Homeಚಳವಳಿಜಾಮಿಯಾ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಹಾರ್ವರ್ಡ್‌ ವಿವಿ ವಿದ್ಯಾರ್ಥಿಗಳು..

ಜಾಮಿಯಾ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಹಾರ್ವರ್ಡ್‌ ವಿವಿ ವಿದ್ಯಾರ್ಥಿಗಳು..

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಹಲ್ಲೆಯ ಕ್ರಮವನ್ನು “ಪ್ರತಿಭಟನಾಕಾರರನ್ನು ಹಿಂಸಾತ್ಮಕವಾಗಿ ನಿಗ್ರಹಿಸುವುದು” ಎಂದು ಕಳವಳ ವ್ಯಕ್ತಪಡಿಸಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು ಖಂಡಿಸಿರುವ
ಹಾರ್ವರ್ಡ್ ವಿದ್ಯಾರ್ಥಿಗಳು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಮತ್ತು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿಗಳೊಂದಿಗೆ ‍ನಾವಿದ್ದೇವೆ ಎಂದು ಸಾರಿದ್ದಾರೆ. ಅವರು “ಪ್ರತಿಭಟನೆ ಮತ್ತು ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದಲ್ಲಿ ಅಂತರ್ಗತವಾಗಿದೆ” ಎಂದು ಒತ್ತಿ ಹೇಳಿದ್ದಾರೆ.

“ಪ್ರತಿಭಟನೆಗಳು ಅನಾನುಕೂಲ ಮತ್ತು ಹಾನಿಯನ್ನುಂಟುಮಾಡುತ್ತವೆ. ಆದರೆ ಅವು ನಮ್ಮ ರಾಷ್ಟ್ರದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿಕೊಳ್ಳುತ್ತವೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ಪ್ರತಿಭಟನಾಕಾರರನ್ನು ಪೊಲೀಸರು ಹಿಂಸಾತ್ಮಕವಾಗಿ ನಿಗ್ರಹಿಸುವುದು, ಶಾಂತಿಯುತ ಭಿನ್ನಾಭಿಪ್ರಾಯಕ್ಕೆ ಪ್ರತಿಕ್ರಿಯೆಯಾಗಿ ಪೊಲೀಸ್ ಪಡೆಗಳು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ಗಳಿಗೆ ನುಗ್ಗಿ ಟಿಯರ್‌ ಗ್ಯಾಸ್‌, ಲಾಠಿ ಚಾರ್ಜ್‌ ಮತ್ತು ದೈಹಿಕ ಹಲ್ಲೆ ಮಾಡುವುದು, ಅಲ್ಲಿನ ಇಂಟರ್ನೆಟ್ ದಿಗ್ಬಂಧನಗಳು ಇವೆಲ್ಲವೂ ತೀವ್ರ ಖಂಡನೀಯ” ಎಂದು ಹಾರ್ವರ್ಡ್ ವಿದ್ಯಾರ್ಥಿಗಳು ಹೇಳಿದ್ದಾರೆ.

“ಮಹಿಳಾ ಪ್ರತಿಭಟನಾಕಾರರ ಮೇಲೆ ಪೊಲೀಸ್ ದಾಳಿ ಸೇರಿದಂತೆ ಪ್ರತಿಭಟನಾಕಾರರ ಮನೋಭಾವವನ್ನು ಮುರಿಯುವ ಉದ್ದೇಶದಿಂದ ಪೊಲೀಸ್ ಕ್ರೌರ್ಯ ನಡೆದಿದೆ. ಇದರಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ವಿದ್ಯಾರ್ಥಿಗಳ ಪರವಾಗಿ ಕಾಳಜಿ ವಹಿಸುತ್ತೇವೆ” ಎಂದು ಹಾರ್ವರ್ಡ್ ವಿದ್ಯಾರ್ಥಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...