Homeಕರ್ನಾಟಕ'ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ..'; ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ

‘ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ..’; ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ತಮ್ಮ ವಿರುದ್ಧ ಎಸ್‌ಐಟಿ ದಾಖಲಿಸಿದ್ದ ಪ್ರಕರಣದ ರದ್ದು ಕೋರಿ ಸೌಜನ್ಯ ಪರ ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲಗೌಡ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಾಲ್ವರ ಮೇಲೆ ಎಸ್‌ಐಟಿ ದೌರ್ಜನ್ಯ ಮಾಡಬಾರದು ಎಂದು ಸೂಚಿಸಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.

ಇದೇ ಪ್ರಕರಣದಲ್ಲಿ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ಅಂದೇ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ, ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬೆನ್ನಲ್ಲೇ, ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್‌ ಜಾರಿ ಮಾಡಿದೆ.

ಇದೆಲ್ಲದರ ನಡುವೆ, ತಿಮರೋಡಿ, ಗಿರೀಶ್, ಜಯಂತ್, ವಿಠಲಗೌಡ ಅವರ ಮೇಲೆ ದೌರ್ಜನ್ಯ ಮಾಡದಂತೆ ಹೈಕೋರ್ಟ್‌ ಆದೇಶಿಸಿದೆ.

ಇನ್ನು, ಇನ್ನು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ‘ಅಕ್ರಮವಾಗಿ ಮಾರಕಾಸ್ತ್ರ ಇಟ್ಟುಕೊಂಡಿದ್ದಾರೆ’ ಎಂಬ ಪ್ರಕರಣಕ್ಕೆ ಇತ್ತೀಚೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್ ಕಲಾಪದ ಸಾರಾಂಶ

ಹಿರಿಯ ವಕೀಲ ಎಸ್ ಬಾಲನ್: ಚಿನ್ನಯ್ಯ ವಿರುದ್ದ ಪರ್ಜುರಿ ಕೇಸ್ ಹಾಕಿ ಅದರ ಆಧಾರದ ಮೇಲೆ ಹೋರಾಟಗಾರರಿಗೆ ನೋಟಿಸ್ ಕೊಡುವುದು ಬಿಎನ್‌ಎಸ್‌ಎಸ್‌ 215(1)(ಬಿ) ಪ್ರಕಾರ ಎಸ್ಐಟಿ ಪೊಲೀಸರು ಕಾನೂನು ಉಲ್ಲಂಘಿಸಿದ್ದಾರೆ.

ಸರ್ಕಾರದ ಪರ ವಕೀಲರು: ಗಿರೀಶ್ ಮಟ್ಟೆಣ್ಣನವರ್, ತಿಮರೋಡಿ, ಜಯಂತ್, ವಿಠಲಗೌಡ ರೇ ಈ ಪ್ರಕರಣದ ಆರೋಪಿಗಳು. ಹಾಗಾಗಿ ಅವರನ್ನು ತನಿಖೆ ಮಾಡಬೇಕಿದೆ.

ಹೈಕೋರ್ಟ್: ಅವರು ಆರೋಪಿಗಳಾಗಿದ್ದರೆ ಪ್ರತ್ಯೇಕ ಎಫ್ಐಆರ್ ಮಾಡಬೇಕಿತ್ತು. ಅದರ ಬದಲು ಕಾನೂನು ಉಲ್ಲಂಘಿಸಿ ಯಾಕೆ ಎಫ್ಐಆರ್ ಮಾಡಬೇಕು?

ಹಿರಿಯ ವಕೀಲ ಬಾಲನ್: ನಾಲ್ವರು ಹೋರಾಟಗಾರರ ಹೆಸರು ಎಫ್ಐಆರ್ ನಲ್ಲಿ ಇಲ್ಲ. ಎಲ್ಲಾ ನೋಟಿಸ್ ಗೆ ಹಾಜರಾಗಿದ್ದಾರೆ. 9 ನೋಟಿಸ್ ಪೈಕಿ 9 ನೋಟಿಸ್ ಗೆ ಹಾಜರಾಗಿದ್ದಾರೆ. ಸುಮಾರು 100 ಗಂಟೆ ವಿಚಾರಣೆ ಎದುರಿಸಿದ್ದಾರೆ. ಆದರೂ ಹೋರಾಟಗಾರರನ್ನು ಆರೋಪಿ ಮಾಡಿದ್ರೆ ಹೇಗೆ ?

ಹೈಕೋರ್ಟ್: ನಾಲ್ವರು ಆರೋಪಿಗಳು ಅನ್ನೋದನ್ನು ರೆಕಾರ್ಡ್ ಮಾಡಿಕೊಳ್ಳೋದಾ?  (ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ)

ಸರ್ಕಾರದ ಪರ ವಕೀಲರು: ಎಸ್. ಈ ನಾಲ್ವರು (ಮಟ್ಟೆಣ್ಣನನವರ್, ತಿಮರೋಡಿ, ಜಯಂತ್, ವಿಠಲ ಗೌಡ) ಆರೋಪಿಗಳು. ಅವರು ಜಾಮೀನು ತಗೊಳ್ಳಲಿ

ಹೈಕೋರ್ಟ್: ನಾಲ್ವರ ಮೇಲೆ ಯಾವುದೇ ದೌರ್ಜನ್ಯ ಮಾಡಬಾರದು

ಹಿರಿಯ ವಕೀಲ ಎಸ್ ಬಾಲನ್: ಯಾಕೆ ಜಾಮೀನು ತಗೋಬೇಕು ? ಹೋರಾಟಗಾರರನ್ನು, ದೂರುದಾರರನ್ನೇ ಕಾನೂನು ಉಲ್ಲಂಘಿಸಿ ಎಫ್ಐಆರ್ ಮಾಡಿದ್ರೆ ಅದನ್ಜು ಒಪ್ಪಬೇಕಾ ? ಬಿಎನ್‌ಎಸ್‌ಎಸ್‌ 215(1)(ಬಿ) ಪ್ರಕಾರ ಇದು ಕಾನೂನು ಬಾಹಿರ

ಹೈಕೋರ್ಟ್: ಪೂರ್ತಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...