೆ. ಅರ್ಜಿದಾರರ ಪ್ರಕಾರ ಈ ಚಿತ್ರವು “ತಾಜ್ ಮಹಲ್ ಮೂಲದ ಬಗ್ಗೆ ಸಾಂಪ್ರದಾಯಿಕ ನಿರೂಪಣೆಯನ್ನು ಪ್ರಶ್ನಿಸುವ ಉದ್ದೇಶವನ್ನು ಹೊಂದಿದೆ” ಮತ್ತು ದಿವಂಗತ ಇತಿಹಾಸಕಾರ ಪಿ.ಎನ್. ಓಕ್ ಅವರೊಂದಿಗೆ ಸಂಬಂಧಿಸಿದ “ಊಹಾತ್ಮಕ ಅಥವಾ ಸುಳ್ಳು ಸಿದ್ಧಾಂತಗಳನ್ನು” ಉತ್ತೇಜಿಸುತ್ತದೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...