Homeಕರ್ನಾಟಕಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: "ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ".

ಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: “ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ”.

- Advertisement -
- Advertisement -
ಇತ್ತೀಚೆಗಷ್ಟೆ ಕನೇರಿಯ ಕಾಡಸಿದ್ದೇಶ್ವರ ಸ್ವಾಮಿ ಮಾಡಿದ್ದ ದ್ವೇಷ ಭಾಷಣ ಕುರಿತು ಸಮಾಜದಲ್ಲಿ ತೀರ್ವ ವಿಮರ್ಶೆ ವ್ಯಕ್ತವಾಗಿತ್ತು. ಇದರ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳತ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕಾಡಸಿದ್ದೇಶ್ವರ ಸ್ವಾಮಿಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿ ಅರ್ಜಿಯನ್ನು ವಜಾಗೊಳಿಸಿದೆ.

ಲಿಂಗಾಯತ ಮಠಾಧಿಪತಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಬಳಸಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದ್ದಾರೆ ಎಂಬ ಕಾರಣಕ್ಕೆ ವಿಜಯಪುರ ಜಿಲ್ಲಾಧಿಕಾರಿ ಅವರು ಸ್ವಾಮೀಜಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು.  ಎಂಬ ಆರೋಪದ ಕಾರಣ ಸ್ವಾಮೀಜಿಯವರು ಡಿ. 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸ ಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್‌ ಮಿತ್ತಲ್‌ ಹಾಗೂ ಪ್ರಸನ್ನ ಬಿ.ವರಾಳೆ ಪೀಠವು ಸ್ವಾಮೀಜಿ ಅವರನ್ನು ತರಾಟೆಗೆ ತೆಗೆದುಕೊಂಡಿತು.

‘ನೀವು ಜಿಲ್ಲೆಯಿಂದ ದೂರವಿದ್ದು ಆಧ್ಯಾತ್ಮಿಕ ವಿಷಯಗಳಲ್ಲಿ ತೊಡಗಿಸಿ ಕೊಳ್ಳಲು ಇದು ಒಂದು ಅವಕಾಶ. ನೀವು ಬೇರೆ ಯಾವುದಾದರೂ ಮಠದಲ್ಲಿ ಕುಳಿತು ಧ್ಯಾನ ಮಾಡಬೇಕು. ಈ ನಿರ್ದಿಷ್ಟ ಜಿಲ್ಲೆಗೆ ಹೋಗಲೇಬೇಕೆಂದು ನೀವೇಕೆ ಜಿಲ್ಲಾಡಳಿತಕಕ್ಕೆ ಒತ್ತಡ ಹೇರುತ್ತಿದ್ದೀರಿ’ ಎಂದು ಪೀಠವು ಸ್ವಾಮೀಜಿ ಅವರನ್ನು ಪ್ರಶ್ನಿಸಿತು. ‌

‘ಕೀಳು ಮಟ್ಟದ ಹೇಳಿಕೆ ನೀಡಿರುವ ನೀವು ಉತ್ತಮ ನಾಗರಿಕರಲ್ಲ’ ಎಂದು ಕನೇರಿ ಸ್ವಾಮಿಗೆ ಬಹಳ ಕಟುವಾಗಿ ಹೇಳಿತು.

‘ನೀವು ಧಾರ್ಮಿಕ ನಾಯಕ. ಮಾತನಾಡುವಾಗ ಬಹಳ ಜಾಗರೂಕರಾಗಿರ ಬೇಕು. ನಿಮ್ಮ ಇಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಇನ್ನು ಮುಂದೆ ಕೋಮು ಭಾವನೆ ಕೆರಳಿಸುವ ಯಾವುದೇ ಹೇಳಿಕೆ ನೀಡಬೇಡಿ. ಹೈಕೋರ್ಟ್‌ ಆದೇಶದಲ್ಲಿ ತಪ್ಪೇನಿದೆ’ ಎಂದು ಪೀಠ ಪ್ರಶ್ನಿಸಿತು.

‘ಅವಹೇಳನಕಾರಿ ಭಾಷೆ ಬಳಸಿರುವುದು ವಾಕ್ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ. ನೀವು ಹೀಗೆಯೇ ವರ್ತಿಸುತ್ತಿದ್ದರೆ ಎಲ್ಲ ಜಿಲ್ಲಾಧಿಕಾರಿಗಳು ಇಂತಹ ಆದೇಶಗಳನ್ನು ಹೊರಡಿಸುತ್ತಾರೆ’ ಎಂದು ಪೀಠ ಸೂಚ್ಯವಾಗಿ ಹೇಳಿತು. ‘ಪ್ರಕರಣದ ವಾಸ್ತವಾಂಶ ಹಾಗೂ ಸನ್ನಿವೇಶ ಗಳನ್ನು ಗಮನಿಸಿದರೆ, ಹೈಕೋರ್ಟ್‌ ಆದೇಶವು ಸರಿಯಾಗಿದೆ ಎಂದು ಪೀಠವು ಹೇಳಿದೆ . ಡಿಸೆಂಬರ್‌ 14ರ ನಂತರ ಸ್ವಾಮೀಜಿ ಅವರು ಜಿಲ್ಲೆ ಪ್ರವೇಶಿಸ ಬಹುದು’ ಎಂದು ಪೀಠ ಸ್ಪಷ್ಟಪಡಿಸಿತು.

‘ನಿಮ್ಮನ್ನು ಗಡಿಪಾರು ಮಾಡಲೂ ಜಿಲ್ಲಾಡಳಿತಕ್ಕೆ ಅಧಿಕಾರ ಇದೆ’- ಸುಪ್ರೀಂ

ಸ್ವಾಮೀಜಿ ಅವರನ್ನು ಎಲ್ಲ ಜಿಲ್ಲೆಗಳಿಂದ ಗಡಿಪಾರು ಮಾಡಲು ರಾಜ್ಯದ ಅಧಿಕಾರಿಗಳು ಬಯಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ‘ನಿಮ್ಮ ಕೃತ್ಯಗಳು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದರೆ, ಜಿಲ್ಲಾಧಿಕಾರಿ ಅಥವಾ ಆಯುಕ್ತರಿಗೆ ನಿಮ್ಮನ್ನು ಗಡಿಪಾರು ಮಾಡಲು ಅಧಿಕಾರವಿದೆ’ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿತು. ‘ನೀವು ಜಿಲ್ಲೆಯನ್ನು ಪ್ರವೇಶಿಸಬೇಕು ಎಂದು ಏಕೆ ಒತ್ತಾಯಿ ಸುತ್ತೀರಿ? ಭಾರತವು ತುಂಬಾ ದೊಡ್ಡ ದೇಶ. ನೀವು ಬೇರೆಡೆಗೆ ಹೋಗಿ’ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಘವೇಂದ್ರ ಶ್ರೀವಾಸ್ತವ ಅವರನ್ನು ಪೀಠ ಕೇಳಿತು.

ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ ಮತ್ತು ಅಮನ್ ಪನ್ವಾರ್ ಹಾಜರಾದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...